ಕೋವಿಡ್ ಬಗ್ಗೆ ಎಚ್ಚರ: ಕರ್ನಾಟಕ ಸೇರಿ 7 ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ
ಹಬ್ಬಗಳು ಬರುತ್ತಿವೆ
Team Udayavani, Aug 7, 2022, 7:15 AM IST
ಹೊಸದಿಲ್ಲಿ: ದೇಶಾದ್ಯಂತ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಕೇಂದ್ರ ಸರಕಾರವು ಎಚ್ಚರಿಕೆಯ ಸಂದೇಶ ರವಾನಿಸಿದೆ.
ಅರ್ಹ ಜನರಿಗೆ ಲಸಿಕೆ ವಿತರಣೆಗೆ ವೇಗ ನೀಡಿ, ಕೊರೊನಾ ಪರೀಕ್ಷೆ ಹೆಚ್ಚಳ ಮಾಡಿ ಮತ್ತು ಮಾರ್ಗ ಸೂಚಿ ಗಳನ್ನು ತಪ್ಪದೇ ಪಾಲಿಸುವಂತೆ ನೋಡಿಕೊಳ್ಳಿ ಎಂದು ಕರ್ನಾಟಕ, ಕೇರಳ, ದಿಲ್ಲಿ, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಮತ್ತು ತೆಲಂಗಾಣ ಸರಕಾರಕ್ಕೆ ಬರೆದ ಪತ್ರದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸೂಚಿಸಿದ್ದಾರೆ.
ಹಬ್ಬಗಳ ಋತು ಆರಂಭವಾದ ಕಾರಣ ಜನರು ಒಂದೇ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂಥ, ಅಂತಾರಾಜ್ಯ ಪ್ರಯಾಣ ಬೆಳೆಸುವಂಥ ಸಾಧ್ಯತೆ ಹೆಚ್ಚಿರುತ್ತದೆ. ಇಂಥ ಸಂದರ್ಭದಲ್ಲಿ ಸೋಂಕು ಬೇಗವೆ ವ್ಯಾಪಿಸುವ ಭೀತಿಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದು, ಸೋಂಕು ಪ್ರಕರಣ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
24 ಗಂಟೆಯಲ್ಲಿ 19 ಸಾವಿರ ಪ್ರಕರಣ: ಶುಕ್ರವಾರ ಬೆಳಗ್ಗೆಯಿಂದ ಶನಿವಾರದ ಬೆಳಗ್ಗೆ ನಡುವಿನ 24 ಗಂಟೆಗಳಲ್ಲಿ ದೇಶದಲ್ಲಿ 19,406 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ, ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4.41 ಕೋಟಿಗೆ ಏರಿದೆ! ಇದೇ ಅವಧಿಯಲ್ಲಿ, 49 ಜನರು ಕೊರೊನಾದಿಂದ ಮೃತಪಟ್ಟಿದ್ದು ಈವರೆಗೆ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 5,26,649 ಕ್ಕೇರಿದೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದಾಖಲೆಯಲ್ಲಿ ಈ ಅಂಶ ಗಳನ್ನು ಉಲ್ಲೇಖೀಸಲಾಗಿದೆ. ದೇಶದಲ್ಲಿ ಒಟ್ಟಾರೆ ಯಾಗಿ, ಸಕ್ರಿಯ ಪ್ರಕರಣಗಳ ಸಂಖ್ಯೆ 1,34,793ದಷ್ಟಿದೆ ಎಂದು ಇಲಾಖೆ ತಿಳಿಸಿದೆ.
