ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿದ್ದಕ್ಕೆ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿದ ಪೋಷಕರು
Team Udayavani, Jul 25, 2022, 4:07 PM IST
ಕೊಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರನಲ್ಲಿ ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿದ್ದಕ್ಕೆ ಪೋಷಕರ ಗುಂಪು ಮಹಿಳಾ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ಹಲ್ಲೆ ನಡೆಸಿದ ಕಳವಳಕಾರಿ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ತರಗತಿಗೆ ಗೈರಾದ ವಿದ್ಯಾರ್ಥಿನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣದಲ್ಲಿ ಪೋಷಕರ ಗುಂಪೊಂದು ಶಾಲೆಗೆ ಆಗಮಿಸಿ, ಮುಖ್ಯೋಪಾಧ್ಯಾಯರ ಕೊಠಡಿ ಮುಂದೆ ಜಮಾಯಿಸಿ, ತದನಂತರ ಶಿಕ್ಷಕರ ಕೊಠಡಿಗೆ ನುಗ್ಗಿ ಮಹಿಳಾ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಶಾಲಾ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಶಾಲೆಗೆ ದೌಡಾಯಿಸಿ, ಶಿಕ್ಷಕರಿಗೆ ಭದ್ರತೆಯ ಭರವಸೆ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಲ್ಲೆ ನಡೆಸಿದ ನಾಲ್ವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ರಾಜಕೀಯ ಸಂಚಲನ ಮೂಡಿಸಿದ್ದು, ಶಿಕ್ಷಕಿಯ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನು ಬಿಜೆಪಿ ಯುವ ಘಟಕದ ಉಪಾಧ್ಯಕ್ಷ ತರುಣ್‌ಜ್ಯೋತಿ ಟ್ವೀಟ್ ಮಾಡಿ, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
A teacher upon scolding a Muslim student was brutally assaulted by the parents of that child & others. A teacher was stripped naked & beaten up badly. Inspite of specific complaint Hili Police Station, South Dinajpur police didn’t arrest anyone. @WBPolice please take steps. pic.twitter.com/Po8Yh3UhZL
— Tarunjyoti Tewari (@tjt4002) July 24, 2022
ಇದನ್ನೂ ಓದಿ: ಮಡಿಲಲ್ಲಿದ್ದ ಮಗುವಿಗೆ ಹಾಲುಣಿಸುತ್ತಿರುವಾಗಲೇ 25 ವರ್ಷದ ತಾಯಿ ಸಾವು
ಬಿಜೆಪಿ ಸಂಸದ ಮತ್ತು ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರು ಶಾಲೆಗೆ ಭೇಟಿ ನೀಡಿ, ಶಿಕ್ಷಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.