Ayodhya; ಅಯೋಧ್ಯೆಯಲ್ಲಿ ಭದ್ರತೆ ಹೆಚ್ಚಳ: ಕಾಮಗಾರಿಯಲ್ಲಿ ಯಾವುದೇ ತರಾತುರಿಯಿಲ್ಲ
ಅಯೋಧ್ಯೆಗೆ ಅಂತಾರಾಷ್ಟ್ರೀಯ ವಿಮಾನಗಳನ್ನು ತರುವ ಬಗ್ಗೆ ಪ್ರಧಾನಿ ಚಿಂತನೆ : ಸಚಿವೆ ಶೋಭಾ
Team Udayavani, Dec 28, 2023, 4:50 PM IST
ಅಯೋಧ್ಯೆ : ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಅಯೋಧ್ಯೆ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಅಯೋಧ್ಯೆಗೆ ಅಂತಾರಾಷ್ಟ್ರೀಯ ವಿಮಾನಗಳನ್ನು ತರುವ ಬಗ್ಗೆಯೂ ಪ್ರಧಾನಿ ಚಿಂತನೆ ನಡೆಸುತ್ತಿದ್ದಾರೆ” ಎಂದು ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಗುರುವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸರಕಾರ ಡಿಸೆಂಬರ್ 30 ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಗೆ ಮೂರು ಲಕ್ಷ ಜನರನ್ನು ಸೇರಿಸುವ ಮೂಲಕ ಅದ್ಧೂರಿ ಸ್ವಾಗತ ನೀಡಲು ಸಿದ್ಧತೆಗಳನ್ನು ನಡೆಸಿದೆ. ಪ್ರಧಾನಿ ಮತ್ತು ಸಿಎಂ ಯೋಗಿ ಅವರು 15 ಕಿಮೀ ಉದ್ದದ ರೋಡ್‌ಶೋ ನಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ವಿಮಾನ ನಿಲ್ದಾಣದ ಬಳಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಯಾವುದೇ ತರಾತುರಿಯಲ್ಲ
ಅಯೋಧ್ಯೆ ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ”ಯಾವುದೇ ಕಾಮಗಾರಿ ತರಾತುರಿಯಲ್ಲಿ ನಡೆಯುವುದಿಲ್ಲ, ಗುಣಮಟ್ಟಕ್ಕೆ ಅನುಗುಣವಾಗಿ ನಡೆಯುತ್ತದೆ, ಆಗಬೇಕಾದ ಕೆಲಸ ನಡೆಯುತ್ತಿದೆ.3 ಹಂತಗಳಲ್ಲಿ ನಿರ್ಮಾಣ ಕಾಮಗಾರಿಯನ್ನು ಇರಿಸಲಾಗಿದೆ. 1 ನೇ ಹಂತವು ಡಿಸೆಂಬರ್ 2023 ರವರೆಗೆ, 2024 ರಲ್ಲಿ 2 ನೇ ಹಂತ ಮತ್ತು 3 ನೇ ಹಂತದಲ್ಲಿ ದೇವಾಲಯದ ಸಂಪೂರ್ಣ ನಿರ್ಮಾಣ ಮತ್ತು ದೇವಾಲಯದ ಸುತ್ತಮುತ್ತಲಿನ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ನೃಪೇಂದ್ರ ಮಿಶ್ರಾ ಅವರು ರಾಮಮಂದಿರ ಆವರಣದಲ್ಲಿ ನಿರ್ಮಾಣ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.