![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Aug 11, 2024, 5:10 PM IST
ಕೋಲ್ಕತಾ: ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಮೇಘಾಲಯದಲ್ಲಿ ಅಂತಾರಾಷ್ಟ್ರೀಯ ಗಡಿಯ ಮೂಲಕ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಹನ್ನೊಂದು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (BSF) ಭಾನುವಾರ(ಆಗಸ್ಟ್ 11) ತಿಳಿಸಿದೆ.
ಬಂಧಿತರ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.
BSF ಪರಸ್ಪರ ಸಮಸ್ಯೆಗಳನ್ನು ಪರಿಹರಿಸಲು, ವಿಶೇಷವಾಗಿ ಭಾರತೀಯ ಪ್ರಜೆಗಳು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಜನರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು BGB ಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಅರಾಜಕತೆ ಮತ್ತು ಸಂಘರ್ಷ ತೀವ್ರವಾಗಿರುವ ವೇಳೆ ಭಾರತದ ಗಡಿಯಲ್ಲಿ ಬಿಎಸ್ ಎಫ್ ತೀವ್ರ ಕಟ್ಟೆಚ್ಚರ ವಹಿಸಿದೆ.
You seem to have an Ad Blocker on.
To continue reading, please turn it off or whitelist Udayavani.