ಪಾಕ್‌ಗೆ ಬಿಸಿ ಮುಟ್ಟಿಸುವ ಕೆಲಸ ಚುರುಕಾಗಲಿ

Team Udayavani, Jan 15, 2018, 6:55 AM IST

bipin.jpg

ಹೊಸದಿಲ್ಲಿ: ಗಡಿಯಾಚೆ ಉಗ್ರರನ್ನು ಕಳುಹಿಸುತ್ತಿರುವಂಥ ಪಾಕಿಸ್ಥಾನಕ್ಕೆ ಬಿಸಿ ಮುಟ್ಟಿಸುವ ಕೆಲಸ ಇನ್ನಷ್ಟು ಚುರುಕಾಗಬೇಕು. ಹೊಸ ಹೊಸ ಕಾರ್ಯತಂತ್ರಗಳನ್ನು ರೂಪಿಸುವ ಮೂಲಕ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಬೇಕು ಎಂದು ಭೂಸೇನಾ ಮುಖ್ಯಸ್ಥ  ಜ| ಬಿಪಿನ್‌ ರಾವತ್‌ ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಗೆ ಭಾನುವಾರ ನೀಡಿದ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕೆಂದರೆ ಸೇನಾ ಕಾರ್ಯಾ ಚರಣೆಯ ಜೊತೆ ಜತೆಗೇ ಸರಕಾರದ ಇಚ್ಛಾಶಕ್ತಿಯೂ ಸಾಗಬೇಕು ಎಂದಿದ್ದಾರೆ. ತಾವು ಅಧಿಕಾರ ವಹಿಸಿಕೊಂಡಾಗಿನಿಂದ ಪರಿಸ್ಥಿತಿಯು ಸ್ವಲ್ಪಮಟ್ಟಿಗೆ ಸುಧಾರಿಸಿದೆ ಎಂದೂ ಅವರು ಹೇಳಿದ್ದಾರೆ. ಸರಕಾರವು ಈಗಾಗಲೇ ಸಂಧಾನ ಕಾರರೊಬ್ಬರನ್ನು ನೇಮಿಸಿದೆ. ಅವರು ಕಣಿವೆ ರಾಜ್ಯದ ಜನರ ಸಂಕಷ್ಟಗಳು, ಅಹವಾಲುಗಳನ್ನು ಆಲಿಸಲಿದ್ದಾರೆ. ನಂತರ ರಾಜಕೀಯ ಮಟ್ಟದಲ್ಲೇ ಅವುಗಳನ್ನು ಪರಿಹರಿಸಲಾಗುತ್ತದೆ. ಸೇನೆಯ ಬಳಕೆಯು ಕಾಶ್ಮೀರ ವಿವಾದ ಬಗೆಹರಿಸುವ ಒಂದು ಭಾಗವಷ್ಟೆ. ಹಿಂಸೆಗೆ ಪ್ರಚೋದಿಸುವಂಥ ಉಗ್ರರನ್ನು ಮೊದಲು ಸದೆಬಡಿಯಬೇಕು. ನಂತರ, ಯುವಕರು ಉಗ್ರವಾದದತ್ತ ಆಕರ್ಷಿತರಾಗದಂತೆ ಮಾಡಬೇಕು. ಸೇನೆಯು ಈಗಾಗಲೇ ಉಗ್ರ ಸಂಘಟನೆಗಳ ಮೇಲೆ ಒತ್ತಡ ತರುವಂಥ ಕೆಲಸ ಮಾಡುತ್ತಿದೆ ಎಂದೂ ಹೇಳಿದ್ದಾರೆ ಜ. ರಾವತ್‌.
ಪಾಕ್‌ ಪ್ರತಿಕ್ರಿಯೆ: ಗಡಿ ದಾಟಿ ಪಾಕಿಸ್ಥಾನದ ಮೇಲೆ ದಾಳಿ ನಡೆಸಲು ಗೊತ್ತಿದೆ ಎಂಬ ಜ. ರಾವತ್‌ ಅವರ ಹೇಳಿಕೆಗೆ ರವಿವಾರ ಪಾಕಿಸ್ಥಾನ ಪ್ರತಿಕ್ರಿಯೆ ನೀಡಿದೆ. ಜ| ರಾವತ್‌ ಅವರು ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದಾರೆ. ಅವರು ಬಯಸಿದ್ದೇ ಆದಲ್ಲಿ, ನಮ್ಮ ಸಾಮರ್ಥ್ಯವನ್ನು ಪರೀಕ್ಷಿಸಲಿ. ಅವರಲ್ಲಿರುವ ಅನುಮಾನವನ್ನು ನಿವಾರಿಸಲು ನಮಗೂ ಗೊತ್ತು ಎಂದು ಪಾಕ್‌ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ. 
ಹೊಸ ಬೆಟಾಲಿಯನ್‌: ಇದೇ ವೇಳೆ, ದೇಶದ ಎರಡು ಪ್ರಮುಖ ಗಡಿ ಭದ್ರತಾ ಪಡೆಗಳಾದ ಬಿಎಸ್‌ಎಫ್ ಮತ್ತು ಐಟಿಬಿಪಿಗೆ 15 ಹೊಸ ಬೆಟಾಲಿಯನ್‌ ಅನ್ನು ಸೇರಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಚೀನ, ಪಾಕಿಸ್ಥಾನ ಮತ್ತು ಬಾಂಗ್ಲಾದ ಗಡಿಗಳಲ್ಲಿ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.