ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್: BSY,ಡಿಕೆಶಿಗೆ ಬಿಗ್ ರಿಲೀಫ್
Team Udayavani, Jul 14, 2017, 1:42 PM IST
ಹೊಸದಿಲ್ಲಿ : ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಎಂಬಂತೆ ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ಪ್ರಕರಣವನ್ನು ಸುಪ್ರೀಂಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಪ್ರಕರಣದ ವಿವರ
ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ ಹೋಬಳಿಯ ಬೆನ್ನಿಗಾನಹಳ್ಳಿಯಲ್ಲಿನ ಸರ್ವೆ ನಂ.50/2ರಲ್ಲಿನ 4 ಎಕರೆ 20 ಗುಂಟೆ ಜಮೀನನ್ನು ಡಿ.ಕೆ. ಶಿವಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದಾಗ ಖರೀದಿಸಿದ್ದರು. ನಂತರ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಎಲ್ಲ ದಾಖಲೆಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳಿಂದ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು. ಬಳಿಕ ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಮನವಿ ಮೇರೆಗೆ ಈ ಜಾಗವನ್ನು ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿಸಿದ್ದಾರೆ ಎಂದು ಆರೋಪಿಸಿ ಟಿ.ಜೆ. ಅಬ್ರಾಹಾಂ ಮತ್ತು ಕಬ್ಬಾಳೆಗೌಡ ಎಂಬುವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.