Bangladesh; ಶೇಖ್‌ ಹಸೀನಾಗೆ ಆಶ್ರಯ: ಭಾರತಕ್ಕೆ ತ್ರಿಶಂಕು ಸ್ಥಿತಿ

ಬಾಂಗ್ಲಾ ಬೇಕೋ, ಹಸೀನಾ ಮುಖ್ಯವೋ ನಿರ್ಧರಿಸಿ: ಬಿಎನ್ ಪಿ... ಹಸೀನಾಗೆ ಎಲ್ಲೂ ಸಿಗುತ್ತಿಲ್ಲ ರಾಜಾಶ್ರಯ

Team Udayavani, Aug 10, 2024, 6:40 AM IST

1-aaasaasa

ಹೊಸದಿಲ್ಲಿ: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾ ವಿಚಾರದಲ್ಲಿ ಭಾರತ ಈಗ ತ್ರಿಶಂಕು ಸ್ಥಿತಿಗೆ ತಲುಪಿದೆ. ಅತ್ತ ಹಸೀನಾಗೆ ಆಶ್ರಯ ನೀಡಿರುವುದರ ಬಗ್ಗೆ ಬಾಂಗ್ಲಾದ ಪಕ್ಷಗಳು ಕಿಡಿ ಕಾರುತ್ತಿದ್ದರೆ, ಇತ್ತ ಹಸೀನಾಗೆ ಬೇರೆ ರಾಷ್ಟ್ರಗಳಲ್ಲಿ ರಾಜಾಶ್ರಯ ದೊರೆಯುತ್ತಿಲ್ಲ, ಕೆಲವು ದಿನಗಳ ಕಾಲ ಭಾರತದಲ್ಲೇ ಉಳಿಯಬೇಕಾದ ಪರಿಸ್ಥಿತಿ ಎದುರಾಗಿದೆ.

ಹಸೀನಾಗೆ ಭಾರತ ಆಶ್ರಯ ನೀಡಿರುವುದರಿಂದ ಉಭಯ ರಾಷ್ಟ್ರಗಳ ಸಂಬಂಧ ಹಾಳಾಗಬಹುದು ಎಂದು ಬಾಂಗ್ಲಾದ ವಿಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್‌ ಪಾರ್ಟಿ (BNP) ಎಚ್ಚರಿಕೆ ನೀಡಿದೆ. ಬಿಎನ್‌ಪಿ ಹಿರಿಯ ನಾಯಕ ಗಯೇಶ್ವರ್‌ ರಾಯ್‌ ಮಾತನಾಡಿ, “ಭಾರತಕ್ಕೆ ಒಂದು ರಾಷ್ಟ್ರದೊಂದಿಗಿನ ಸಂಬಂಧ ಮುಖ್ಯವೋ ಅಥವಾ ಒಂದು ಪಕ್ಷವೋ ಎಂಬುದನ್ನು ಅದೇ ನಿರ್ಧರಿಸಬೇಕು’ ಎಂದಿದ್ದಾರೆ. ಮತ್ತೂಬ್ಬ ನಾಯಕ ಖಂಡಕರ್‌ ಮೋಷರಫ್ ಹುಸೇನ್‌, ನಮ್ಮ ಶತ್ರುವಿಗೆ ಯಾರು ಆಶ್ರಯ ನೀಡುತ್ತಾರೋ ಅಂಥವರ ವಿರುದ್ಧವೂ ಅಸಹನೆ ಮೂಡುವುದು ಸಹಜ ಎಂದಿದ್ದಾರೆ. ಇತ್ತ ಭಾರತಕ್ಕೆ ತಾತ್ಕಾಲಿಕವಾಗಿ ಬಂದ ಹಸೀನಾ ಬ್ರಿಟನ್‌ಗೆ ತೆರಳಬೇಕು ಎಂದುಕೊಂಡಿದ್ದರು. ಆದರೆ ಅಲ್ಲಿನ ಸರಕಾರ ಇದಕ್ಕೆ ಅನುಮತಿ ನೀಡಿಲ್ಲ. ಇತ್ತ ಅಮೆರಿಕ ಕೂಡ ಹಸೀನಾರ ವೀಸಾ ನಿರ್ಬಂಧಿಸಿದ್ದು , ಯುಎಇ ಹಾಗೂ ಐರೋಪ್ಯ ರಾಷ್ಟ್ರಗಳಲ್ಲಿ ಆಶ್ರಯ ಕೋರಲು ಹಸೀನಾ ಯೋಜಿಸಿ ದ್ದಾರೆ ಎನ್ನಲಾಗಿದೆ. ಅಲ್ಲಿಯವರೆಗೂ ಅವರಿಗೆ ಆಶ್ರಯ ನೀಡಲೇಬೇಕಾದ ಬಿಕ್ಕಟ್ಟಿಗೆ ಭಾರತ ಸಿಲುಕಿದೆ.

