ಇಂದು ಬಾಂಗ್ಲಾದೇಶ – ಭಾರತ “ಮೈತ್ರಿ ದಿನ’
Team Udayavani, Dec 6, 2021, 5:29 AM IST
ಹೊಸದಿಲ್ಲಿ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೈತ್ರಿ ಮತ್ತಷ್ಟು ಗಾಢವಾಗುವ ನಿಟ್ಟಿನಲ್ಲಿ ಸೋಮವಾರ (ಡಿ.6)ವನ್ನು “ಮೈತ್ರಿ ದಿನ’ ಎಂದು ಆಚರಿಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ಕೇಂದ್ರ ಸರಕಾರ ನಿರ್ಧಾರ ಕೈಗೊಂಡಿದೆ. ಢಾಕಾ ಬಾಂಗ್ಲಾದೇಶದ ರಾಜಧಾನಿ ಎಂದು 1971ರ ಡಿ.6ರಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಅಂದಿನ ಸರಕಾರ ಮಾನ್ಯತೆ ನೀಡಿತ್ತು. ಅದರ ಸ್ಮರಣೆಯನ್ನು ಶಾಶ್ವತವಾಗಿ ಇರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಹೊಸದಿಲ್ಲಿಯಲ್ಲಿರುವ ಇಂಡಿಯನ್ ಕೌನ್ಸಿಲ್ ಆಫ್ ವರ್ಲ್ಡ್ ಅಫೇರ್ಸ್ ಸೋಮವಾರ ವಿಶೇಷ ಕಾರ್ಯ ಕ್ರಮ ಆಯೋಜಿಸಿದೆ. ಅದರಲ್ಲಿ ಎರಡೂ ರಾಷ್ಟ್ರಗಳ ಪ್ರಮುಖ ಅಧಿಕಾರಿಗಳು ಮತ್ತು ಇತರರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ:ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ
ಭಾರತದ್ದೇ ಪಾತ್ರ: 1971ರಲ್ಲಿ ಭಾಂಗ್ಲಾದೇಶಕ್ಕೆ ಸ್ವಾತಂತ್ರ್ಯಸಿಗಲು ಭಾರತ ಕಾರಣವಾಗಿದೆ. ಡಿ.6ಕ್ಕೆ ಸರಿಯಾಗಿ ಆ ಸಂಭ್ರಮಕ್ಕೆ 50 ವರ್ಷ ಭರ್ತಿಯಾಗುತ್ತದೆ. ಈ ಸುವರ್ಣ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಡಿ.14 ರಿಂದ 16ರವರೆಗೆ ದಿಲ್ಲಿಯ ಇಂಡಿಯಾ ಗೇಟ್‌ನಲ್ಲಿ ಭರ್ಜರಿ ಕಾರ್ಯಕ್ರಮಗಳು ನಡೆಯಲಿವೆ. ಅವುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.