ಅಯೋಧ್ಯೆ ವಿವಾದ: 2019ರ ಜನವರಿಗೆ ವಿಚಾರಣೆ ಮುಂದೂಡಿದ ಸುಪ್ರೀಂ
Team Udayavani, Oct 29, 2018, 12:30 PM IST
ಹೊಸದಿಲ್ಲಿ : ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಸೋಮವಾರ 2019ರ ಜನವರಿ ವರೆಗೆ ಮುಂದೂಡಿದೆ.
ಜಸ್ಟಿಸ್ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ಪೀಠ “ವಿವಾದಿತ ಅಯೋಧ್ಯೆ ಭೂ ಮಾಲಕತ್ವವನ್ನು ಇತ್ಯರ್ಥಪಡಿಸುವ ವಿಚಾರಣೆಯನ್ನು ಹೊಸ ಪೀಠ ಅಥವಾ ಈಗಿನ ಪೀಠ ಆರಂಭಿಸಲಿದೆ’ ಎಂದು ಹೇಳಿತು.
ಅಯೋಧ್ಯೆ ರಾಮ ಜನ್ಮಭೂಮಿ ವಿಷಯಕ್ಕೆ ಸಂಬಂಧಿಸಿದ ಇಂದಿನ ಸುಪ್ರೀಂ ಕೋರ್ಟ್ ಕಲಾಪ ಕೇವಲ ಎರಡೇ ನಿಮಿಷಗಳಲ್ಲಿ ಮುಗಿದು ಹೋದದ್ದು ವಿಶೇಷ. 2019ರ ಜನವರಿಯಲ್ಲಿ ಅಯೋಧ್ಯೆ ಭೂ ವಿವಾದದ ವಿಚಾರಣೆಯನ್ನು ದಿನವಹಿ ನೆಲೆಯಲ್ಲಿ ನಡೆಸಲಾಗುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಸುಪ್ರೀಂ ಪೀಠ ನಿರಾಕರಿಸಿತು.
“ನಾವು ದೇವರಲ್ಲಿ ನಂಬಿಕೆ ಹೊಂದಿದ್ದೇವೆ; ನಾವು ಪ್ರಧಾನಿ ಮೋದಿ ಅವರನ್ನು ನಂಬುತ್ತೇವೆ. ರಾಮ ಮಂದಿರ ನಿರ್ಮಾಣ ಕಾರ್ಯ ಬೇಗನೆ ಆರಂಭವಾಗಬೇಕೆಂದು ನಾವು ಬಯಸುತ್ತೇವೆ; ನಾವು ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರನ್ನು ಕರೆಯುವುದಿಲ್ಲ; ದೇವರೇ ನಮ್ಮ ಸಮಸ್ಯೆಯನ್ನು ಬಗೆಹರಿಸುತ್ತಾನೆ ಎಂಬ ನಂಬಿಕೆ ನಮ್ಮಲ್ಲಿದೆ’ ಎಂಧು ರಾಮ ಜನ್ಮಭೂಮಿ ನ್ಯಾಸ್ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲ್ ದಾಸ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.