ಆಜಂ ಖಾನ್ ಕ್ಷಮೆ ಸಾಲದು
Team Udayavani, Jul 28, 2019, 5:31 AM IST
ನವದೆಹಲಿ: ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಕ್ಷಮೆ ಕೋರಿದರೂ, ನಾನು ಅವರನ್ನು ಕ್ಷಮಿಸುವುದಿಲ್ಲ. ಹೀಗೆಂದು ಬಿಜೆಪಿ ಸಂಸದೆ, ಡೆಪ್ಯುಟಿ ಸ್ಪೀಕರ್ ರಮಾ ದೇವಿ ಹೇಳಿದ್ದಾರೆ. ‘ಅವರು ಆಕ್ಷೇಪಾರ್ಹ ಮಾತುಗಳನ್ನು ಆಡಿದಾಗ ಸ್ಪೀಕರ್ ಅನುಪಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೆ. ಆ ಹುದ್ದೆಯನ್ನು ಎಲ್ಲರೂ ನಿಷ್ಪಕ್ಷವಾಗಿ ನೋಡುತ್ತಾರೆ. ನಾನೂ ಎಲ್ಲರನ್ನೂ ಅದೇ ದೃಷ್ಟಿಕೋನದಿಂದ ಪರಿಗಣಿಸಿದ್ದೆ. ಖಾನ್ ನೇರವಾಗಿ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಪೀಕರ್‌ರನ್ನು ಉದ್ದೇಶಿಸಿ ಮಾತನಾಡುವಂತೆ ಹೇಳಿದೆ. ಆದರೆ ಅವರು ಆಕ್ಷೇಪಾರ್ಹ ಪದಗಳ ಬಳಕೆ ಮಾಡಿದರು’ ಎಂದು ಟೀಕಿಸಿದ್ದಾರೆ. ಖಾನ್‌ರ ಹೇಳಿಕೆಯಿಂದ ಮಹಿಳೆಯರಿಗೆ ನೋವಾಗಿದೆ ಮಾತ್ರವಲ್ಲ, ಪುರುಷರ ಗೌರವಕ್ಕೂ ಧಕ್ಕೆಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.