Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್ ಅಯ್ಯರ್
ಗಾಂಧಿ ಕುಟುಂಬದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಕಿಡಿ
Team Udayavani, Dec 16, 2024, 7:50 AM IST
ಹೊಸದಿಲ್ಲಿ: “ನನ್ನ ರಾಜಕೀಯ ಜೀವನವನ್ನು ರೂಪಿಸಿದ್ದೂ ಗಾಂಧಿ ಕುಟುಂಬವೇ, ಕೆಡವಿದ್ದೂ ಅವರೇ…’ ಹೀಗೆಂದು ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ! ಸುದ್ದಿಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಮ್ಮ ರಾಜಕೀಯ ಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿರುವ ಅಯ್ಯರ್, “ಇದು ನನ್ನ ಬದುಕಿನ ವ್ಯಂಗ್ಯ’ ಎನ್ನುವ ಮೂಲಕ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
“ನನ್ನ ರಾಜಕೀಯ ಜೀವನದುದ್ದಕ್ಕೂ ಗಾಂಧಿ ಕುಟುಂಬದೊಂದಿಗೆ ಮುಖಾಮುಖೀ ಭೇಟಿಯಾಗಿ ಚರ್ಚೆ ಮಾಡುತ್ತಿದ್ದೆ. ಆದರೆ ಕಳೆದ 10 ವರ್ಷಗಳಲ್ಲಿ ಒಮ್ಮೆಯೂ ಸೋನಿಯಾ ಗಾಂಧಿ ಜತೆ ಮಾತನಾಡಲು ಅವಕಾಶ ಸಿಗಲಿಲ್ಲ. ರಾಹುಲ್ ಗಾಂಧಿ ಜತೆ ಒಮ್ಮೆ ಮಾತ್ರ ಮುಖಾಮುಖೀ ಭೇಟಿಗೆ ಅವಕಾಶ ಸಿಕ್ಕಿದೆ. ಪ್ರಿಯಾಂಕಾ ಗಾಂಧಿ ಕೆಲವೊಮ್ಮೆ ಫೋನ್ ಮುಖಾಂತರ ಸಂಪರ್ಕಿಸುತ್ತಾರೆ’ ಎಂದು ಹೇಳಿದ್ದಾರೆ. ಈ ಎಲ್ಲ ವಿಚಾರಗಳನ್ನು ತಾವು ತಮ್ಮ ಹೊಸ ಪುಸ್ತಕವಾದ “ಮ್ಯಾವೆರಿಕ್ ಇನ್ ಪಾಲಿಟಿಕ್ಸ್’ನಲ್ಲಿ ಉಲ್ಲೇಖಿಸಿರುವಾಗಿಯೂ ತಿಳಿಸಿದ್ದಾರೆ.
ಪ್ರಣಬ್ ಕಾಂಗ್ರೆಸ್ ನಾಯಕರಾಗಿದ್ದರೆ 2014ರಲ್ಲಿ ಹೀನಾಯ ಸೋಲು ಆಗುತ್ತಿರಲಿಲ್ಲ
2014ರ ಲೋಕಸಭಾ ಚುನಾವಣೆ ಸಮಯದಲ್ಲಿ ಪ್ರಣಬ್ ಮುಖರ್ಜಿ ಅವರಿಗೆ ಕಾಂಗ್ರೆಸ್ ನಾಯಕತ್ವ ನೀಡಿದ್ದರೆ ಪಕ್ಷಕ್ಕೆ ಹೀನಾಯ ಸೋಲಾಗುತ್ತಿರಲಿಲ್ಲ ಎಂದು ಅಯ್ಯರ್ ಹೇಳಿದ್ದಾರೆ. ಈ ಮೂಲಕ 2014ರ ಚುನಾವಣೆಯಲ್ಲಿ ನಾಯಕತ್ವ ವಹಿಸಿದ್ದ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.
2012ರಲ್ಲಿ ಸೋನಿಯಾ ಗಾಂಧಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಮನಮೋಹನ್ ಸಿಂಗ್‌ಗೆ 6 ಬೈಪಾಸ್ ಶಸ್ತ್ರಚಿಕಿತ್ಸೆಯಾಗಿದ್ದು ಕಾಂಗ್ರೆಸ್‌ಗೆ ಹಿನ್ನಡೆಯಾಯಿತು. ಒಂದು ವೇಳೆ 2012ರಲ್ಲಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಮಾಡಿ, ಮನಮೋಹನ್ ಸಿಂಗ್ ಅವರನ್ನು ರಾಷ್ಟ್ರಪತಿ ಮಾಡಿದ್ದರೆ, ಕೇವಲ 44 ಸ್ಥಾನಗಳನ್ನು ಮಾತ್ರ ಗೆಲ್ಲುವಷ್ಟು ಹೀನಾಯ ಸ್ಥಿತಿಗೆ ಕಾಂಗ್ರೆಸ್ ತಲುಪುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಮೋದಿಯನ್ನು ಚಾಯ್‌ವಾಲಾ ಎಂದಿಲ್ಲ
2014ರಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ “ಚಾಯ್‌ವಾಲಾ’ ಎಂಬ ಹೇಳಿಕೆಯನ್ನು ತಾನು ನೀಡಿರಲಿಲ್ಲ ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದಾರೆ. ಅವರ ಹೊಸ ಪುಸ್ತಕವಾದ “ಮ್ಯಾವೆರಿಕ್ ಇನ್ ಪಾಲಿಟಿಕ್ಸ್’ನಲ್ಲಿ ಈ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಸ್ವತಃ ಮೋದಿ ಅವರೇ ತಮ್ಮನ್ನು ಚಾಯ್‌ವಾಲಾ ಎಂದು ಕರೆದುಕೊಂಡಿದ್ದರು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Unsafe; ಒಂದು ಘಟನೆಯಿಂದ ಹೀಗೆ ಹೇಳುವುದು ಸರಿಯಲ್ಲ: ಸಿಎಂ ಫಡ್ನವಿಸ್
Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು
Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ
Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….
Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ
MUST WATCH
ಹೊಸ ಸೇರ್ಪಡೆ
Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ
ಆಗಸ್ಟ್ 15ಕ್ಕೆ ತೆರೆಗೆ ಬರಲಿದೆ ಅರ್ಜುನ್ ಜನ್ಯಾ ನಿರ್ದೇಶನದ ʼ45ʼ ಸಿನಿಮಾ
Mumbai Unsafe; ಒಂದು ಘಟನೆಯಿಂದ ಹೀಗೆ ಹೇಳುವುದು ಸರಿಯಲ್ಲ: ಸಿಎಂ ಫಡ್ನವಿಸ್
RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್ ಆಫ್ ಸ್ಪಿನ್ನರ್ ಎಂಟ್ರಿ
Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.