Tragedy: ಕೊಡಲಿಯಿಂದ ಕೊಚ್ಚಿ 2 ಮಕ್ಕಳ ಹತ್ಯೆ ಮಾಡಿದ ಕ್ಷೌರಿಕ ಎನ್‌ಕೌಂಟರ್‌ನಲ್ಲಿ ಮೃತ್ಯು
Team Udayavani, Mar 20, 2024, 8:27 AM IST
ಬದೌನ್: ಉ.ಪ್ರ.ದ ಬದೌನ್‌ನಲ್ಲಿ ಕ್ಷೌರಿಕನೊಬ್ಬ ಇಬ್ಬರು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಘಟನೆಯಲ್ಲಿ 3ನೇ ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಘಟನೆಗೆ ಕಾರಣನಾದ ವ್ಯಕ್ತಿಗಳ ಪೈಕಿ ಒಬ್ಬನನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿದ್ದಾರೆ. ಕೆಲವು ದಿನಗಳ ಹಿಂದೆಯೇ ಬದೌನ್‌ನಲ್ಲಿ ಅಂಗಡಿಯೊಂದನ್ನು ಸ್ಥಾಪಿಸಿದ್ದ ವ್ಯಕ್ತಿ ಮತ್ತು ಆತನ ನಿಕಟವರ್ತಿ ಮೂವರು ಮಕ್ಕಳು ಇರುವ ಮನೆಗೆ ಕೊಡಲಿ ಹಿಡಿದು ನುಗ್ಗಿದ್ದ. ಮಾತ್ರವಲ್ಲದೆ ಆಯುಷ್, ಅಹಾನ್ ಮತ್ತು ಯುವರಾಜ್ ಎಂಬ ಮಕ್ಕಳನ್ನು ಕಡಿದಿದ್ದ. ತೀವ್ರವಾಗಿ ಗಾಯಗೊಂಡಿದ್ದ ಆಯುಷ್, ಅಹಾನ್ ಸ್ಥಳದಲ್ಲಿಯೇ ಅಸುನೀಗಿದ್ದಾರೆ.
ಕೃತ್ಯವೆಸಗಿದ ಬಳಿಕ ಇಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಪೈಕಿ ಸಾಜಿದ್ (23) ಎಂಬಾತ ಪೊಲೀಸರತ್ತ ಗುಂಡು ಹಾರಿಸಿದ್ದು, ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿದಾಗ ಆತ ಅಸುನೀಗಿದ್ದಾನೆ.
ಇದನ್ನೂ ಓದಿ: 2 ಪ್ರತ್ಯೇಕ ಎನ್‌ಕೌಂಟರ್: 6 ನಕ್ಸಲರ ಹತ್ಯೆ, ಮಹಾರಾಷ್ಟ್ರ, ಛತ್ತೀಸ್‌ಗಢದಲ್ಲಿ ಕಾರ್ಯಾಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
MUST WATCH
ಹೊಸ ಸೇರ್ಪಡೆ
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Kasaragod: ಯುವತಿ ನಾಪತ್ತೆ; ದೂರು ದಾಖಲು
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.