ನ್ಯೂ ಇಯರ್ ಪಾರ್ಟಿಯಲ್ಲಿ ಮಹಿಳೆಯ ಸೆಲ್ಫಿಗೆ ಒತ್ತಾಯ: 2 ಗುಂಪಿನ ನಡುವೆ ಮಾರಾಮಾರಿ VIDEO
Team Udayavani, Jan 1, 2023, 1:46 PM IST
ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಹೌಸಿಂಗ್ ಸೊಸೈಟಿಯೊಂದರಲ್ಲಿ ಹೊಸ ವರ್ಷದ ಪಾರ್ಟಿಯ ವೇಳೆ ಕೆಲವು ಪುರುಷರು ಮಹಿಳೆಯರನ್ನು ಸೆಲ್ಫಿಗಾಗಿ ಒತ್ತಾಯಿಸಿದ ಪರಿಣಾಮ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ.
ಶನಿವಾರ ರಾತ್ರಿ ಗೌರ್ ಸಿಟಿ ಫಸ್ಟ್ ಅವೆನ್ಯೂ ಸೊಸೈಟಿಯಲ್ಲಿ ನಡೆದ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಪುರುಷರ ಗುಂಪೊಂದು ಇಬ್ಬರು ಮಹಿಳೆಯರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ. ಈ ವೇಳೆ ಇದು ಅವರ ಪತಿಯಂದಿರು ಮತ್ತು ಆರೋಪಿಗಳ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಂತರ ಆರೋಪಿಗಳು ಇಬ್ಬರನ್ನು ಎಳೆದೊಯ್ದು ಹೊಡೆದಿದ್ದಾರೆ, ಮಧ್ಯಪ್ರವೇಶಿಸಿದ ಇತರ ಕೆಲವು ನಿವಾಸಿಗಳು ಮತ್ತು ಭದ್ರತಾ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರನ್ನು ಹುಡುಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Greater Noida:
Brawl took place in an ongoing New Year Party
People were trying to take selfie with women, it led to an argument which snowballed into big fightNew year fight pic.twitter.com/82aCLcahyD
— Atulkrishan (@iAtulKrishan) January 1, 2023
ಪರ ಪುರುಷರು ತನ್ನ ಪತ್ನಿ ಮತ್ತು ಅವರ ಸ್ನೇಹಿತನ ಪತ್ನಿಯೊಂದಿಗೆ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದರು ಎಂದು ಸೊಸೈಟಿಯ ನಿವಾಸಿ ಅಜಿತ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.