ಬಲೂನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ನಾಲ್ವರು ಸಾವು:10ಮಂದಿಗೆ ಗಂಭೀರ ಗಾಯ
Team Udayavani, Aug 23, 2021, 8:56 AM IST
ಭೋಪಾಲ್/ ಲಕ್ನೋ: ಬಲೂನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟವಾದ ಎರಡು ಪ್ರತ್ಯೇಕ ಘಟನೆಗಳು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಚಿಂದ್ವಾರ ಮತ್ತು ಉತ್ತರ ಪ್ರದೇಶದ ವಾರಣಾಸಿಯಲ್ಲಿ ರವಿವಾರ ಈ ಘಟನೆಗಳು ನಡೆದಿದೆ. ಎರಡು ಪ್ರಕರಣಗಳಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ.
ಚಿಂದ್ವಾರ ಪ್ರಕರಣದಲ್ಲಿ ತೇಜುದ್ದೀನ್ ಅನ್ಸಾರಿ (40 ವ) ಮತ್ತು ಶೇಕ್ ಇಸ್ಮಾಯಿಲ್ (70 ವ) ಮೃತಪಟ್ಟರೆ, ವಾರಣಾಸಿಯಲ್ಲಿ ಗೀತಾ ದೇವಿ (40 ವ) ಮತ್ತು ಲಲ್ಲಾ (30ವ ) ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಸವಾಲುಗಳ ಸಾಗರದಲ್ಲಿ ಈಜಿದ ಕನ್ನಡಿಗ: 19 ಶಸ್ತ್ರಚಿಕಿತ್ಸೆ ಗೆದ್ದ ನಿರಂಜನ್
ಗಾಯಾಳುಗಳಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂದ್ವಾರ ಪ್ರಕರಣದಲ್ಲಿ ಸ್ಫೋಟದ ಶಬ್ಧ ಸುಮಾರು ದೂರದವರೆಗೆ ಕೇಳಿಸಿದ್ದು, ಕಂಪನದ ಅನುಭವವಾಗಿದೆ ಎನ್ನಲಾಗಿದೆ.
ಬಲೂನ್ ಮಾರಾಟಗಾರ ಬಲೂನುಗಳಲ್ಲಿ ಗ್ಯಾಸ್ ತುಂಬುತ್ತಿದ್ದಾಗ ಈ ಭಯಾನಕ ಘಟನೆ ನಡೆದಿದೆ. ಸ್ಫೋಟದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು ಆದರೆ ಅವರು ಇನ್ನೂ ಅಧಿಕೃತ ಹೇಳಿಕೆ ನೀಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.