‘ಆಯುಷ್ಮಾನ್ ಭಾರತ್’ ಮೊಬೈಲ್ ಆ್ಯಪ್ ಬಿಡುಗಡೆ
Team Udayavani, Feb 6, 2019, 3:56 AM IST
ನವದೆಹಲಿ: ಬಡ ಮತ್ತು ಮಧ್ಯಮ ವರ್ಗದ ಸಮುದಾಯಕ್ಕೆ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ‘ಆಯುಷ್ಮಾನ್ ಭಾರತ’ ಯೋಜನೆಯ ಮೊಬೈಲ್ ಅಪ್ಲಿಕೇಷನ್ ಇದೀಗ ಬಿಡುಗಡೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಇದಾಗಿದ್ದು, ಇದರಿಂದ ದೇಶದ ದೊಡ್ಡ ವರ್ಗಕ್ಕೆ ಉತ್ತಮ ಆರೋಗ್ಯ ಸೇವೆಗಳು ಲಭ್ಯವಾಗುತ್ತಿದೆ. ಇದೀಗ ಈ ಯೋಜನೆಗೆ ಸಂಬಂಧಿಸಿದ ಮೊಬೈಲ್ ಅಪ್ಲಿಕೇಷನ್ ಅನ್ನು ಕೇಂದ್ರ ಸರಕಾರ ಬಿಡುಗಡೆಗೊಳಿಸಿದೆ. ಈ ಆ್ಯಪ್ ಮೂಲಕ ಫಲಾನುಭವಿಗಳು ಯೋಜನೆಗೆ ಸಂಬಂಧಿಸಿದ ಮಾಹಿತಿಗಳನ್ನು ಇದೀಗ ಬೆರಳ ತುದಿಯಲ್ಲೇ ಪಡೆದುಕೊಳ್ಳಬಹುದಾಗಿದೆ.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಂದು ಭೂಷಣ್ ಅವರು ಈ ಅಪ್ಲಿಕೇಷನ್ ಅನ್ನು ಬಿಡುಗಡೆಗೊಳಿಸಿದರು. ಈ ಯೋಜನೆಯಡಿಯಲ್ಲಿ ನೋಂದಣಿಯಾಗಿರುವ ಆಸ್ಪತ್ರೆಗಳು, ಯೋಜನೆಗೆ ನೋಂದಣಿಯಾಗುವ ರೀತಿ, ಯೋಜನೆಗೆ ಬಳಸಲಾಗುತ್ತಿರುವ ಮೊತ್ತ ಇತ್ಯಾದಿ ವಿವರಗಳು ಈ ಅಪ್ಲಿಕೇಷನ್ ನಲ್ಲಿ ಲಭ್ಯವಿದೆ. ಪಿಎಂ – ಜೆಎವೈ ಯೋಜನೆಯನ್ನು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ನೋಡಿಕೊಳ್ಳುತ್ತಿದ್ದು ಮೊಬೈಲ್ ಆ್ಯಪ್ ನಿರ್ವಹಣೆಯ ಹೊಣೆಯನ್ನೂ ಸಹ ಪ್ರಾಧಿಕಾರವೇ ವಹಿಸಿಕೊಂಡಿದೆ. ಗೂಗಲ್ ಪ್ಲೇ ಸ್ಟೋರ್ ನಲ್ಲಿ ಈ ಅ್ಯಪ್ ಇದೀಗ ಡೌನ್ ಲೋಡ್ ಗೆ ಲಭ್ಯವಿದೆ. ಫಲಾನುಭವಿಗಳು ಈ ಆ್ಯಪ್ ನಲ್ಲಿ ತಮ್ಮ ಹೆಸರು, ಗ್ರಾಮ ಮತ್ತು ಗುರುತಿನ ದಾಖಲೆಗಳನ್ನು ನಮೂದಿಸುವ ಮೂಲಕ ತಮ್ಮ ತಮ್ಮ ಸ್ಥಳದಲ್ಲಿ ಈ ಯೋಜನೆಯ ಲಭ್ಯತೆಯ ವಿವರಗಳನ್ನು ಪಡೆದುಕೊಳ್ಳಬಹುದಾಗಿರುತ್ತದೆ.
ಕಳೆದ ಕೆಲವು ದಿನಗಳಿಂದ ಈ ಅಪ್ಲಿಕೇಶನ್ ಪರಿಕ್ಷಾ ಹಂತದಲ್ಲಿತ್ತು ಮತ್ತು ಈಗಾಗಲೇ 10,460 ಡೌನ್ ಲೋಡ್ ಗಳನ್ನು ದಾಖಲಿಸಿಕೊಂಡಿದೆ ಮತ್ತು ಸದ್ಯದಲ್ಲೇ ಡೌನ್ ಲೋಡ್ ಸಂಖ್ಯೆ ಲಕ್ಷ ದಾಟುವ ನಿರೀಕ್ಷೆಯಿದೆ ಎಂದು ಭೂಷಣ್ ಅವರು ತಿಳಿಸಿದ್ದಾರೆ. ಆಯುಷ್ಮಾನ್ ಭಾರತ ಯೋಜನೆಯಡಿಯಲ್ಲಿ ಈಗಾಗಲೇ 10,80,183 ರೋಗಿಗಳು ನೋಂದಾಯಿಸಿಕೊಂಡಿದ್ದಾರೆ. ರೂ. 1041.3 ಕೋಟಿ ಕ್ಲೇಮುಗಳು ಸಲ್ಲಿಕೆಯಾಗಿದೆ ಮತ್ತು ಇದರಲ್ಲಿ ರೂ. 808.2 ಕೋಟಿ ರೂಪಾಯಿಗಳನ್ನು ಅಂಗೀಕರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ 60,328 ಆಸ್ಪತ್ರೆಗಳು ಈ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಜಿ ಸಲ್ಲಿಸಿದ್ದು ಇವುಗಳಲ್ಲಿ 14, 756 ಆಸ್ಪತ್ರೆಗಳ ಅರ್ಜಿಯನ್ನು ಮಾನ್ಯ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.