ಭೀಮಾ ಕೋರೆಗಾಂವ್ ಕೇಸ್: ಇಬ್ಬರು ಪೊಲೀಸ್ ಕಸ್ಟಡಿಗೆ
Team Udayavani, Oct 28, 2018, 6:00 AM IST
ಪುಣೆ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ನಕ್ಸಲರೊಂದಿಗೆ ಸಂಪರ್ಕ ಹೊಂದಿರುವ ಆರೋಪದಲ್ಲಿ ತೆಲುಗು ಕವಿ ವರವರ ರಾವ್ ಹಾಗೂ ಇತರರೊಂದಿಗೆ ಕಳೆದ ತಿಂಗಳು ವಶಕ್ಕೆ ಪಡೆದ ವೆರ್ನನ್ ಮತ್ತು ಅರುಣ್ ಫೆರೇರಾರನ್ನು ಪೊಲೀಸರು ಶನಿವಾರ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಇವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ನವೆಂಬರ್ 6 ವರೆಗೆ ಇವರನ್ನು ಪೊಲೀಸ್ ವಶಕ್ಕೊಪ್ಪಿಸಿ ಪುಣೆ ಕೋರ್ಟ್ ಆದೇಶ ನೀಡಿದೆ. ಇಬ್ಬರು ಆರೋಪಿಗಳು ಮೇಲ್ನೋಟಕ್ಕೆ ನಕ್ಸಲರ ಜೊತೆ ಸಂಪರ್ಕ ಹೊಂದಿರುವುದು ಕಂಡುಬಂದಿದೆ. ನಕ್ಸಲ್ ಸಂಘಟನೆಗಳಿಗೆ ನೇಮಕಾತಿ ಹಾಗೂ ಹಣಕಾಸು ಮೂಲವನ್ನು ಒದಗಿಸುವ ಚಟುವಟಿಕೆಯಲ್ಲಿ ಇವರು ತೊಡಗಿಸಿಕೊಂಡಿದ್ದರು ಎಂದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ.
ಇದೇ ವೇಳೆ, ಇನ್ನೊಬ್ಬ ಬಂಧಿತ ಹೋರಾಟಗಾರ್ತಿ ಸುಧಾ ಭಾರಧ್ವಾಜ್‌ರ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಈ ಪ್ರಕರಣದಲ್ಲಿ ಬಂಧಿತ ಎಲ್ಲರನ್ನೂ ಬಿಡುಗಡೆಗೊಳಿಸಬೇಕು ಎಂದು ಇತಿಹಾಸ ತಜ್ಞೆ ರೊಮಿಳಾ ಥಾಪರ್ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿ ಕೂಡ ವಜಾಗೊಂಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹಾಗೂ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಒಳಗೊಂಡ ಪೀಠ ಅರ್ಜಿಯನ್ನು ತಳ್ಳಿಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.