ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನೂ ನಾಮಪತ್ರ ಸಲ್ಲಿಸಿದ್ದೆ!
Team Udayavani, Dec 8, 2017, 11:26 AM IST
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದು ಎಂದು ಆ ಪಕ್ಷದ ನಾಯಕರು ಹೇಳಿಕೊಂಡಿದ್ದರೂ ಅದು ಸತ್ಯವಲ್ಲ ಎಂದು ಅದೇ ಪಕ್ಷದ ನಾಯಕರೊಬ್ಬರು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ನಾನೂ ನಾಮಪತ್ರ ಸಲ್ಲಿಸಿದ್ದೆ. ಆದರೆ ಅದನ್ನು ತಿರಸ್ಕರಿಸಲಾಗಿದೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ನ ನಾಯಕ ಅಯೂಬ್ ಅಲಿ ಆರೋಪಿಸಿದ್ದಾರೆ. ಈ ಬಗ್ಗೆ “ಟೈಮ್ಸ್ ನೌ’ ಸುದ್ದಿವಾಹಿನಿ ವರದಿ ಮಾಡಿದೆ. ಅಲ್ಲದೆ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯನ್ನು ರಾಹುಲ್ ಗಾಂಧಿಗಾಗಿ ಬದಲು ಮಾಡಲಾಗಿದೆ ಎಂದು ದೂರಿದ್ದಾರೆ. ಪಕ್ಷದ ವಕ್ತಾರ ಮನೀಶ್ ತಿವಾರಿ ಜತೆಗಿನ ಮಾತುಕತೆ ವೇಳೆ “ದೇಶದ ಉಳಿದ ರಾಜಕೀಯ ಪಕ್ಷಗಳಂತೆ ಕಾಂಗ್ರೆಸ್ ಕೂಡ ನಿಗದಿತ ಕುಟುಂಬದ ಮಾಲಕತ್ವ ಹೊಂದಿದೆ’ ಎಂದಿದ್ದಾರೆ ಅಲಿ.
ಗುಜರಾತ್ ಚುನಾವಣೆ ಫಲಿತಾಂಶ ಪ್ರಕಟವಾಗುವುದಕ್ಕೆ ಮೂರು ದಿನಗಳ ಮೊದಲು ಅಂದರೆ ಡಿ.15ರಂದು ರಾಹುಲ್ ಕಾಂಗ್ರೆಸ್ ಅಧ್ಯಕ್ಷ ಎಂದು ಘೋಷಣೆ ಮಾಡಲಾಗು ತ್ತದೆ. ಅದಕ್ಕೆ ಮುನ್ನವೇ ಈ ಬೆಳವಣಿಗೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.