Mumbai: ಎರ್ರಾಬಿರ್ರಿ ಸಾಗಿದ ಬಸ್; ಆರು ಮಂದಿ ಸಾವು, 49 ಜನರಿಗೆ ಗಾಯ
Team Udayavani, Dec 10, 2024, 11:36 AM IST
ಮುಂಬೈ: ಮುಂಬೈನ ಕುರ್ಲಾ ಪ್ರದೇಶದಲ್ಲಿ ಸೋಮವಾರ (ಡಿ.09) ರಾತ್ರಿ ಪಾದಚಾರಿಗಳು ಮತ್ತು ವಾಹನಗಳಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ. ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ರಾತ್ರಿ 9:45 ರ ಸುಮಾರಿಗೆ ಘಟನೆ ಸಂಭವಿಸಿದ್ದು, ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆ (ಬೆಸ್ಟ್) ಬಸ್ ಚಾಲಕನ ನಿಯಂತ್ರಣ ತಪ್ಪಿ, ಹಲವಾರು ವಾಹನಗಳು ಮತ್ತು ಪಾದಚಾರಿಗಳ ಮೇಲೆ ಹರಿದು ಹೌಸಿಂಗ್ ಸೊಸೈಟಿಯ ಗೋಡೆಗೆ ಡಿಕ್ಕಿ ಹೊಡೆದಿದೆ.
ಘಟನೆ ನಡೆದಾಗ ಬಸ್ ಕುರ್ಲಾ ನಿಲ್ದಾಣದಿಂದ ಅಂಧೇರಿಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ನಿಯಂತ್ರಣ ತಪ್ಪಿದ ಬಸ್ ಎದುರಿಗೆ ಸಿಕ್ಕ ಜನರು, ವಾಹನಗಳಿಗೆ ಹೊಡೆಯುತ್ತಾ ಸಾಗಿತು. ಕೊನೆಗೆ ಗೋಡೆಗೆ ಡಿಕ್ಕಿ ಹೊಡೆದ ನಂತರ ಬಸ್ ನಿಂತಿತು.
ಮೃತರನ್ನು ಕನ್ನಿಸ್ ಫಾತಿಮಾ ಅನ್ಸಾರಿ, ಶಿವಂ ಕಶ್ಯಪ್, ಅಫ್ರೀನ್ ಅಬ್ದುಲ್ ಸಲೀಂ ಶಾ ಮತ್ತು ಅನಮ್ ಶೇಖ್ ಎಂದು ಗುರುತಿಸಲಾಗಿದೆ.
ಬೆಸ್ಟ್ ಬಸ್ ಚಾಲಕ ಸಂಜಯ್ ಮೋರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅವರು ಕುರ್ಲಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಅನೈಚ್ಛಿಕ ನರಹತ್ಯೆಯ ಆರೋಪವನ್ನು ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.