ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಬಂದ ಜೋ ಬೈಡೆನ್: ವಿಡಿಯೋ ವೈರಲ್
ಜಿ-7 ಶೃಂಗಸಭೆ : ಶ್ರೀಮಂತ ರಾಷ್ಟ್ರಗಳ ನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
Team Udayavani, Jun 27, 2022, 7:04 PM IST
ಬರ್ಲಿನ್ : ಎರಡು ದಿನಗಳ ಜರ್ಮನಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸ್ಕ್ಲೋಸ್ ಎಲ್ಮಾವ್‌ನಲ್ಲಿ ಜಿ-7 ಶೃಂಗಸಭೆ 2022 ರಲ್ಲಿ ಭಾಗವಹಿಸಲಿದ್ದು, ವಿಶ್ವದ ಏಳು ಶ್ರೀಮಂತ ರಾಷ್ಟ್ರಗಳ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಜಿ7 ಶೃಂಗಸಭೆಗೆ ಮುನ್ನ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಂದಿದ್ದು ವಿಶೇಷವಾಗಿ ಗಮನ ಸೆಳೆಯಿತು. ಹಲವು ನಾಯಕರೊಂದಿಗೆ ಇದ್ದ ಮೋದಿ ಅವರನ್ನು ಬೈಡೆನ್ ಅವರು ಹಿಂದಿನಿಂದ ಬಂದು ಕರೆದು ಆತ್ಮೀಯವಾಗಿ ಮಾತನಾಡಿಸಿದರು. ಈ ವಿಡಿಯೋ ವೈರಲ್ ಆಗುತ್ತಿದೆ. ಹಲವರು ಇದು ಮೋದಿಯ ನಾಯಕತ್ವ ಏನು ಎನ್ನುವುದನ್ನೂ ಸೂಚಿಸುತ್ತದೆ ಎಂದು ಸಾಮಾಜಿಕ ತಾಣಗಳಲ್ಲಿ ಬರೆದು ಕೊಂಡಿದ್ದಾರೆ.
#WATCH | US President Joe Biden walked up to Prime Minister Narendra Modi to greet him ahead of the G7 Summit at Schloss Elmau in Germany.
(Source: Reuters) pic.twitter.com/gkZisfe6sl
— ANI (@ANI) June 27, 2022
ರಷ್ಯಾದ ಉಕ್ರೇನ್ ಆಕ್ರಮಣ, ಆಹಾರ ಭದ್ರತೆ ಮತ್ತು ಭಯೋತ್ಪಾದನೆ ನಿಗ್ರಹ ಸೇರಿದಂತೆ ವಿವಿಧ ನಿರ್ಣಾಯಕ ಜಾಗತಿಕ ಸಮಸ್ಯೆಗಳನ್ನು ಚರ್ಚಿಸಲಿದ್ದಾರೆ. ಇಂಧನ, ಆಹಾರ ಭದ್ರತೆ, ಭಯೋತ್ಪಾದನೆ ನಿಗ್ರಹ, ಪರಿಸರ ಮತ್ತು ಪ್ರಜಾಪ್ರಭುತ್ವದಂತಹ ವಿಷಯಗಳ ಕುರಿತು ಭಾರತದ ಪ್ರಧಾನ ಮಂತ್ರಿ ಬಣದ ನಾಯಕರು ಮತ್ತು ಅದರ ಪಾಲುದಾರರೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
“ನಾನು ಇಂದು ಜಿ-7 ಶೃಂಗಸಭೆ 2022 ರಲ್ಲಿ ಭಾಗವಹಿಸಲಿದ್ದೇನೆ ಇದರಲ್ಲಿ ನಾವು ಪ್ರಮುಖ ಜಾಗತಿಕ ಸಮಸ್ಯೆಗಳನ್ನು ಚರ್ಚಿಸುತ್ತೇವೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಜಿ-7 ಅಮೆರಿಕಾ, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಇಂಗ್ಲೆಂಡ್ ಅನ್ನು ಒಳಗೊಂಡಿರುವ ಅಂತಾರಾಷ್ಟ್ರೀಯ-ಸರಕಾರಿ ರಾಜಕೀಯ ಗುಂಪಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.