ಕೇಜ್ರಿವಾಲ್ ಕ್ಷಮೆ: ಪಂಜಾಬ್ ಆಪ್ ಮುಖ್ಯಸ್ಥ ರಾಜೀನಾಮೆ
Team Udayavani, Mar 16, 2018, 11:57 AM IST
ಹೊಸದಿಲ್ಲಿ : ಮಾನಹಾನಿ ದಾವೆಯಲ್ಲಿ ಪಂಜಾಬ್ ಮಾಜಿ ಕಂದಾಯ ಸಚಿವ ಬಿಕ್ರಂ ಸಿಂಗ್ ಮಜೀತಿಯ ಅವರಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕ್ಷಮೆ ಕೋರಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಪಂಜಾಬ್ ಘಟಕದ ಅಧ್ಯಕ್ಷ ಭಗವಂತ ಮಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆಯನ್ನು ಟ್ವಿಟರ್ ಮೂಲಕ ದೃಢೀಕರಿಸಿರುವ ಭಗವಂತ ಮಾನ್, “ಆಪ್ ಪಂಜಾಬ್ ಅಧ್ಯಕ್ಷ ಪದಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಪಂಜಾಬಿನ ಆಮ್ ಆದ್ಮಿ ಆಗಿರುವ ನಾನು ರಾಜ್ಯದಲ್ಲಿನ ಡ್ರಗ್ ಮಾಫಿಯ ಮತ್ತು ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಬರೆದಿದ್ದಾರೆ.
ಪಂಜಾಬ್ ಮಾಜಿ ಕಂದಾಯ ಸಚಿವರು ತಮ್ಮ ವಿರುದ್ಧ ಹೂಡಿದ್ದ ಮಾನನಷ್ಟ ದಾವೆಯನ್ನು ಅರವಿಂದ ಕೇಜ್ರಿವಾಲ್ ನಿನ್ನೆ ಗುರುವಾರ ಕ್ಷಮೆ ಯಾಚನೆ ಮೂಲಕ ಇತ್ಯರ್ಥಪಡಿಸಿಕೊಂಡಿದ್ದರು.
ಮಾಜಿ ಕಂದಾಯ ಸಚಿವರ ವಿರುದ್ಧ ನಾನು ಮಾಡಿದ್ದ ಎಲ್ಲ ಆಪಾದನೆಗಳು ಆಧಾರರಹಿತವಾದವುಗಳೆಂದು ನಾನು ಕಂಡುಕೊಂಡಿರುವುದರಿಂದ ಆ ಎಲ್ಲ ಆಪಾದನೆಗಳನ್ನು ನಾನು ಹಿಂದೆಗೆದುಕೊಳ್ಳುತ್ತೇನೆ ಮತ್ತು ನಿಮ್ಮಲ್ಲಿ ನಾನು ಅದಕ್ಕಾಗಿ ಕ್ಷಮೆ ಯಾಚಿಸುತ್ತೇನೆ’ ಎಂದು ಬರೆದ ಕ್ಷಮಾಪಣೆ ಕೋರಿಕೆಯ ಹೇಳಿಕೆಯನ್ನು ಕೇಜ್ರಿವಾಲ್ ಕೋರ್ಟಿಗೆ ಸಲ್ಲಿಸುವ ಮೂಲಕ ಮಾನನಷ್ಟ ದಾವೆಯನ್ನು ಪರಿಹರಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
THAAD System: ಹೌತಿ ದಾಳಿ ತಡೆಗೆ ಇಸ್ರೇಲ್ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.