ಪಶ್ಚಿಮ ಬಂಗಾಳ: ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರ ಆಕ್ರೋಶ
Team Udayavani, Mar 16, 2021, 4:52 PM IST
ಕೊಲ್ಕತ್ತಾ : ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ಕುರಿತು ರಾಜ್ಯದ ವಿವಿಧ ಭಾಗದ ನೂರಾರು ಬಿಜೆಪಿ ಕಾರ್ಯಕರ್ತರು ಇಲ್ಲಿನ ಪಕ್ಷದ ಚುನಾವಣಾ ಕಚೇರಿ ಎದುರುಗಡೆ ಮಂಗಳವಾರ(ಮಾ.16) ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಪಕ್ಷದ ಕ್ಯಾನಿಂಗ್ ವೆಸ್ಟ್, ಮಗ್ರಾಹತ್, ಕುಲ್ತಾಲಿ, ಜಾಯ್ ನಗರ್ ಮತ್ತು ಬಿಷ್ಣುಪುರದ ನೂರಾರು ಕಾರ್ಯಕರ್ತರು ವಿಧಾನ ಸಭಾ ಚುನಾವಣೆಗೆ ಆಯ್ಕೆ ಮಾಡಲಾದ ಅಭ್ಯರ್ಥಿಗಳ ಪಟ್ಟಿಯನ್ನು ಖಂಡಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ. ಕೆಲವೆಡೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿಗೂ ಈ ಘಟನೆ ಸಾಕ್ಷಿಯಾಗಿದೆ.
ಓದಿ : ‘ಬ್ಲ್ಯಾಕ್ ಮೇಲ್ ಸಂಪುಟ’ ‘ಕಾಂಗ್ರೆಸ್ ಹಗೆತನ’: ಮತ್ತೆ ಕಾಂಗ್ರೆಸ್- ಬಿಜೆಪಿ ಟ್ವೀಟ್ ವಾರ್
ಕ್ಯಾನಿಂಗ್ ವೆಸ್ಟ್ ವಿದಾನ ಸಭಾ ಕ್ಷೇತ್ರದಿಂದ ಅರ್ನಾಬ್ ರಾಯ್ ಅವರ ಉಮೇದುವಾರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು ನಾವು ಬಯಸುತ್ತೇವೆ. ಕೇವಲ ಐದು ದಿನಗಳ ಹಿಂದಷ್ಟೇ ತೃಣಮೂಲ ಕಾಂಗ್ರೆಸ್ ನಿಂದ ಬಂದು ಬಿಜೆಪಿಗೆ ಸೇರ್ಪಡೆಗೊಂಡ ಅವರಿಗೆ ನಾಮ ನಿರ್ದೇಶನವನ್ನು ನೀಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು.
ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ತೃಣಮೂಲ ಕಾಂಗ್ರೆಸ್ ನಿಂದ ಬಂದ ನಾಯಕರಿಗೆ ಬಿಜೆಪಿ ನಾಮನಿರ್ದೇಶನವನ್ನು ನೀಡಿದೆ, ಕೆಲವರು ಬಿಜೆಪಿ ನಾಯಕರ ವಿರುದ್ಧ ಈ ಹಿಂದೆ ಜಾತಿ ನಿಂದನೆ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಪ್ರತಿಭಟನಾ ನಿರತ ಬಿಜಪಿ ಕಾರ್ಯಕರ್ತರು ಆರೋಪಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಬಂದವರಿಗೆ ನೀಡಿದ ನಾಮ ನಿರ್ದೇಶನವನ್ನು ಹಿಂತೆಗೆದುಕೊಳ್ಳದಿದ್ದರೇ, ನಾವು ಸುಮ್ಮನೆ ಕುಳಿತುಕೊಳ್ಳುತ್ತೇವೆ. ಪಕ್ಷಕ್ಕಾಗಿ ಕೆಲಸ ಮಾಡುವುದಿಲ್ಲವೆಂದು ಮಗ್ರಾಹತ್ ನ ಬಿಜೆಪಿ ಪಕ್ಷದ ಕಾರ್ಯಕರ್ತ ರೋನಿ ಮನ್ನಾ ಆಕ್ರೊಶ ಹೊರ ಹಾಕಿದ್ದಾರೆ.
ಓದಿ : ಪಶ್ಚಿಮ ಬಂಗಾಳ: ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸ್ವಪನ್ ದಾಸ್ ಗುಪ್ತಾ ರಾಜಿನಾಮೆ
ಈ ಸಂದರ್ಭ, ಬಿಜೆಪಿ ಚುನಾವಣಾ ಕಚೇರಿ ಎದುರು ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ತೆಗೆಯಲು ಪ್ರತಿಭಟನಾಕಾರರು ಮುಂದಾದರು.
ಪಶ್ಚಿಮ ಬಂಗಾಳದಲ್ಲಿ ಮೂರನೇ ಮತ್ತು ನಾಲ್ಕನೇ ಹಂತದ ಚುನಾವಣೆಗೆ ಪಕ್ಷದ 63 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ ನಂತರ ಭಾನುವಾರ ಸಂಜೆಯಿಂದ ಬಿಜೆಪಿಯ ಚುನಾವಣಾ ಕಚೇರಿ ಮತ್ತು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಪಕ್ಷದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಖಂಡಿಸಿ ನಡೆಸಿದ ಪ್ರತಿಭಟನೆ ಕೆಲವು ಕಡೆಗಳಲ್ಲಿ ಸ್ವಲ್ಪ ಮಟ್ಟಿಗೆ ಹಿಂಸಾಚಾರಕ್ಕೂ ತಿರುಗಿತು ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳಲ್ಲಿ ವರದಿಯಾಗಿವೆ.
ಬಿಜೆಪಿಗೆ ಹೆಚ್ಚು ಹೆಚ್ಚು ಮಂದಿ ಸೇರ್ಪಡೆಗೊಳ್ಳುತ್ತಿರುವ ಕಾರಣದಿಮದಾಗಿ ಆಕಂಕ್ಷಿಗಳ ಸಂಖ್ಯೆ ಜಾಸ್ತಿಯಾಗಿದೆ. ಈ ಸಮಸ್ಯೆಗಳನ್ನು ಪಕ್ಷ ಬಗೆಹರಿಸಲಿದೆ ಎಂದು ಬಿಜಿಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಮತನ್ ಬಸು ಸಮರ್ಥಿಸಿಕೊಂಡಿದ್ದಾರೆ.
ಓದಿ : ರಿಷಬ್-ಪ್ರಮೋದ್ ಸಂದರ್ಶನ: ”ಹೀರೋ” ಸಿನಿಮಾದ ತೆರೆಯ ಹಿಂದಿನ ಕಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.