Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
ದೇಶೀಯ ಉತ್ಪಾದನೆಗೆ ಮೋದಿ ಸರ್ಕಾರದ ಆದ್ಯತೆ
Team Udayavani, Jan 15, 2025, 6:53 AM IST
ನವದೆಹಲಿ: ಜವಳಿ ಉದ್ಯಮಕ್ಕೆ ಹೆಸರುವಾಸಿಯಾಗಿರುವ ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟಿನಿಂದಾಗಿ ಜಗತ್ತಿನ ಇತರ ದೇಶಗಳು ಪರ್ಯಾಯ ಮಾರುಕಟ್ಟೆಯ ಶೋಧದಲ್ಲಿ ತೊಡಗಿವೆ. ಈ ಸಮಯವನ್ನು ಸದ್ಬಳಕೆ ಮಾಡಿಕೊಳ್ಳಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ದೇಶೀಯ ಜವಳಿ ಮಾರುಕಟ್ಟೆಗೆ ಹೆಚ್ಚಿನ ಆರ್ಥಿಕ ನೆರವು, ತೆರಿಗೆ ಪ್ರಮಾಣ ಇಳಿಕೆಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಅದರಂತೆ, ಫೆ.1ರಂದು ವಿತ್ತ ಸಚಿವೆ ಮಂಡಿಸಲಿರುವ ಬಜೆಟ್‌ನಲ್ಲಿ ಜವಳಿ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುವ ಸಾಧ್ಯತೆ ಇದೆ.
ಬಜೆಟ್‌ನಲ್ಲಿ ಜವಳಿ ಕ್ಷೇತ್ರಕ್ಕೆ ಶೇ.10ರಿಂದ ಶೇ.15ರಷ್ಟು ಮೊತ್ತವನ್ನು ಹೆಚ್ಚುವರಿಯಾಗಿ ಮೀಸಲಿಡುವ ಸಾಧ್ಯತೆಗಳು ಇವೆ. ಉತ್ಪಾದನೆ ಆಧಾರಿತ ಪ್ರೋತ್ಸಾಹಧನದ ಮೊತ್ತವನ್ನು 45 ಕೋಟಿ ರೂ.ಗಳಿಂದ 60 ಕೋಟಿ ರೂ.ಗೆ ಹೆಚ್ಚಿಸುವ ಸಾಧ್ಯತೆಗಳಿವೆ. ಕಳೆದ ವರ್ಷ 4,417 ಕೋಟಿ ರೂ.ಗಳನ್ನು ಜವಳಿ ಕ್ಷೇತ್ರಕ್ಕೆ ಮೀಸಲಿಡಲಾಗಿತ್ತು.
ಜವಳಿ ಉದ್ಯಮಕ್ಕೆ ಪ್ರಸಿದ್ಧವಾಗಿದ್ದ ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು ಶುರುವಾದ ಬಳಿಕ ನವೆಂಬರ್‌ನಿಂದ ಜನವರಿ ಅವಧಿಯಲ್ಲಿ ಅಲ್ಲಿಂದ ಅಮೆರಿಕಕ್ಕೆ ರಫ್ತಾಗುತ್ತಿದ್ದ ಉಡುಪುಗಳ ಪ್ರಮಾಣ ಶೇ.0.46ಕ್ಕೆ ಇಳಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಡುಪು ರಫ್ತು ಉತ್ತೇಜನಾ ಮಂಡಳಿ (ಎಪಿಇಸಿ)ಯ ಪ್ರಧಾನ ಕಾರ್ಯದರ್ಶಿ ಮಿಥಿಲೇಶ್ವರ್ ಠಾಕೂರ್, “ಅಮೆರಿಕದ ಗ್ರಾಹಕರಿಂದ ಭಾರತದ ಜವಳಿ ಕಂಪನಿಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿವೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ
Indira Gandhi Bhavan: ಕಾಂಗ್ರೆಸ್ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ
MUST WATCH
ಹೊಸ ಸೇರ್ಪಡೆ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಅಧಿಕೃತವಾಗಿ ಅನೌನ್ಸ್ ಆಯಿತು ʼಜೈಲರ್ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ
Ramanagara: ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.