ಭಾಗವತ್ ಪಟ್ಟು: ಸಡ್ಡು ಹೊಡೆದು ಧ್ವಜಾರೋಹಣ
Team Udayavani, Aug 16, 2017, 8:16 AM IST
ಪಾಲಕ್ಕಾಡ್: ಜಿಲ್ಲಾಡಳಿತದ ಆದೇಶವನ್ನು ಧಿಕ್ಕರಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಂಗಳವಾರ ಕೇರಳದ ಪಾಲಕ್ಕಾಡ್ ಜಿಲ್ಲೆಯ ಸರಕಾರಿ ಅನುದಾನಿತ ಶಾಲೆಯೊಂದರಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇದರಿಂದ ಕೆಂಡಾಮಂಡಲವಾಗಿರುವ ಜಿಲ್ಲಾಧಿಕಾರಿ ಪಿ.ಮೇರಿಕುಟ್ಟಿ ಅವರು, ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಸರಕಾರಿ ಅನುದಾನಿತ ಶಾಲೆಗಳಲ್ಲಿ ಕೇವಲ ಚುನಾಯಿತ ಪ್ರತಿನಿಧಿಗಳು, ಶಾಲಾ ಅಧಿಕಾರಿಗಳು ಅಥವಾ ಸರಕಾರಿ ಅಧಿಕಾರಿಗಳು ಮಾತ್ರವೇ ತ್ರಿವರ್ಣ ಧ್ವಜ ಹಾರಿಸಬೇಕು. ಹಾಗಾಗಿ, ಆರೆಸ್ಸೆಸ್ ಮುಖ್ಯಸ್ಥ ಭಾಗವತ್ ಅವರಿಗೆ ಧ್ವಜಾರೋಹಣಕ್ಕೆ ಅವಕಾಶ ನೀಡು ವುದಿಲ್ಲ ಎಂದು ಜಿಲ್ಲಾಧಿಕಾರಿ ಸೋಮವಾರ ರಾತ್ರಿಯೇ ಆದೇಶ ಹೊರಡಿಸಿದ್ದರು. ಆದರೆ, ಅದನ್ನು ಧಿಕ್ಕರಿಸಿದ ಭಾಗವತ್, ಮಂಗಳವಾರ ಅದೇ ಶಾಲೆಗೆ ಹೋಗಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡಿಸಿ, “ಶಾಲೆಯ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸುತ್ತೇನೆ’ ಎಂದಿದ್ದಾರೆ. ಏತನ್ಮಧ್ಯೆ, ಭಾಗವತ್ ಧ್ವಜಾರೋಹಣ ವಿವಾದ ಕುರಿತು ಮಾತನಾಡಿರುವ ಬಿಜೆಪಿ ಹಾಗೂ ಆರೆಸ್ಸೆಸ್, “ದೇಶದ ತ್ರಿವರ್ಣ ಧ್ವಜವನ್ನು ಹಾರಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ’ ಎಂದು ಹೇಳಿವೆ.
ಇನ್ನೊಂದೆಡೆ ಶಾಲೆಯ ಆಡಳಿತ ಮಂಡ ಳಿಯು, “ಜಿಲ್ಲಾಧಿಕಾರಿಯವರ ಆದೇಶ ಉಲ್ಲಂ ಸಲಾಗಿಲ್ಲ. ಆಡಳಿತ ಮಂಡಳಿ ಅಧಿಕಾರಿಗಳ ಮತ್ತು ಮುಖ್ಯೋಪಾಧ್ಯಾಯರ ಹಾಜರಿಯಲ್ಲಿ ಪ್ರಮುಖ ವ್ಯಕ್ತಿಯೊಬ್ಬರು ಧ್ವಜಾರೋಹಣ ನೆರವೇರಿಸಬೇಕು ಎಂಬುದಾಗಿ ಆದೇಶದಲ್ಲಿ ಉಲ್ಲೇಖೀಸ ಲಾಗಿತ್ತು’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.