![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jun 6, 2024, 11:32 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಜಯ ಗಳಿಸಿರುವ ಎನ್ ಡಿಎ ಒಕ್ಕೂಟ ಸರ್ಕಾರ ರಚನೆಗೆ ಮುಂದಾಗಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 8ರಂದು ಮೋದಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ.
ಈ ಕಾರ್ಯಕ್ರಮಕ್ಕೆ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಆಗಮಿಸಲಿದ್ದಾರೆ. ಅವರೊಂದಿಗೆ ನೇಪಾಳ ಪ್ರಧಾನಿ ಪುಷ್ಪ ಕುಮಾರ್ ದಹಾಲ್ ಮತ್ತು ಭೂತಾನ್ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್ ಕೂಡ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರನ್ನೂ ಆಹ್ವಾನಿಸುವ ಸಾಧ್ಯತೆಯಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳನ್ನು ಗೆಲ್ಲುವ ಬಹುಮತದ ಗುರುತನ್ನು ಮೀರಿರುವುದರಿಂದ ಜೂನ್ 8 ರಂದು ರಾತ್ರಿ 8 ಗಂಟೆಗೆ ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಎಕ್ಸಿಟ್ ಪೋಲ್ ಗಳನ್ನು ಮೀರಿ ವಿರೋಧ ಪಕ್ಷವಾದ ಇಂಡಿಯಾ ಬಣ 234 ಸ್ಥಾನಗಳನ್ನು ಪಡೆದುಕೊಂಡಿದೆ.
2019 ರ ಲೋಕಸಭಾ ಚುನಾವಣೆಯ ನಂತರ, ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತವು ಬಿಮ್ಸ್ಟೆಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಿತು. BIMSTEC, ಒಂದು ಪ್ರಾದೇಶಿಕ ಗುಂಪು. ಇದು ಬಾಂಗ್ಲಾದೇಶ, ಭೂತಾನ್, ಭಾರತ, ಮ್ಯಾನ್ಮಾರ್, ನೇಪಾಳ, ಶ್ರೀಲಂಕಾ ಮತ್ತು ಥೈಲ್ಯಾಂಡ್ ಅನ್ನು ಒಳಗೊಂಡಿದೆ. 2019 ರಲ್ಲಿ ವಿವಿಐಪಿಗಳು ಸೇರಿದಂತೆ ಸುಮಾರು 8,000 ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.