Banking; ಬ್ಯಾಂಕ್ಗಳಿಗೆ ವಾರಕ್ಕೆ 5 ದಿನ ಕೆಲಸ: ಈ ವರ್ಷವೇ ಜಾರಿ?
Team Udayavani, Mar 2, 2024, 6:35 AM IST
ನವದೆಹಲಿ: ಬ್ಯಾಂಕ್ಗಳಲ್ಲಿ ವಾರಕ್ಕೆ 5 ದಿನ ಮಾತ್ರ ಕೆಲಸ ಎಂಬ ನಿಯಮವು ಪ್ರಸಕ್ತ ವರ್ಷದಿಂದಲೇ ಜಾರಿಗೆ ಬರುವ ಸಾಧ್ಯತೆ ಅಧಿಕವಾಗಿದೆ. ವಿವಿಧ ಬ್ಯಾಂಕ್ಗಳ ಉದ್ಯೋಗಿಗಳ ಸಂಘಟಿತ ಒಕ್ಕೂಟ, ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಈ ಕುರಿತು ಮನವಿ ಸಲ್ಲಿಸಿದ್ದು, ಅದನ್ನು ಸರ್ಕಾರ ಪರಿಗಣಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಲಾಗುತ್ತಿದೆ.
ಆದರೆ, ಬ್ಯಾಂಕ್ಗಳ ಶಾಖೆಗಳ ಕಾರ್ಯನಿರ್ವಹಣೆ ಅವಧಿಯಲ್ಲಿ(ಗ್ರಾಹಕರು ವಹಿವಾಟು ನಡೆಸುವ ಅವಧಿ) ಇಳಿಕೆ ಮಾಡಲಾಗುವುದಿಲ್ಲ ಎಂದು ಯೂನಿಯನ್ ಹೇಳಿಕೊಂಡಿದೆ. ಆದರೆ, ಕೇಂದ್ರ ವಿತ್ತ ಸಚಿವಾಲಯದ ಅನುಮೋದನೆ ಪಡೆದ ಬಳಿಕವೇ ಹೊಸ ನಿಯಮ ಜಾರಿಯಾಗುವ ಸಾಧ್ಯತೆಗಳು ಇವೆ. ಸದ್ಯ ಬ್ಯಾಂಕ್ ಶಾಖೆಗಳಿಗೆ ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಸಾರ್ವಜನಿಕ ರಜೆ ಇದೆ. ಆದರೆ, ತಿಂಗಳ ಎಲ್ಲ ಶನಿವಾರ, ಭಾನುವಾರವೂ ರಜೆ ನೀಡಬೇಕು ಎನ್ನುವುದು ಉದ್ಯೋಗಿಗಳ ಬೇಡಿಕೆಯಾಗಿದೆ.
ಇದರ ಜತೆಗೆ ಬ್ಯಾಂಕ್ ಉದ್ಯೋಗಿಗಳು ಬಹು ನಿರೀಕ್ಷಿತ ಬೇಡಿಕೆ ವೇತನ ಏರಿಕೆಯೂ ಜೂನ್ನಿಂದ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.