ಅಯೋಧ್ಯೆ: ಜನಜಾಗೃತಿಗೆ ಧರ್ಮಗುರುಗಳ ಸಂಕಲ್ಪ

ದೋವಲ್‌ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ಪೇಜಾವರ ಶ್ರೀ, ನಿರ್ಮಲಾನಂದನಾಥ ಶ್ರೀ ಭಾಗಿ

Team Udayavani, Nov 11, 2019, 5:30 AM IST

1-1-10111-PTI11_10_2019_000080B

ಹೊಸದಿಲ್ಲಿ: ಅಯೋಧ್ಯೆ ಜಮೀನು ಮಾಲಕತ್ವಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಅನಂತರ ಜನರಲ್ಲಿ ಜನ ಜಾಗೃತಿ ಮೂಡಿಸಿ ದೇಶದಲ್ಲಿ ಶಾಂತಿ, ಸೌಹಾರ್ದ ಕಾಪಾಡಲು ಹಿಂದೂ ಮತ್ತು ಮುಸ್ಲಿಂ ಧರ್ಮಗುರುಗಳು ರವಿವಾರ ಸಂಕಲ್ಪ ಮಾಡಿದರು.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್‌ ಅವರು ಭಾರತದ ವಿವಿಧ ಮಠಾಧೀಶರ ಹಾಗೂ ಧಾರ್ಮಿಕ ಮುಖಂಡರ ಜತೆಗೆ ರವಿವಾರ ದಿಲ್ಲಿಯಲ್ಲಿನ ತನ್ನ ನಿವಾಸದಲ್ಲಿ ಸಭೆ ನಡೆಸಿದರು. ಉಡುಪಿ ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ, ಯೋಗಗುರು ಬಾಬಾ ರಾಮದೇವ್‌ ಹಾಗೂ ಮುಸ್ಲಿಂ ಧರ್ಮದ ಪ್ರಮುಖರು ಭಾಗವಹಿಸಿದ್ದರು.

ಸಭೆಯಲ್ಲಿ ಪ್ರಮುಖವಾಗಿ, ರಾಮ ಜನ್ಮಭೂಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ಅನಂತರ, ಮುಂದೆ ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸ ಲಾಯಿತು. ದೇಶದ ಒಳಗೆ ಹಾಗೂ ಹೊರಗೆ ಇರುವ ಕೆಲವು ರಾಷ್ಟ್ರವಿರೋಧಿ ಶಕ್ತಿಗಳು ಭಾರತೀಯ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಆತಂಕ ಎದ್ದಿದ್ದು, ಆ ಹಿನ್ನೆಲೆಯಲ್ಲಿ ಕೋಮು ಸೌಹಾರ್ದ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಧಾರ್ಮಿಕ ಮುಖಂಡರ ನೆರವನ್ನು ಕೋರಲಾಯಿತು. ಡಿಜಿಟಲ್‌ ಮಾಧ್ಯಮಗಳ ಮೂಲಕ ಸಮಾಜವನ್ನು ಒಡೆಯುವಂಥ ಕೆಲಸಗಳು ನಡೆಯಬಹುದು ಎಂಬ ಬಗ್ಗೆ ಮಠಾಧೀಶರ ಗಮನ ಸೆಳೆದ ದೋವಲ್‌, ಅಂಥ ಯಾವುದೇ ಪ್ರಯತ್ನಗಳು ಸಫ‌ಲವಾಗದಂತೆ ಸಮಾಜದಲ್ಲಿ ಜನಜಾಗೃತಿ ಮೂಡಿಸಬೇಕು ಎಂದು ಮಠಾಧೀಶರಲ್ಲಿ ವಿನಂತಿಸಿಕೊಂಡರು ಎಂದು ಸಭೆಯ ಅನಂತರ ಹೊರಡಿಸಲಾದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ದೋವಲ್‌ ಮನವಿಗೆ ಸ್ಪಂದಿಸಿದ ಧಾರ್ಮಿಕ ಮುಖಂಡರು, ತಮ್ಮ ಅನುಯಾಯಿಗಳ ಮೂಲಕ ಸಮಾಜದಲ್ಲಿ ಜನಜಾಗೃತಿಯನ್ನು ಮೂಡಿಸಿ, ಯಾವುದೇ ಬಾಹ್ಯಶಕ್ತಿಗಳಿಂದ ಸಮಾಜ ಒಡೆಯದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು ಎಂದು ಪ್ರಕಟನೆಯಲ್ಲಿ ಹೇಳಲಾಗಿದೆ.

ವಿವಿಧ ಮತ ಧರ್ಮಗಳಲ್ಲಿ ಭಿನ್ನತೆ ಇದ್ದರೂ ಸಾಮ್ಯಗಳೂ ಇವೆ. ನಾವು ಪರಧರ್ಮ ಸಹಿಷ್ಣುಗಳು. ಅಯೋಧ್ಯೆ ಕುರಿತು ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಎಲ್ಲರೂ ಗೌರವಿಸಿದ್ದಾರೆ. ಇದು ವಿಶ್ವ ಕಲ್ಯಾಣ ಮತ್ತು ರಾಷ್ಟ್ರದ ಪ್ರಗತಿಗೆ ಕಾರಣವಾಗಬೇಕು. ಮುಂದಿನ ಎಲ್ಲ ಕೆಲಸಗಳಿಗೆ ಸಮನ್ವಯ ಸಮಿತಿ ರಚನೆಯಾಗಬೇಕು
– ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ, ಪೇಜಾವರ ಮಠ

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

9

Kasturi Shankar: ನಟಿ ಕಸ್ತೂರಿ ಶಂಕರ್‌ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ  

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.