ಡ್ರಗ್ಸ್ ದಂಧೆಯಲ್ಲಿ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ… ?!

ಬಿಜೆಪಿಯವರ ಅಸಲಿ ಮುಖ ಬಯಲಾಗುತ್ತಿದೆ : ತೃಣಮೂಲ ಕಾಂಗ್ರೆಸ್ ನ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಪ್ರತಿಕ್ರಿಯಿಸಿದ್ದಾರೆ.

Team Udayavani, Feb 21, 2021, 11:25 AM IST

Bengal BJP Leader Caught With Cocaine, Names Colleague Close To Kailash Vijayvargiya

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಕೋಲ್ಕತ್ತಾದ ನ್ಯೂ ಅಲಿಪೋರ್ ನಲ್ಲಿ 100 ಗ್ರಾಂ ನಷ್ಟು ತೂಕದ ಕೊಕೇನ್ ನನ್ನು ಸಾಗಿಸುತ್ತಿದ್ದ ಬಿಜೆಪಿಯ ಯುವ ಮೋರ್ಚಾದ ಪಮೇಲಾ ಗೋಸ್ವಾಮಿ ಹಾಗೂ ಪ್ರಬಿರ್ ಡೇ ಅವರನ್ನು ಪೋಲಿಸರು ಬಂಧಿಸಿರುವ ಪ್ರಕರಣ ಈಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರಮಿಳಾ ಗೋಸ್ವಾಮಿ ಅವರ ಪರ್ಸ್ ಮತ್ತು ಕಾರಿನ ಸೀಟಿನಡಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ಕೊಕೇನ್ ಪತ್ತೆಯಾದ ಹಿನ್ನಲೆಯಲ್ಲಿ ಪಮೇಲಾ ಅವರನ್ನು ಪೋಲಿಸರು ಬಂಧಿಸಿದ್ದರು.

ಓದಿ : ಹಾಸನ: ಟಾಟಾಸುಮೋ ಗೆ ಕ್ವಾಲಿಸ್ ಡಿಕ್ಕಿ; ಸ್ಥಳದಲ್ಲೇ ನಾಲ್ವರು ಸಾವು, 13 ಮಂದಿಗೆ ಗಂಭೀರ ಗಾಯ

ಗೋಸ್ವಾಮಿ ಅವರು ಸ್ಥಳೀಯ ನ್ಯಾಯಾಲಯವೊಂದರಲ್ಲಿ ಕಾರಿನಿಂದ ಇಳಿಯುತ್ತಿದ್ದಂತೆಯೇ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ ರಾಕೇಶ್ ಸಿಂಗ್, ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ವರದಿಗಾರರತ್ತ ಮುಖಮಾಡಿ ಗಟ್ಟಿ ಧ್ವನಿಯಲ್ಲಿ ಕೂಗಿ ಹೇಳಿದ್ದಾರೆ. ಆತ ತನ್ನ ವಿರುದ್ಧ ಸಂಚು ರೂಪಿಸಿದ್ದಾನೆ ಮತ್ತು  ಈ ಬಗ್ಗೆ ಸಿಐಡಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು.

ವಿಜಯವರ್ಗಿಯಾ ಅವರು ಪಶ್ಚಿಮ ಬಂಗಾಳದ ಬಿಜೆಪಿಯ ಉಸ್ತುವಾರಿ. ಪಶ್ಚಿಮ ಬಂಗಾಳದಲ್ಲಿ ಶೀಘ್ರದಲ್ಲೇ ಚುನಾವಣೆ ಕೂಡ ನಡೆಯಲಿದೆ.

ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲೇಬೇಕು. ರಾಕೇಶ್ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ ಎಂದು ಪಮೇಲಾ ಆರೋಪಿಸಿದ್ದಾರೆ.

ಪಮೇಲಾ ಗೋಸ್ವಾಮಿ ತಮ್ಮೊಂದಿಗೆ 100 ಗ್ರಾಮ್ ತೂಕದ ಕೊಕೇನ್ ತೆಗೆದುಕೊಂಡು ಹೋಗುತ್ತಿದ್ದಾರೆ ಎಂಬ ಆರೋಪದ ಮೇಲೆ ಪಮೇಲಾ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಓದಿ : ಪೊಗರು ಮೊದಲ ದಿನದ ಕಲೆಕ್ಷನ್‌ 10.05 ಕೋಟಿ ರೂ.!

