ಅಡ್ವಾಣಿಗೆ ತೀವ್ರ ಸಂಕಷ್ಟ: ಕ್ರಿಮಿನಲ್ ಸಂಚು ಆರೋಪ ಕೈಬಿಡದ ಕೋರ್ಟ್
Team Udayavani, May 30, 2017, 2:16 PM IST
ಲಕ್ನೋ: 1992 ರಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ವಿಚಾರಣೆ ಮಂಗಳವಾರ ಇಲ್ಲಿನ ಸಿಬಿಐ ವಿಶೇಷ ಕೋರ್ಟ್‌ನಲ್ಲಿ ನಡೆದಿದ್ದು, ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಸೇರಿದಂತೆ ಬಿಜೆಪಿಗೆ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದೆ.
ಅಡ್ವಾಣಿ, ಕೇಂದ್ರದ ಮಾಜಿ ಸಚಿವ ಡಾ.ಮುರಳಿ ಮನೋಹರ ಜೋಶಿ, ಕೇಂದ್ರ ಸಚಿವೆ ಉಮಾ ಭಾರತಿ ಸೇರಿದಂತೆ ಎಲ್ಲಾ 12 ಪ್ರಮುಖ ಆರೋಪಿಗಳು ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಸಂಚು ಆರೋಪವನ್ನು ದಾಖಲಿಸಬಾರದು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿ, ಕ್ರಿಮಿನಲ್ ಸಂಚು ರೂಪಿಸಿದ ಆರೋಪ ಹೊರಿಸಿ ತೀರ್ಪು ನೀಡಿದೆ.
ಭಾರತೀಯ ದಂಡ ಸಂಹಿತೆ 120 ಬಿ (ಕ್ರಿಮಿನಲ್ ಸಂಚು ಆರೋಪದ ದಂಡನೆ) ಕಲಂ ಅನ್ವಯ ಲಕ್ನೋ ಸಿಬಿಐ ವಿಶೇಷ ಕೋರ್ಟ್ ಆರೋಪವನ್ನು ಹೊರಿಸಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ತಮ್ಮ ಕಕ್ಷಿದಾರರು ಯಾವುದೇ ಕ್ರಿಮಿನಲ್ ಸಂಚಿನಲ್ಲಿ ಭಾಗಿಯಾಗಿಲ್ಲ ಎಂಬ ಅಡ್ವಾಣಿ ಪರ ವಕೀಲರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಕೋರ್ಟ್ ತೀರ್ಪಿನಿಂದಾಗಿ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದ್ದು ಕ್ರಿಮಿನಲ್ ಸಂಚಿನ ಆರೋಪದಡಿಯಲ್ಲಿ ವಿಚಾರಣೆ ಎದುರಿಸಬೇಕಾಗಿದೆ.
ಜಾಮೀನು ಮಂಜೂರು
ಬೆಳಗ್ಗೆ ಸಿಬಿಐ ವಿಶೇಷ ಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಬಾಂಡ್ ಆಗಿ ತಲಾ 50 ಸಾವಿರ ರೂಪಾಯಿಗಳ ಶ್ಯೂರಿಟಿಯೊಂದಿಗೆ ವಿಶೇಷ ನ್ಯಾಯಮೂರ್ತಿ ಎಸ್.ಕೆ.ಯಾದವ್ ಅವರು ಜಾಮೀನು ಮಂಜೂರು ಮಾಡಿದ್ದರು.
ಅಡ್ವಾಣಿ, ಜೋಷಿ, ಉಮಾಭಾರತಿ ,ವಿನಯ್ ಕಟಿಯಾರ್, ಸಾದ್ವಿ ರಿತಂಬರಾ ಸೇರಿದಂತೆ ಪ್ರಮುಖ ಆರೋಪಿಗಳು ಕೋರ್ಟ್‌ಗೆ ಖುದ್ದು ಹಾಜರಾಗಿದ್ದರು. ಈ ವೇಳೆ ಕೋರ್ಟ್ ಆವರಣದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿತ್ತು.
1992ರ ಡಿ.6ರಂದು ನಡೆದ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸಕ್ಕೆ ಕ್ರಿಮಿನಲ್ ಸಂಚು ರೂಪಿಸಿದ ಆರೋಪ ಹೊತ್ತಿದ್ದ ಆಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾಭಾರತಿ, ವಿನಯ್ ಕಟಿಯಾರ್, ಕಲ್ಯಾಣ್ ಸಿಂಗ್ ಹಾಗೂ ಇತರರನ್ನು ರಾಯ್‌ಬರೇಲಿಯ ಕೆಳಹಂತದ ನ್ಯಾಯಾಲಯವು ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ನಂತರ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು. ಅದನ್ನು ಪ್ರಶ್ನಿಸಿ ಸಿಬಿಐ 2011ರ ಫೆ.18ರಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹಾಜಿ ಮಹಬೂಬ್ ಅಹ್ಮದ್(ದಿವಂಗತ) ಎಂಬವರೂ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.