Ayushman Bharat: ಈಗ 5 ಲಕ್ಷ ಟಾಪ್‌ಅಪ್‌!


Team Udayavani, Oct 30, 2024, 6:58 AM IST

Ayushman Bharat: Now 5 lakh top up!

ನವದೆಹಲಿ: ದೇಶದಲ್ಲಿನ 70 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟವರಿಗೆ ಉತ್ತಮ ಆರೋಗ್ಯ ನೀಡುವ ನಿಟ್ಟಿನಲ್ಲಿ “ಆಯುಷ್ಮಾನ್‌ ಭಾರತ್‌-ಪ್ರಧಾನಮಂತ್ರಿ ಜನ್‌ ಆರೋಗ್ಯ ಯೋಜನೆ’ ವಿಸ್ತರಿಸಲಾಗಿದೆ. ಅದರ ಅನ್ವಯ ಆಯುಷ್ಮಾನ್‌ ಕಾರ್ಡ್‌ ಹೊಂದಿರುವ ದೇಶದ ಎಲ್ಲಾ 70 ವರ್ಷ ಮೇಲ್ಪಟ್ಟ ನಾಗರಿಕರೂ ವರ್ಷಕ್ಕೆ 5ಲಕ್ಷ ರೂ.ವರೆಗಿನ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

ಈ ಹಿಂದೆ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ.ಗಳ ವಿಮೆ ನೀಡಲಾಗುತ್ತಿತ್ತು. ಇದೀಗ ಪ್ರತ್ಯೇಕವಾಗಿ ಕುಟುಂಬದಲ್ಲಿರುವ ಹಿರಿಯ ನಾಗರಿಕರಿಗೆಂದೇ 5 ಲಕ್ಷ ರೂ.ಗಳ ಹೆಚ್ಚುವರಿ ವಿಮೆ ನೀಡಲಾಗುತ್ತಿದೆ. ಇದರ ಅನ್ವಯ ಆಯುಷ್ಮಾನ್‌ ಭಾರತ್‌ ಕಾರ್ಡ್‌ ಹೊಂದಿರುವ ಕುಟುಂಬಗಳಲ್ಲಿ 70 ವರ್ಷ ಮೇಲ್ಪಟ್ಟ ನಾಗರಿಕರು ಇದ್ದರೆ ಅವರ ವಿಮಾ ಖಾತೆಗೆ ವರ್ಷಕ್ಕೆ 5 ಲಕ್ಷ ರೂ.ಗಳ ಹೆಚ್ಚುವರಿ ಟಾಪ್‌ ಅಪ್‌ ಜಮೆಯಾಗಲಿದೆ.  ಈ 5 ಲಕ್ಷ ರೂ. ಬರೀ 70 ವರ್ಷ ಮೇಲ್ಪಟ್ಟ ಆ ಹಿರಿಯ ನಾಗರಿಕರಿಗೆ ಮಾತ್ರ ಸಂಬಂಧಿಸಿದಾªಗಿದ್ದು, ಕುಟುಂಬದ  ಬೇರೆ ಯಾರೊಂದಿಗೂ ಹಂಚಿಕೊಳ್ಳಲು ಸಾಧ್ಯವಾಗುವುದಿಲ್ಲ.

ಒಂದು ವೇಳೆ ಕಾರ್ಡ್‌ ಹೊಂದಿಲ್ಲದಿದ್ದರೆ ಅಂಥ ಹಿರಿಯನಾಗರಿಕರು ಈಗ ನೋಂದಾಯಿಸಿಕೊಂಡು ಕಾರ್ಡ್‌ ಪಡೆವ ಮೂಲಕ ಸೌಲಭ್ಯದ ಸದುಪಯೋಗ ಪಡೆಯಬಹುದಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಆರೋಗ್ಯ ವಿಮೆ (ಸಿಜಿಎಚ್‌ಎಸ್‌), ನಿವೃತ್ತ ಸೈನಿಕರ ಕೊಡುಗೆ ಆರೋಗ್ಯ ವಿಮೆ (ಇಸಿಎಚ್‌ಎಸ್‌)ರೀತಿಯ ಸಾರ್ವಜನಿಕ ಆರೋಗ್ಯ ಸೌಲಭ್ಯ ಯೋಜನೆಗಳ ಫ‌ಲಾನುಭವಿಗಳಾಗಿರುವ ನಾಗರಿಕರು ಅವುಗಳಲ್ಲೇ ಮುಂದುವರಿಯಬಹುದು ಅಥವಾ ಆಯುಷ್ಮಾನ್‌ ಯೋಜನೆಯನ್ನು ಆಯ್ದುಕೊಳ್ಳಬಹುದಾಗಿದೆ.