“ಕಾನೂನು ಈ ಬಗ್ಗೆ ಸೂಕ್ತವಾದ ಕ್ರಮ ಕೈಗೊಳ್ಳುತ್ತದೆ. ಪ್ರಮಿಳಾ ಅವರ ಪರ್ಸ್ ನಲ್ಲಿ ಕೊಕೇನ್ ನ್ನು ಯಾರೋ ಇಟ್ಟಿದ್ದಾರೆ ಎನ್ನುವ ಸಂಶಯವಾಗುತ್ತಿದೆ. ತನಿಖೆ ನಡೆಸಬೇಕಾಗಿದೆ. ಎಷ್ಟಿದ್ದರೂ ಪೊಲೀಸರು ರಾಜ್ಯ ಸರ್ಕಾರದ ಅಡಿಯಲ್ಲಿದೆ. ಪ್ರಕರಣ ಯಾವ ದಿಕ್ಕಿಗೂ ಕೂಡ ತಿರುಗಬಹುದು” ಎಂದು ಬಿಜೆಪಿಯ ನಾಯಕ ಸಮೀಕ್ ಭಟ್ಟಾಚಾರ್ಯ ಹೇಳಿದ್ದಾರೆ.

ಇನ್ನು, “ ಬಂಗಾಳದಲ್ಲಿ ಈ ರೀತಿಯ ಘಟನೆ ಸಂಭವಿಸುತ್ತಿರುವುದು ನಾಚಿಕೆಯ ಸಂಗತಿ, ಬಿಜೆಪಿಯವರ ಅಸಲಿ ಮುಖ ಬಯಲಾಗುತ್ತಿದೆ. ಈ ಹಿಂದೆ ಒಬ್ಬ ಬಿಜೆಪಿ ನಾಯಕನ ಹೆಸರು ಮಕ್ಕಳ ಕಳ್ಳಸಾಗಾಣೆಯಲ್ಲೂ ಕೇಳಿ ಬಂದಿತ್ತು” ಎಂದು ತೃಣಮೂಲ ಕಾಂಗ್ರೆಸ್ ನ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಪ್ರತಿಕ್ರಿಯಿಸಿದ್ದಾರೆ.

“ಪಮೇಲಾ ಗೋಸ್ವಾಮಿ ಹಾಗೂ ಪ್ರಬೀರ್ ಪದೇ ಪದೇ ಒಂಉ ನಿರ್ದಿಷ್ಟ ಕೆಫೆಗೆ ಭೇಟಿ ನೀಡುತ್ತಿರುವುದು ಹಾಗೂ ಬೈಕಿನಲ್ಲಿ ಬರುವ ಯುವಕರೊಂದಿಗೆ ವಹಿವಾಟು ನಡೆಸುತ್ತಿರುವುದು ಹಲವು ಭಾರಿ ಕಂಡುಬಂದಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗೋಸ್ವಾಮಿ ಅವರು 2019 ರಲ್ಲಿ ಬಿಜೆಪಿಗೆ ಸೇರುವ ಮೊದಲು, ಏರ್ ಹೊಸ್ಟೆಸ್, ಮಾಡೆಲ್ ಮತ್ತು ಟಿವಿ ಧಾರಾವಾಹಿ ನಟಿಯಾಗಿ ಕೆಲಸ ಮಾಡಿದ್ದಾರೆಂದು ತಿಳಿದುಬಂದಿದ್ದು, ನಂತರ ಅವರನ್ನು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಹೂಗ್ಲಿ ಜಿಲ್ಲೆಯ ಯುವ ಮೋರ್ಚಾ ವೀಕ್ಷಕರಾಗಿ ನೇಮಿಸಲಾಯಿತು ಎಂದು ವರದಿಯಾಗಿದೆ.

ಪಮೇಲಾ, ಹಲವು ಬಿಜೆಪಿ ಪ್ರಮುಖ ನಾಯಕರೊಂದಿಗೆ ತೆಗೆಸಿಕೊಂಡ ಫೋಟೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಓದಿ : ಪ್ರಿಯಾಂಕ ಗಾಂಧಿ ವಾದ್ರಾ ಇಂದು ಪ್ರಯಾಗ್ ರಾಜ್ ಗೆ ಭೇಟಿ..!

ಟಾಪ್ ನ್ಯೂಸ್

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

ED: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹೋದರ ಫ್ಲ್ಯಾಟ್‌ ಇ.ಡಿ.ವಶಕ್ಕೆ

ED: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹೋದರ ಫ್ಲ್ಯಾಟ್‌ ಇ.ಡಿ.ವಶಕ್ಕೆ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.