ಜಯಾಗೆ ಭಾರತ ರತ್ನ;ಕೇಂದ್ರಕ್ಕೆ ತಾಕೀತು ಮಾಡಲು ಆಗಲ್ಲ; ಹೈಕೋರ್ಟ್
Team Udayavani, Jan 6, 2017, 3:50 PM IST
ಚೆನ್ನೈ: ತಮಿಳುನಾಡಿನ ದಿ. ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ ಭಾರತ್ ರತ್ನ ಕೊಡಬೇಕೆಂದು ಕೋರಿ ಸಲ್ಲಿಸಿದ್ದ ಪಿಐಎಲ್(ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಅನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ದೇಶದ ಪ್ರತಿಷ್ಠಿತ ಗೌರವ ಪ್ರಶಸ್ತಿಯಾದ ಭಾರತ ರತ್ನವನ್ನು ಜಯಲಲಿತಾ ಅವರಿಗೆ ನೀಡುವಂತೆ ನಾವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸಂಜಯ್ ಕಿಶನ್ ಹಾಗೂ ನ್ಯಾ. ಎಂ ಸುಂದರ್ ಅವರಿದ್ದ ಪೀಠ ಹೇಳಿದೆ.
ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರು ಸಿನಿಮಾಗಳಲ್ಲಿ ನಟಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದರು. 5 ಬಾರಿ ಮುಖ್ಯಮಂತ್ರಿಯಾಗಿ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದ್ದರು. ಹಾಗಾಗಿ ಜಯ ಅವರಿಗೆ ಭಾರತ ರತ್ನ ಪ್ರಶಸ್ತಿ ಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕೆಕೆ ರಮೇಶ್ ಅವರು ಪಿಐಎಲ್ ಸಲ್ಲಿಸಿದ್ದರು.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಇಂತಹ ಅತ್ಯುನ್ನತ ಗೌರವದ ಪ್ರಶಸ್ತಿಯನ್ನು ಯಾರಿಗೆ ಕೊಡಬೇಕೆಂದು ನಿರ್ಧರಿಸಲು ಸಮಿತಿಗಳಿವೆ. ಹಾಗಾಗಿ ಜನಪ್ರತಿನಿಧಿಗಳನ್ನು ಇಂತಹ ಪ್ರಶಸ್ತಿಗೆ ಪರಿಗಣಿಸಿ ಎಂದು ನಿರ್ದೇಶನ ನೀಡಲು ಕೋರ್ಟ್ ಗೆ ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.