ಪಶ್ಚಿಮಬಂಗಾಳ ಬಿಜೆಪಿ ಅಧ್ಯಕ್ಷ ಘೋಷ್ ಮೇಲೆ ಗುಂಪಿನಿಂದ ಏಕಾಏಕಿ ಹಲ್ಲೆ
Team Udayavani, Aug 30, 2019, 10:44 AM IST
ಕೋಲ್ಕತಾ:ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಧ್ಯಕ್ಷ ದಿಲೀಪ್ ಘೋಷ್ ಮೇಲೆ ಗುಂಪೂಂದು ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಪಶ್ಚಿಮಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಘೋಷ್ ಅವರು ಇಂದು ಬೆಳಗ್ಗೆ ಎಂದಿನಂತೆ ಬೆಳಗ್ಗಿನ ವಾಕಿಂಗ್ ಗಾಗಿ ಮನೆಯಿಂದ ಹೊರಬಂದಿದ್ದರು. ಅಲ್ಲದೇ ಈ ವೇಳೆ ಚಾಯ್ ಪೇ ಚರ್ಚೆ ನಡೆಸುತ್ತಿದ್ದಾಗ ಗುಂಪಿನಲ್ಲಿ ಆಗಮಿಸಿದ್ದವರು ಹಲ್ಲೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಹಲ್ಲೆ ಘಟನೆಯಲ್ಲಿ ಇಬ್ಬರು ಬಿಜೆಪಿ ಬೆಂಬಲಿಗರು ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ನ ಕೆಲವು ಬೆಂಬಲಿಗರು ಹಾಜರಿದ್ದರು ಎಂದು ಘೋಷ್ ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಘೋಷ್ ಮೇಲೆ ಹಲ್ಲೆ ನಡೆದಿರುವುದು ಇದೇ ಮೊದಲ ಬಾರಿಯಲ್ಲ. 2018ರಲ್ಲಿ ಮಿಡ್ನಾಪುರದಲ್ಲಿ ಘೋಷ್ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲೂ ಐವರು ಗಾಯಗೊಂಡಿದ್ದರು. ಘೋಷ್ ಅವರ ಕಾರನ್ನು ಕೂಡಾ ಪುಡಿಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.