ಮತ್ತೊಂದೆಡೆ, ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವವ ಸಂಖ್ಯೆಯಲ್ಲಿಯೂ ಏರಿಕೆ ಕಂಡು ಬಂದಿದೆ. ಶುಕ್ರವಾರ- ಶನಿವಾರ ನಡುವೆ ದೇಶಾದ್ಯಂತ 19,928 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ, ದೇಶದಲ್ಲಿ ಈ ಮಾರಣಾಂತಿಕ ಕಾಯಿಲೆಯಿಂದ ಚೇತರಿಸಿಕೊಂಡ ವರ ಸಂಖ್ಯೆ 4,34,65,552ಕ್ಕೇರಿದೆ. ಸೋಂಕಿನಿಂದ ಮೃತಪಡುವವರ ಪ್ರಮಾಣ ಶೇ. 1.19ರಷ್ಟಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
205 ಮಂದಿಗೆ ಲಸಿಕೆ: ದೇಶಾದ್ಯಂತ ನಡೆಸ ಲಾಗುತ್ತಿರುವ ಕೊರೊನಾ ಲಸಿಕೆ ಅಭಿಯಾನ ದಡಿ, ಶನಿವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ 205.92 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕೊರೊನಾ ಪರಿಹಾರಕ್ಕೆ ತೆರಿಗೆ ವಿನಾಯ್ತಿ: ಹೊಸ ನಿಯಮ
ಕೊರೊನಾದಿಂದ ಮೃತಪಟ್ಟ ವ್ಯಕ್ತಿಯು ಕೆಲಸ ಮಾಡುತ್ತಿದ್ದ ಕಂಪೆನಿಯಿಂದ ಅಥವಾ ಸಂಬಂಧಿಕರಿಂದ ಸಿಗುವ ಪರಿಹಾರ ಧನದ ಮೇಲೆ ತೆರಿಗೆ ವಿನಾಯಿತಿ ಪಡೆಯಲು ಕೇಂದ್ರ ತೆರಿಗೆ ಇಲಾಖೆ ಹೊಸ ನಿಬಂಧನೆಗಳನ್ನು ಜಾರಿಗೊಳಿಸಿದೆ. ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಬಿಡುಗಡೆ ಮಾಡಿರುವ ಹೊಸ ನಿಯಮಗಳು ಪ್ರಕಾರ, ಕೊರೊನಾ ಸೋಂಕಿತ ವ್ಯಕ್ತಿಗೆ ಸೋಂಕು ದೃಢಪಟ್ಟ ದಿನಾಂಕದಿಂದ ಆರು ತಿಂಗಳೊಳಗೆ ಆ ವ್ಯಕ್ತಿ ಸಾವನ್ನಪ್ಪಿರಬೇಕು. ಇನ್ನು, ಗರಿಷ್ಟ 10 ಲಕ್ಷ ರೂ.ಗಳವರೆಗೆ ಪಡೆದ ಆರ್ಥಿಕ ಪರಿಹಾರಕ್ಕೆ ತೆರಿಗೆ ವಿನಾಯ್ತಿ ಇರುತ್ತದೆ. ಇದಲ್ಲದೆ, ಕೊರೊನಾ ಸಾವಿಗೆ ಪಡೆದಿರುವ ಪರಿಹಾರ ಧನವನ್ನು ಕೇಂದ್ರ ಆದಾಯ ತೆರಿಗೆ ಇಲಾಖೆಯ “ಫಾರ್ಮ್ ನಂ. 1ನಲ್ಲಿ’ ಸಲ್ಲಿಸಬೇಕು. ಫಾರ್ಮ್ 1ನಲ್ಲಿ ಸಲ್ಲಿಸುವಾಗ, ವ್ಯಕ್ತಿಗೆ ಸೋಂಕು ದೃಢಪಟ್ಟಿರುವ ಬಗ್ಗೆ ಆಸ್ಪತ್ರೆಗಳಿಂದ ನೀಡಲಾದ ಪ್ರಮಾಣ ಪತ್ರ ಅಥವಾ ಕ್ಲಿನಿಕಲ್ ಪ್ರಮಾಣ ಪತ್ರ, ಸೋಂಕು ಪತ್ತೆಗೆ ನಡೆಸಲಾದ ಪರೀಕ್ಷಾ ಪ್ರಮಾಣಪತ್ರಗಳು, ಕೊರೊನಾಕ್ಕೆ ನೀಡಲಾಗಿರುವ ಚಿಕಿತ್ಸೆಯ ಪ್ರಮಾಣಪತ್ರ, ಕುಟುಂಬಸ್ಥರು ಚಿಕಿತ್ಸೆಗಾಗಿ ಮಾಡಿರುವ ಖರ್ಚುವೆಚ್ಚದ ದಾಖಲೆಗಳನ್ನು ಸಲ್ಲಿಸಬೇಕು. ಜತೆಗೆ, ಮೃತಪಟ್ಟ ವ್ಯಕ್ತಿಯ ಆಧಾರ್, ಪ್ಯಾನ್ ಸಂಖ್ಯೆ, ವಿಳಾಸವನ್ನೂ ಸಲ್ಲಿಸಬೇಕು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.