Bengal: ಅತ್ಯಾಚಾರಗೈದು ಅಪ್ರಾಪ್ತ ಬಾಲಕಿಯ ಕೊಲೆ; ಭುಗಿಲೆದ್ದ ಹಿಂಸಾಚಾರ
ದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋದ ಪೊಲೀಸರು...!
Team Udayavani, Apr 22, 2023, 7:02 PM IST
ಕಲಿಯಾಗಂಜ್ : ಪಶ್ಚಿಮ ಬಂಗಾಳದ ಕಲಿಯಾಗಂಜ್ನಲ್ಲಿ ಶನಿವಾರ ಅಪ್ರಾಪ್ತ ಬುಡಕಟ್ಟು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆಯ ನಂತರ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ಸಿಬಂದಿ ಸಂತ್ರಸ್ತೆಯ ಮೃತದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ.
ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ಶುಕ್ರವಾರ ಕೃತ್ಯ ನಡೆದಿದ್ದು, ಸ್ಥಳೀಯರಿಗೆ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಉತ್ತರ ದಿನಜ್ಪುರ ಜಿಲ್ಲೆಯ ಗಂಗುವಾ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗುರುವಾರ ಸಂಜೆ ಟ್ಯೂಷನ್ಗೆ ಹೋದ ನಂತರ ನಾಪತ್ತೆಯಾಗಿದ್ದಳು. ಸಂಬಂಧಿಕರು ಮತ್ತು ಗ್ರಾಮಸ್ಥರು ವ್ಯಾಪಕ ಹುಡುಕಾಟ ನಡೆಸಿದರೂ ಇಡೀ ರಾತ್ರಿ ಆಕೆಯ ಕುಟುಂಬಕ್ಕೆ ಅವಳನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ.
ಉದ್ರಿಕ್ತ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ, ನಂತರ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ. ಸ್ಥಳೀಯರು ರಸ್ತೆ ತಡೆ ನಡೆಸಿ ಟೈರ್ ಗಳನ್ನು ಸುಟ್ಟು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹಂಚಿಕೊಂಡ ವಿಡಿಯೋದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಬಾಲಕಿಯ ಮೃತ ದೇಹವನ್ನು ಎಳೆಯುವುದನ್ನು ಕಾಣಬಹುದಾಗಿದೆ. ಅಪ್ರಾಪ್ತ ಬಾಲಕಿ ರಾಜ್ಬೊಂಗ್ಷಿ ಸಮುದಾಯಕ್ಕೆ ಸೇರಿದವಳು ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.