ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ

Team Udayavani, Jun 21, 2023, 6:14 PM IST

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ.

ಇತ್ತೀಚೆಗೆ ಎಲ್​ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ತಾನು ಪುರುಷ ಎಂದು ಗುರುತಿಸಿಕೊಂಡಿದ್ದೇನೆ ಮತ್ತು ದೈಹಿಕವಾಗಿಯೂ ಪುರುಷನಾಗಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ “ಇಂಡಿಯಾ ಟುಡೇ” ಮಾತನಾಡಿರುವ ಅವರು, “ ನನಗೆ ನನ್ನ ಪೋಷಕರ ಗುರುತು ಅಥವಾ ಕುಟುಂಬದ ಗುರುತು ದೊಡ್ಡ ವಿಷಯವಲ್ಲ. ನನ್ನ ಎಲ್​ಜಿಬಿಟಿಕ್ಯೂ( LGBTQ) ಚಳುವಳಿಯ ಭಾಗವಾಗಿ ನಾನು ಇದನ್ನು ಮಾಡುತ್ತಿದ್ದೇನೆ. ಟ್ರಾನ್ಸ್ ಮ್ಯಾನ್ ಆಗಿ ನಾನು ಪ್ರತಿದಿನ ಎದುರಿಸುತ್ತಿರುವ ಸಾಮಾಜಿಕ ಕಿರುಕುಳವನ್ನು ನಿಲ್ಲಿಸಲು ನಾನು ಬಯಸಿದ್ದೇನೆ. ನಾನು ವಯಸ್ಕನಾಗಿದ್ದೇನೆ. ನನಗೆ ಈಗ 41 ವರ್ಷ ಆಗಿದೆ ನನ್ನ ಜೀವನಕ್ಕೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು ನಾನೇ ತೆಗೆದುಕೊಳ್ಳಬಹುದು. ಅದೇ ರೀತಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ದಯವಿಟ್ಟು ನನ್ನ ಪೋಷಕರನ್ನು ಇದಕ್ಕೆ ಎಳೆಯಬೇಡಿ. ಮಾನಸಿಕವಾಗಿ ತನ್ನನ್ನು ತಾನು ಪುರುಷನೆಂದು ಪರಿಗಣಿಸುವವನು ಸಹ ಮನುಷ್ಯನೇ, ನಾನು ಮಾನಸಿಕವಾಗಿ ಪುರುಷ ಎಂದು ಪರಿಗಣಿಸಿದ್ದೇನೆ. ಅದು ಈಗ ದೈಹಿಕವಾಗಿರಬೇಕೆಂದು ನಾನು ಬಯಸಿದ್ದೇನೆ” ಎಂದಿದ್ದಾರೆ.

“ನನ್ನ ಈ ನಿರ್ಧಾರದ ವಿರುದ್ಧ ಏನೇ ಬಂದರೂ ನಾನು ಹೋರಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಸಿದ್ದ. ದಯವಿಟ್ಟು ಮಾಧ್ಯಮಗಳು ಈ ಸುದ್ದಿಯನ್ನು ತಿರುಚಿಕೊಂಡು ಹಾಕಬೇಡಿ”ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ನನ್ನನು ಬಾಲ್ಯದಿಂದಲೂ ಅರ್ಥ ಮಾಡಿಕೊಂಡ ನನ್ನ ಪೋಷಕರು ನನ್ನ ನಿರ್ಧಾರವನ್ನು ಬೆಂಬಲಿಸಬಹುದು ಎಂದು ಅವರು ಹೇಳಿದ್ದಾರೆ.

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ʼಸುಚೇತನಾʼ ದಿಂದ ‘ಸುಚೇತನ್’ ಆಗಲು ಬಯಸಿದ್ದೇನೆ.  ಈ ಸಂಬಂಧ ಕಾನೂನು ಸಲಹೆಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇನೆ ಮತ್ತು ಕಾರ್ಯವಿಧಾನಕ್ಕೆ ಅಗತ್ಯವಿರುವ ಎಲ್ಲಾ ಪ್ರಮಾಣಪತ್ರಗಳಿಗಾಗಿ ಮನೋವೈದ್ಯರನ್ನು ಸಂಪರ್ಕಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.