Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?

ಇಂದಿನಿಂದ 3 ದಿನಗಳ ಕಾರ್ಯಕ್ರಮ... ಹಿಂದೂ ಪಂಚಾಂಗದ ಆಧಾರದಲ್ಲಿ ವರ್ಷಾಚರಣೆ

Team Udayavani, Jan 11, 2025, 6:40 AM IST

1-ayodhya

ಅಯೋಧ್ಯೆ: ರಾಮ ಜನ್ಮಭೂಮಿಯಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿ 1 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ 3 ದಿನಗಳ ಕಾಲ ಭರ್ಜರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಡೀ ನಗರವನ್ನು ಹೂವಿನಿಂದ ಅಲಂಕರಿಸಲಾಗಿದ್ದು, ಬಾಲರಾಮನ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಸಕಲ ವ್ಯವಸ್ಥೆಯನ್ನು ರೂಪಿಸಲಾಗಿದೆ.

ಶನಿವಾರದಿಂದ ಸೋಮವಾರದವರೆಗೆ ರಾಮ ಮಂದಿರಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಲಿದ್ದು, ಶನಿವಾರ ಬೆಳಿಗ್ಗೆ 10 ಗಂಟೆಗೆ ಬಾಲ ರಾಮನ ಮೂರ್ತಿಗೆ ಅಭಿಷೇಕ ಮಾಡುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಭಿಷೇಕದ ಬಳಿಕ ಚಿನ್ನ ಮತ್ತು ಬೆಳ್ಳಿಯನ್ನು ಹೊಂದಿರುವ ಪೀತಾಂಬರದಿಂದ ರಾಮನ ಮೂರ್ತಿಗೆ ಅಲಂಕಾರ ಮಾಡಲಾಗುತ್ತದೆ. 12.20ಕ್ಕೆ ಮಹಾ ಮಂಗಳಾರತಿ ನಡೆಯಲಿದ್ದು, ಬಳಿಕ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕೊಡಲಾಗುತ್ತದೆ.
110 ಮಂದಿ ವಿಶೇಷ ಆಹ್ವಾನಿತರು: ರಾಮಮಂದಿರದ ಮೊದಲ ವಾರ್ಷಿಕೋತ್ಸವಕ್ಕೆ 110 ಮಂದಿಯನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ. ರಾಮಮಂದಿರ ಉದ್ಘಾಟನೆಯನ್ನು ತಪ್ಪಿಸಿಕೊಂಡ ವರನ್ನು ಆಹ್ವಾನಿಸಲಾಗಿದೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮುಖ್ಯಸ್ಥ ಚಂಪತ್‌ ರಾಯ್‌ ಹೇಳಿದ್ದಾರೆ. ಈ ಬಾರಿ ಸಾರ್ವಜನಿಕರಿಗೂ ಅವಕಾಶ ಒದಗಿಸಲಾಗಿದೆ. ಅಂಗದ್‌ ತಿಲಾ ಬಳಿ 5,000 ಮಂದಿ ಕೂರಬಹುದಾದಷ್ಟು ದೊಡ್ಡ ಪೆಂಡಾಲ್‌ ನಿರ್ಮಾಣ ಮಾಡಲಾಗಿದೆ. ಇದಲ್ಲದೇ ಯಾಗ ಮಂಟಪಗಳಲ್ಲಿ ನಿರಂತವಾಗಿ ನಡೆಯುವ ಹೋಮ, ಹವನಗಳನ್ನು ನೋಡಲು ಸಹ ಅವಕಾಶ ಒದಗಿಸಲಾಗಿದೆ.

ಪ್ರತಿನಿತ್ಯ ರಾಮಕಥೆ

ವಿಶೇಷ ಕಾರ್ಯಕ್ರಮ ನಡೆಯುವ 3 ದಿನವೂ ರಾಮಕಥಾ ಪಠಣೆ ನಡೆಯಲಿದೆ. ಇದಾದ ಬಳಿಕ ರಾಮಚರಿತ ಮಾನಸ ಸೇರಿದಂತೆ ರಾಮಾಯಣದ ಇತರ ಕಥೆಗಳನ್ನು ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾಮಕಥಾ ಪಠಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು 3 ದಿನಗಳ ಕಾಲವೂ ನಿರಂತರವಾಗಿ ನಡೆಯಹುತ್ತದೆ. ಅಲ್ಲದೇ ಪ್ರತಿ ನಿತ್ಯ ದೇಗುಲಕ್ಕೆ ಆಗಮಿಸುವವರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

