ನೂರಾರು ಕೋಟಿ ರೂ. ದಾನ ಮಾಡಿದ ಪರೋಪಕಾರಿಗಳು
ಈ ವರ್ಷವೂ ಅಜೀಂ ಪ್ರೇಮ್‌ಜಿಗೆ ಅಗ್ರ ಸ್ಥಾನ
Team Udayavani, Nov 4, 2021, 7:05 AM IST
ಹೊಸದಿಲ್ಲಿ: ಭಾರತದಲ್ಲಿ ಕೋಟ್ಯಂತರ ರೂಪಾಯಿ ದಾನ ಮಾಡಿ, ಪರೋಪಕಾರದಲ್ಲಿ ಎತ್ತಿದ ಕೈ ಎನಿಸಿಕೊಂಡವರ ಪಟ್ಟಿಯನ್ನು ಹುರುನ್ ಇಂಡಿಯಾ ಸಂಸ್ಥೆ ಬಿಡುಗಡೆ ಮಾಡಿದೆ.
ಎಡೆಲ್‌ಗೀವ್ ಹುರುನ್ ಇಂಡಿಯಾ ಪರೋಪಕಾರಿಗಳ ಪಟ್ಟಿ 2021ರಲ್ಲಿಯೂ ಈ ಹಿಂದಿನ ವರ್ಷದಂತೆಯೇ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜೀ ಅವರು ಮೊದಲನೇ ಸ್ಥಾನ ಪಡೆದುಕೊಂಡಿದ್ದಾರೆ.
ಈ ಒಂದು ವರ್ಷದಲ್ಲಿ ಬರೋಬ್ಬರಿ 11 ದಾನಿಗಳು 100 ಕೋಟಿ ರೂಪಾಯಿಗೂ ಹೆಚ್ಚಿನ ಹಣವನ್ನು ದಾನದ ರೂಪದಲ್ಲಿ ನೀಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಅತೀ ಹೆಚ್ಚು, 9,659 ಕೋಟಿ ರೂ. ದಾನವು 72 ದಾನಿಗಳಿಂದ ಬಂದಿದೆ.
ಇದನ್ನೂ ಓದಿ:ರಾಜ್ಯ ಸರ್ಕಾರದಿಂದ 7 ರೂ. ಗಳಷ್ಟು ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ
ಅಜೀಂ ಪ್ರೇಮ್‌ಜಿ ಅವರು ಕಳೆದ ವರ್ಷಕ್ಕಿಂತ ಈ ವರ್ಷ ಶೇ.23 ಹೆಚ್ಚು ದಾನ ನೀಡಿರುವುದು ಪಟ್ಟಿಯಿಂದ ತಿಳಿದುಬಂದಿದೆ. ಕಳೆದ ವರ್ಷವಿದ್ದ ಪಟ್ಟಿಯಲ್ಲಿ ಈ ವರ್ಷ ಹೂಡಿಕೆದಾರ ರಾಕೇಶ್ ಜುಂಜುನ್‌ವಾಲಾ ಸೇರಿ ಅನೇಕರು ಸೇರ್ಪಡೆಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.