7,200 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ
ಬಾಂಗ್ಲಾ ಹಿಂಸಾಚಾರದ ಹಿನ್ನೆಲೆಯಲ್ಲಿ ಆ.1ರ ವರೆಗೆ 2 ವಾರಗಳಲ್ಲಿ 7,200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ ಎಂದು ಕೇಂದ್ರ ಸರಕಾರ ರಾಜ್ಯಸಭೆಗೆ ತಿಳಿಸಿದೆ. ಬಾಂಗ್ಲಾದಲ್ಲಿರುವ ಭಾರತೀಯ ಹೈಕಮಿಷನ್‌ಗಳು ಭಾರತೀಯ ಪ್ರಜೆಗಳನ್ನು ಸ್ವದೇಶಕ್ಕೆ ಕಳುಹಿಸಲು ನೆರವಾಗುತ್ತಿವೆ ಎಂದೂ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್‌ ಸಿಂಗ್‌ ತಿಳಿಸಿದ್ದಾರೆ.

ಭಾರತ-ಬಾಂಗ್ಲಾ ಗಡಿ ನಿಗಾಕ್ಕೆ ಕೇಂದ್ರದಿಂದ 5 ಸದಸ್ಯರ ಸಮಿತಿ
ಭಾರತ-ಬಾಂಗ್ಲಾ ಗಡಿಯಲ್ಲಿನ ಪ್ರಸಕ್ತ ಪರಿಸ್ಥಿತಿ ಪರಿಶೀಲಿಸುವುದಕ್ಕಾಗಿ ಕೇಂದ್ರ ಸರಕಾರ ಬಿಎಸ್‌ಎಫ್ನ ಪೂರ್ವ ಕಮಾಂಡ್‌ನ‌ ಹೆಚ್ಚುವರಿ ಮಹಾ ನಿರ್ದೇಶಕರ (ಎಡಿಜಿ) ನೇತೃತ್ವದಲ್ಲಿ 5 ಸದಸ್ಯರ ಸಮಿತಿಯನ್ನು ರಚಿಸಿದೆ. ಬಾಂಗ್ಲಾದಲ್ಲಿ ಮಧ್ಯಾಂತರ ಸರಕಾರ ಅಸ್ತಿತ್ವಕ್ಕೆ ಬಂದಿದ್ದು, ಮಾಜಿ ಪ್ರಧಾನಿ ಹಸೀನಾಗೆ ಭಾರತ ಆಶ್ರಯ ನೀಡುವುದರ ಬಗ್ಗೆ ಆಕ್ಷೇಪ ಕೇಳಿಬರುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. ಈ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದು,”ಬಾಂಗ್ಲಾದ ಪ್ರಸಕ್ತ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಈ ಸಮಿತಿ ರಚಿಸಲಾಗಿದೆ. ಸಮಿತಿಯ ಅಧಿಕಾರಿಗಳು ಬಾಂಗ್ಲಾದ ಜತೆ ಸಂವಹನ ನಡೆಸಿ, ಭಾರತೀಯ ಪ್ರಜೆಗಳ, ಹಿಂದೂಗಳು ಹಾಗೂ ಇತರ ಅಲ್ಪಸಂಖ್ಯಾಕರ ಸುರಕ್ಷೆಯನ್ನು ಖಾತರಿ ಪಡಿಸಿಕೊಳ್ಳಲಿದ್ದಾರೆ’ ಎಂದಿದ್ದಾರೆ.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.