ಅಹ್ಮದ್ ಪಟೇಲ್ಗೆ ಹಿನ್ನಡೆ
Team Udayavani, Jan 4, 2019, 12:30 AM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ಗೆ ಬಿಜೆಪಿ ನಾಯಕ ಬಲವಂತ ಸಿಂಗ್ ರಜಪೂತ್ ಸಲ್ಲಿಸಿರುವ ಮೊಕದ್ದಮೆ ಎದುರಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಸೂಚಿಸಿದೆ. 2017ರಲ್ಲಿ ಗುಜರಾತ್ನಿಂದ ರಾಜ್ಯಸಭೆಗೆ ನಡೆದಿದ್ದ ಹೈವೋಲ್ಟೆಜ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಲವಂತ ಸಿಂಗ್ ರಜಪೂತ್ ವಿರುದ್ಧ ಅಹ್ಮದ್ ಪಟೇಲ್ ಗೆದ್ದಿದ್ದರು. ಈ ಆಯ್ಕೆ ಪ್ರಶ್ನಿಸಿ ರಜಪೂತ್ ನ್ಯಾಯಾಂಗ ಸಮರ ಆರಂಭಿಸಿದ್ದರು. 2018 ಅ. 26ರಂದು ಗುಜರಾತ್ ಹೈಕೋರ್ಟ್ ಈ ಬಗ್ಗೆ ತನಿಖೆ ನಡೆಯಬೇಕು ಎಂದು ಆದೇಶಿಸಿದ್ದನ್ನು ಪ್ರಶ್ನಿಸಿ ಅಹ್ಮದ್ ಪಟೇಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಾನ್ಯ ಮಾಡಲು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾ| ಎಸ್.ಕೆ. ಕೌಲ್ ನೇತೃತ್ವದ ನ್ಯಾಯಪೀಠ ನಿರಾಕರಿಸಿ ತನಿಖೆ ಮುಂದುವರಿಯಲಿ ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Australia vs Pakistan T20: ಪಾಕ್ ವಿರುದ್ಧ ಆಸೀಸ್ಗೆ 2-0 ಸರಣಿ ಜಯ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.