ಅಜಂ ಖಾನ್ ವಿರುದ್ಧ ಸಿಡಿದೆದ್ದ ಸಂಸದೆಯರು
Team Udayavani, Jul 27, 2019, 5:00 AM IST
ಹೊಸದಿಲ್ಲಿ: ಬಿಜೆಪಿ ಸದಸ್ಯೆ ರಮಾದೇವಿ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ವಿರುದ್ಧ ಲೋಕಸಭೆಯಲ್ಲಿ ಮಹಿಳಾ ಸಂಸದರು ಸಿಡಿದೆದ್ದಿದ್ದಾರೆ. ಪಕ್ಷಭೇದ ಮರೆತು ಖಾನ್ ಹೇಳಿಕೆಯನ್ನು ಖಂಡಿಸಿರುವ ಸಂಸದೆಯರು, ಅಜಂ ಖಾನ್ ಕೂಡಲೇ ಕ್ಷಮೆ ಯಾಚಿಸಬೇಕು ಅಥವಾ ಅವರನ್ನು ಸದನದಿಂದ ಅಮಾನತು ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಕೊನೆಗೆ, ಕ್ಷಮೆ ಕೇಳುವಂತೆ ಸ್ಪೀಕರ್ ಅವರೇ ಅಜಂ ಖಾನ್‌ಗೆ ಸೂಚಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ನುಡಿದಿದ್ದು, ವಿವಾದವನ್ನು ತಣ್ಣಗಾಗಿಸಿದ್ದಾರೆ. ಗುರುವಾರ ತ್ರಿವಳಿ ತಲಾಖ್ ಮಸೂದೆ ಕುರಿತ ಚರ್ಚೆ ವೇಳೆ ಸ್ಪೀಕರ್ ಪೀಠದಲ್ಲಿದ್ದ ರಮಾದೇವಿ ಅವರನ್ನು ಉದ್ದೇಶಿಸಿ ಅಜಂ ಖಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಶುಕ್ರವಾರ ಶೂನ್ಯ ವೇಳೆಯಲ್ಲಿ ಬಿಜೆಪಿಯ ಸಂಘಮಿತ್ರ ಮೌರ್ಯ ಅವರು ಈ ವಿಚಾರವನ್ನೆತ್ತಿದ್ದು, ಇದಕ್ಕೆ ಕಾಂಗ್ರೆಸ್, ಎನ್‌ಸಿಪಿ, ಟಿಎಂಸಿ, ಡಿಎಂಕೆ, ಬಿಜೆಡಿ ಸಂಸದೆಯರು ಕೂಡ ಧ್ವನಿಗೂಡಿಸಿ, ಖಾನ್‌ಗೆ ಕಠಿನ ಸಂದೇಶ ಕಳುಹಿಸಬೇಕಾದ ಅಗತ್ಯವಿದೆ ಎಂದು ಆಗ್ರಹಿಸಿದರು. ಸಚಿವರಾದ ಸ್ಮತಿ ಇರಾನಿ, ನಿರ್ಮಲಾ ಸೀತಾರಾಮನ್ ಕೂಡ ಖಾನ್ ವಿರುದ್ಧ ಕಿಡಿಕಾರಿದರು. ಬಿಎಸ್ಪಿ ನಾಯಕಿ ಮಾಯಾವತಿ ಅವರೂ ಖಾನ್ ಹೇಳಿಕೆ ಖಂಡಿಸಿದ್ದು, ಅವರು ಸದನದಲ್ಲಷ್ಟೇ ಅಲ್ಲ, ಇಡೀ ಮಹಿಳಾ ಲೋಕಕ್ಕೇ ಕ್ಷಮೆ ಕೇಳಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.