ಗೆಲುವಿನ ಹಿಂದಿನ ಸೂತ್ರಧಾರ ಕಾರ್ಯತಂತ್ರ ನಿಪುಣ ಬನ್ಸಲ್
Team Udayavani, May 24, 2019, 6:00 AM IST
ಬಿಜೆಪಿ ಮತ್ತೆ ಹೆಚ್ಚು ಸ್ಥಾನಗಳನ್ನು ಪಡೆದು ಸರ್ಕಾರ ರಚಿಸುವತ್ತ ಮುಖ ಮಾಡಿದ್ದು, ಇದಕ್ಕೆ ಪ್ರಮುಖ ಕಾರಣೀಕರ್ತ ಅಮಿತ್ ಶಾ ಅವರ ನಂಬಿಕಸ್ಥ ಬಂಟ ಸುನೀಲ್ ಬನ್ಸಲ್ ಎಂದು ಬಣ್ಣಿಸಲಾಗುತ್ತಿದೆ. ಉತ್ತರ ಪ್ರದೇಶದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದ ಬನ್ಸಲ್ 2014ರ ಲೋಕಸಭಾ ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಉತ್ತಮ ಕ್ಷೇತ್ರಗಳಿಗೆ ಹೊಂದಿಸುವಲ್ಲಿ ಮತ್ತು ಉತ್ತಮ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಂಡು ಸಂಘಟಿಸುವಲ್ಲಿ ಯಶಸ್ವಿಯಾಗುವ ಮೂಲಕ ಮೋದಿ, ಶಾ ನಂಬಿಕೆಯನ್ನು ಗಳಿಸಿಕೊಂಡಿದ್ದರು. 2017ರ ಅಸೆಂಬ್ಲಿ ಚುನಾವಣೆಯಲ್ಲಿಯೂ ಬನ್ಸಲ್ ಕಾರ್ಯತಂತ್ರವು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೇರಿಸುವಲ್ಲಿ ನೆರವಾಗಿತ್ತು.
1989ರಲ್ಲಿ ರಾಜಸ್ಥಾನ್ ವಿವಿ ಎಬಿವಿಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಬನ್ಸಲ್ ಅವರನ್ನು ಗುರುತಿಸಿದ್ದ ಅಮಿತ್ ಶಾ, 2014ರ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮತಗಟ್ಟೆಗಳ ನಿರ್ವಹಣೆ ಮತ್ತು ಗ್ರಾಮಾಂತರ ಪ್ರದೇಶದ ನೇತೃತ್ವವನ್ನು ವಹಿಸಿಕೊಟ್ಟಿದ್ದರು. ತಮ್ಮ ಕಾರ್ಯನೈಪುಣ್ಯತೆ ಹಾಗೂ ರಾಜಕೀಯ ತಂತ್ರಗಾರಿಕೆಯಿಂದ ಅಲ್ಲಿ ಪಕ್ಷಕ್ಕೆ ಹೆಚ್ಚು ಸ್ಥಾನ ಗಳಿಸುವಂತೆ ಮಾಡಿದ ಬನ್ಸಲ್, ಅಮಿತ್‌ಶಾರ ನೆಚ್ಚಿನ ಶಿಷ್ಯರಾದರು. ಈ ಚುನಾವಣೆಯಲ್ಲಿ ಬಿಜೆಪಿಯ ಸಾಮಾಜಿಕ ಮಾಧ್ಯಮ ಘಟಕದಲ್ಲಿ ಕಾರ್ಯತಂತ್ರ ರೂಪಿಸಿ, ನಗರ ಪ್ರದೇಶದ ಮತ ಸೆಳೆಯಲೂ ಅವರು ಕಾರಣರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.