ಪಂಚಾಂಗದಂತೆ ಇಂದು ಕಾರ್ಯಕ್ರಮ
ಕಳೆದ ವರ್ಷ ಜ.22ರಂದು ರಾಮಮಂದಿರವನ್ನು ಉದ್ಘಾಟನೆ ಮಾಡಲಾಗಿತ್ತು. ಆದರೆ ಹಿಂದೂ ಪಂಚಾಂಗದ ಪ್ರಕಾರ ಪುಷ್ಯ ಮಾಸದ ಶುಕ್ಲ ದ್ವಾದಶಿಯ ದಿನ ಬಾಲ ರಾಮನನ್ನು ಪ್ರತಿಷ್ಠಾಪಿಸ ಲಾಗಿತ್ತು. ಈ ವರ್ಷ ಜ.11ರಂದು ಈ ತಿಥಿ ಬಂದಿರುವ ಕಾರಣ ಜ.22ರ ಬದಲಿಗೆ ಜ.11ರಂದು ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ.

ಹೇಗಿರಲಿದೆ ಕಾರ್ಯಕ್ರಮ?
ಬಾಲ ರಾಮನ ಮೂರ್ತಿಗೆ ಯೋಗಿ ಅಭಿಷೇಕ
ಬಳಿಕ ಮೂರ್ತಿಗೆ ಪಂಡಿತರಿಂದ ಪೂಜೆ, ಅಲಂಕಾರ
ಚಿನ್ನ, ಬೆಳ್ಳಿ ಹೊಂದಿರುವ ಪೀತಾಂಬರದಿಂದ ಅಲಂಕಾರ
3 ದಿನವೂ ಮಧ್ಯಾಹ್ನ 2 ಗಂಟೆಗೆ ರಾಮಕಥಾ ಪಠಣೆ
ಇದಾದ ಬಳಿಕ ಪ್ರತಿನಿತ್ಯವೂ ಸಾಂಸ್ಕೃತಿ ಕಾರ್ಯಕ್ರಮ
ದೇವಸ್ಥಾನಕ್ಕೆ ಭೇಟಿ ನೀಡುವ ಎಲ್ಲರಿಗೂ ಪ್ರಸಾದ ವಿತರಣೆ
ಯಾಗ ಮಂಟಪಗಳಲ್ಲಿ ವಿಶೇಷ ಪೂಜೆ, ಹೋಮ, ಹವನ

ಲತಾ ಮಂಗೇಶ್ಕರ್‌ ಕೊನೇ ಹಾಡು ಇಂದು ಪ್ರಸಾರ
ವಾರ್ಷಿಕೋತ್ಸವ ಸಮಾರಂಭದಲ್ಲಿ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರ ಕೊನೇ ಹಾಡನ್ನು ಪ್ರಸಾರ ಮಾಡಲಾಗುತ್ತಿದೆ. ಇದು ಗಾಯಕಿಯ ಕೊನೇ ಆಸೆ­ಯಾ­ಗಿತ್ತು ಎಂದು ಮೂಲಗಳು ತಿಳಿಸಿವೆ. 2022ರಲ್ಲಿ ಲತಾ ಅವರು ಮರಣ ಹೊಂದುವುದಕ್ಕೆ 8 ತಿಂಗಳ ಮೊದಲು ಈ ಹಾಡನ್ನು ರೆಕಾರ್ಡ್‌ ಮಾಡಿದ್ದರು.

ಮಂದಿರ ಸಂಕೀರ್ಣದಲ್ಲಿರುವ ದೇಗುಲಗಳ ನಿರ್ಮಾಣಕ್ಕೆ ವೇಗ
ಅಯೋಧ್ಯೆಯ ರಾಮಮಂದಿರ ಸಂಕೀರ್ಣದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಇತರ ದೇವಸ್ಥಾನ­ಗಳ ನಿರ್ಮಾಣ ಕಾರ್ಯ ಅತ್ಯಂತ ವೇಗವಾಗಿ ಸಾಗು­ತ್ತಿದೆ. 6 ಮಂದಿ ಹಿಂದೂ ಸಂತರ ದೇವಸ್ಥಾನಗಳನ್ನು ದೇವಸ್ಥಾನದ ಸುತ್ತ ನಿರ್ಮಾಣ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

Farmer

PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.