ಸದ್ಯದಲ್ಲೇ ಅಜೀಂ ವಿದಾಯ
Azim Premji Fairwell
Team Udayavani, Jun 7, 2019, 6:10 AM IST
ನವದೆಹಲಿ: ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಮಾಹಿತಿತಂತ್ರಜ್ಞಾನ ಸಂಸ್ಥೆ ವಿಪ್ರೋದ ಸಂಸ್ಥಾಪಕ ಅಜೀಂ ಪ್ರೇಂಜಿ ಕಾರ್ಯನಿರ್ವಾಹಕ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಜೂ.30ಮುಂದಿನ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿದ್ದಾರೆ. ಬರೋಬ್ಬರಿ 53 ವರ್ಷಗಳ ಕಾಲ ಸಂಸ್ಥೆಯನ್ನು ವಿವಿಧ ರೀತಿಯಲ್ಲಿ ಅವರು ಮುನ್ನಡೆಸಿದ್ದರು.
ಪ್ರೇಂ ಜಿ ಸ್ಥಾನಕ್ಕೆ ಸಿಇಒ ಅಬಿದಲೈ ಝೆಡ್. ನೀಮುಚ್ವಾಲಾ ಅವರನ್ನು ನೇಮಿಸಲಾಗಿದ್ದರೆ, ಸದ್ಯ ವ್ಯೂಹಾತ್ಮಕ ಅಧಿಕಾರಿಯಾಗಿರುವ ರಿಶದ್ ಪ್ರೇಂಜಿ ಅವರನ್ನು ನೂತನ ಕಾರ್ಯನಿರ್ವಾಹಕ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಲಿದ್ದಾರೆ. ಈ ಬಗ್ಗೆ ಗುರುವಾರ ಸಂಸ್ಥೆ ಮಾಹಿತಿ ನೀಡಿದೆ. ಆದರೆ ವಿಪ್ರೋ ಸಂಸ್ಥಾಪಕ ಕಾರ್ಯನಿರ್ವಾಹಕೇತರ ನಿರ್ದೇಶಕ ಮತ್ತು ಸಂಸ್ಥಾಪಕ ಅಧ್ಯಕ್ಷ ಹುದ್ದೆಯಲ್ಲಿ ಜೂ.31ರಿಂದ ಅನ್ವಯವಾಗುವಂತೆ ಐದು ವರ್ಷಗಳ ಕಾಲ ಮುಂದುವರಿಯಲಿದ್ದಾರೆ. ಪ್ರೇಂಜಿ ಮಾ.14ರಂದು 1.45 ಲಕ್ಷ ಕೋಟಿ ರೂ. ಮೊತ್ತವನ್ನು ದಾನವಾಗಿ ನೀಡಿದ್ದಾರೆ. ಈ ಮೂಲಕ ವಿಶ್ವದಲ್ಲಿ ಐದನೇ ಮತ್ತು ಏಷ್ಯಾದಲ್ಲಿ ಅತ್ಯಂತ ದೊಡ್ಡ ಮೊತ್ತ ನೀಡಿದವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
2013ರಲ್ಲಿ ಸಂಸ್ಥೆಯನ್ನು ಮಾಹಿತಿ ತಂತ್ರಜ್ಞಾನ ಮತ್ತು ಇತರ ಉದ್ದಿಮೆಗಳು ಎಂದು ವಿಭಾಗಿಸಲಾಗಿತ್ತು. 1945ರ ಡಿ.29ರಂದು ಸಂಸ್ಥೆ ಆರಂಭವಾಗಿತ್ತು. 1970 ಮತ್ತು 1980ರ ದಶಕದಲ್ಲಿ ಸಂಸ್ಥೆ ಮಾಹಿತಿ ತಂತ್ರಜ್ಞಾನ ಮತ್ತು ಕಂಪ್ಯೂಟರ್ ಕ್ಷೇತ್ರದತ್ತ ವಿಸ್ತರಿಸಲು ಯೋಜನೆ ನಡೆಸಿತ್ತು. ಸಂಸ್ಥೆ ವೆಸ್ಟರ್ನ್ ಇಂಡಿಯಾ ಪ್ರಾಡಕ್ಟ್ಸ್ ಲಿಮಿಟೆಡ್, ವಿಪ್ರೋ ಕನ್ಸ್ಯೂಮರ್ ಕೇರ್ ಆ್ಯಂಡ್ ಲೈಟಿಂಗ್, ವಿಪ್ರೋ ಇನ್ಫ್ರಾಸ್ಟ್ರಕ್ಚರ್ ಎಂಜಿನಿಯರಿಂಗ್, ವಿಪ್ರೋ ಜಿಇ ಮೆಡಿಕಲ್ ಸಿಸ್ಟಮ್ಸ್ ಎಂಬ ಸಹವರ್ತಿ ಸಂಸ್ಥೆಗಳನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.