ಪ.ಬಂಗಾಳ, ದಿಲ್ಲಿ ಸರ್ಕಾರದ ಸ್ವಾರ್ಥಕ್ಕೆ ಜನ ಹಿತಾಸಕ್ತಿ ಮೂಲೆಗುಂಪು: ಮೋದಿ

ಯೋಜನೆ ವಿಸ್ತರಣೆ ಬಳಿಕ ಮಾತನಾಡಿದ ಪ್ರಧಾನಿ ಪಶ್ಚಿಮ ಬಂಗಾಳ ಮತ್ತು ದಿಲ್ಲಿಯಲ್ಲಿರುವ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಬಳಿ ಕ್ಷಮೆಯಾಚಿಸಿದ್ದಾರೆ. “ದೆಹಲಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ರಾಜಕೀಯ ಕಾರಣಗಳಿಗಾಗಿ ಆಯುಷ್ಮಾನ್‌ ಭಾರತ ಯೋಜನೆ ಜಾರಿ ಮಾಡುತ್ತಿಲ್ಲ. ಅದಕ್ಕಾಗಿ ಕ್ಷಮೆ ಯಾಚಿಸುತ್ತೇನೆ.  ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಆಯುಷ್ಮಾನ್‌ ಯೋಜನೆ ಜಾರಿ ತಡೆಹಿಡಿದಿವೆ. ” ಎಂದು ಪ್ರಧಾನಿ ಆರೋಪಿಸಿದ್ದಾರೆ.

ಕರ್ನಾಟಕದ 2 ಇಎಸ್‌ಐ ಆಸ್ಪತ್ರೆಗೆ ಶಂಕುಸ್ಥಾಪನೆ

ದೇಶಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ 21 ಕ್ರಿಟಕಲ್‌ ಕೇರ್‌ ಬ್ಲಾಕ್‌ ಸ್ಥಾಪನೆಗೆ ಪ್ರಧಾನಿ ಶಿಲಾನ್ಯಾಸ ನೆರವೇರಿಸಿದ್ದು, ಈ ಪೈಕಿ ಕರ್ನಾಟಕದ ಆಸ್ಪತ್ರೆಗಳೂ ಸೇರಿವೆ. ಇದಲ್ಲದೆ, ರಾಜ್ಯದ ಬೊಮ್ಮಸಂದ್ರ ಮತ್ತು ನರಸಾಪುರದಲ್ಲಿ ಇಎಸ್‌ಐ ಆಸ್ಪತ್ರೆಗಳ ಸ್ಥಾಪನೆಗೂ ಪ್ರಧಾನಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಜತೆಗೆ ಮೇಕ್‌ ಇನ್‌ ಇಂಡಿಯಾ ಉಪಕ್ರಮದ ಅನ್ವಯ ವೈದ್ಯಕೀಯ ಉಪಕರಣ ಮತ್ತು ಔಷಧಗಳ ಉತ್ಪಾದನೆಗೆ ಉತ್ತೇಜನ ನೀಡಲು ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೊಳಿಸುವ ಯೋಜನೆಯನ್ನೂ ಪ್ರಧಾನಿ ಉದ್ಘಾಟಿಸಿದ್ದಾರೆ.

ಬೆಂಗ್ಳೂರಲ್ಲಿ ಎಕ್ಸಲೆನ್ಸ್‌ ಸೆಂಟರ್‌ ಉದ್ಘಾಟನೆ

ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ (ಐಐಎಸ್‌ಸಿ) ನಲ್ಲಿ ಆಯುಷ್‌ ಸಚಿವಾಲಯ ಪ್ರಾಯೋಜಿತವಾದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಇನ್‌ ಆಯುರ್ವೇದ ಫಾರ್‌ ಡಯಾಬಿಟಿಸ್‌ ಆ್ಯಂಟ್‌ ಮೆಟಾಬಾಲಿಕ್‌ ಡಿಸಾರ್ಡರ್‌ (ಸಿಒಇ)ಎಂಬ ಕೇಂದ್ರವನ್ನೂ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.

51000 ಮಂದಿಗೆ ನೇಮಕಾತಿ ಪತ್ರ ಕೊಟ್ಟ ಮೋದಿ

51000 ಕ್ಕೂ ಅಧಿಕ ಮಂದಿಗೆ ಸರ್ಕಾರಿ ಉದ್ಯೋಗಗಳ ನೇಮಕಾತಿ ಪತ್ರವನ್ನು ಪ್ರಧಾನಿ ಮೋದಿ ಮಂಗಳವಾರ ನಡೆದ ರೋಜ್‌ಗಾರ್‌ ಮೇಳದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿತರಿಸಿದ್ದಾರೆ. ಈ ವೇಳೆ ಮಾತನಾಡಿ, ನಮ್ಮ ದೇಶದಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲು ಸಾಧ್ಯವಿಲ್ಲ ಎಂದು ನಂಬುವ ಮನಸ್ಥಿತಿಗಳು ಅಸ್ತಿತ್ವದಲ್ಲಿವೆ. ಆದರೆ, ನಮ್ಮ ಸರ್ಕಾರ ಅವುಗಳನ್ನು ಹಿಮ್ಮೆಟ್ಟಿ ಯುವಜನರಿಗೆ ಪ್ರೋತ್ಸಾಹ ನೀಡಿದೆ. ಗರಿಷ್ಠ ಸಂಖ್ಯೆಯ ಯುವಜನರಿಗೆ ಉದ್ಯೋಗ ಒದಗಿಸುವುದು ನಮ್ಮ ಬದ್ಧತೆಯಾಗಿದ್ದು, ಇದಕ್ಕೆ ಪೂರಕವಾದ ವ್ಯವಸ್ಥೆ ರಚಿಸಲಾಗುತ್ತಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.