ಉತ್ತರಪ್ರದೇಶ: ಪೈಶಾಚಿಕ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ, ಇಬ್ಬರ ಬಂಧನ
ಇದು ದೆಹಲಿಯಲ್ಲಿ ನಡೆದ ಪೈಶಾಚಿಕ ಸಾಮೂಹಿಕ ಅತ್ಯಾಚಾರ ಘಟನೆಯಂತೆ ನಡೆದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
Team Udayavani, Jan 6, 2021, 6:41 PM IST
Representative Image
ಉತ್ತರಪ್ರದೇಶ: ಅಂಗನವಾಡಿ ಕಾರ್ಯಕರ್ತೆ(50ವರ್ಷ) ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆಗೈದ ಪೈಶಾಚಿಕ ಕೃತ್ಯ ಉತ್ತರಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಬುಧವಾರ(ಜನವರಿ 06, 2021) ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
50 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪೈಶಾಚಿಕ ರೀತಿಯಲ್ಲಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ಎಸಗಿರುವುದು ಖಚಿತವಾದ ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಆಕೆಯ ಖಾಸಗಿ ಭಾಗಕ್ಕೆ ಕಬ್ಬಿಣದ ಸಲಾಖೆಯಿಂದ ಗಂಭೀರವಾಗಿ ಗಾಯಗೊಳಿಸಿದ್ದು, ಇದು ದೆಹಲಿಯಲ್ಲಿ ನಡೆದ ಪೈಶಾಚಿಕ ಸಾಮೂಹಿಕ ಅತ್ಯಾಚಾರ ಘಟನೆಯಂತೆ ನಡೆದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಹಕ್ಕಿ ಜ್ವರ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈ ಅಲರ್ಟ್ : ಸಚಿವ ಪ್ರಭು ಚವ್ಹಾಣ್ ಸೂಚನೆ
ಉಳಿದ ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಈ ಪ್ರಕರಣದ ಬಗ್ಗೆ ಎನ್ ಎಸ್ ಎ ತನಿಖೆ ನಡೆಸುವುದು ಸೂಕ್ತ ಎಂದು ಸಲಹೆ ನೀಡಲಾಗಿದೆ ಎಂದು ಬದೌನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.