ಟೀಕೆಯೇ ಬಂಡವಾಳ… ತೇಜಸ್ವಿಗೆ ನಿತೀಶ್ ಟಾಂಗ್; ಮೊದಲ ಹಂತದ ಪ್ರಚಾರಕ್ಕೆ ತೆರೆ
Team Udayavani, Oct 26, 2020, 11:05 PM IST
ಹೊಸದಿಲ್ಲಿ/ಪಾಟ್ನಾ: ಹದಿನೈದು ವರ್ಷಗಳಿಂದ ಬಿಜೆಪಿ- ಜೆಡಿಯು ನೇತೃತ್ವದ ಸರಕಾರ ಬಿಹಾರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಮೈತ್ರಿಕೂಟವನ್ನು ಗೆಲ್ಲಿಸಿ ಅಧಿಕಾರದಲ್ಲಿ ಮುಂದುವರಿ ಸಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮನವಿ ಮಾಡಿದ್ದಾರೆ.
ಬಿಹಾರದ ಸಕ್ರಾ, ಮಹುವಾ, ಮಹಾ°ರ್ ಮತ್ತು ಕಂಟಿಗಳಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ವಿಪಕ್ಷ ನಾಯಕ ತೇಜಸ್ವಿ ಯಾದವ್ ಅವರ ಹೆಸರು ಪ್ರಸ್ತಾಪ ಮಾಡದೆ ಟೀಕಿಸಿದ ಮುಖ್ಯಮಂತ್ರಿ ಕೆಲವು ನಾಯಕರು ತಮ್ಮನ್ನು ಟೀಕಿಸಿ ಬರಿದೆ ಪ್ರಚಾರ ಪಡೆಯಲು ಮುಂದಾಗುತ್ತಿದ್ದಾರೆ. ಅದನ್ನು ಅವರು ಮುಂದುವರಿಸಲಿ. ತಮಗೆ ಅಂಥ ಪ್ರಚಾರ ಅಗತ್ಯವಿಲ್ಲ ಎಂದರು.
“28ರಿಂದ ಮೊದಲ ಹಂತದ ಮತದಾನ ಶುರುವಾ ಗಲಿದೆ. ಈ ಸಂದರ್ಭದಲ್ಲಿ 15 ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನು ಮುಂದುವ ರಿ ಸಲು ನೀವು ಮತ ಹಾಕುವಿರಿ ಎಂಬ ವಿಶ್ವಾಸವಿದೆ. ಹಲವು ಯೋಜನೆಗಳು ರಾಜ್ಯದ ಜನರ ಅಭಿವೃದ್ಧಿಗಾಗಿ ಜಾರಿಯಾಗಲಿವೆ’ ಎಂದರು.
“ನಮ್ಮ ಸರಕಾರ ಮೊದಲ ಬಾರಿಗೆ ಮಹಿಳೆಯರಿಗೆ ಮೀಸಲು ನೀಡುವ ವ್ಯವಸ್ಥೆ ಜಾರಿಗೆ ತಂದಿತು. ವಿದ್ಯಾರ್ಥಿನಿ ಯರಿಗೆ ಸೈಕಲ್ ವಿತರಿಸುವ ಯೋಜನೆ ಅನುಷ್ಠಾನಗೊಳಿಸಿದ್ದು ನಾವು. ಸಾವಿರಾರು ಶಾಲೆಗಳನ್ನು ನಿರ್ಮಿಸಿದ್ದೇವೆ. ಆರೋಗ್ಯ ಕ್ಷೇತ್ರದಲ್ಲಿಯೂ ಸಾಕಷ್ಟು ಸುಧಾರಣೆಗಳಾಗಿವೆ’ ಎಂದರು. ಇದೇ ವೇಳೆ ಸಕ್ರಾ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಸಿಎಂ ಅವರತ್ತ ಕೆಲ ಕಿಡಿಗೇಡಿಗಳು ಚಪ್ಪಲಿ ಎಸೆದಿದ್ದಾರೆ. ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಚಾರ ಮುಕ್ತಾಯ: ಅ.28ರಂದು ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. 71 ಕ್ಷೇತ್ರಗಳಲ್ಲಿ ಹಕ್ಕು ಚಲಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಪ್ರಚಾರ ಕಾರ್ಯ ಮುಕ್ತಾಯವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಹಾರ ಸಿಎಂ ನಿತೀಶ್ ಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರು ಪ್ರಚಾರ ನಡೆಸಿದ್ದಾರೆ.
2 ಕಡೆ ಇಂದು ರಾಹುಲ್ ಪ್ರಚಾರ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅ.28ರಂದು ವಾಲ್ಮೀಕಿನಗರ ಮತ್ತು ಕುಶೇಶ್ವರ್ ಆಸ್ಥಾನ್ ಎಂಬಲ್ಲಿ ಪ್ರಚಾರ ನಡೆಸಲಿದ್ದಾರೆ. ವಾಲ್ಮೀಕಿನಗರ ಲೋಕಸಭಾ ಕ್ಷೇತ್ರದ ಉಪಚುನಾವಣೆ ನ.7, ವಿಧಾನಸಭೆ ಚುನಾವಣೆ ನ.3ರಂದು ನಡೆಯಲಿದೆ.
ಹೈಕೋರ್ಟ್ ಆದೇಶಕ್ಕೆ ತಡೆ: ನ.3ರಂದು ಮಧ್ಯಪ್ರದೇಶ ದಲ್ಲಿ ನಡೆಯಲಿರುವ ವಿಧಾನಸಭೆ ಉಪ ಚುನಾವಣೆಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ವರ್ಚುವಲ್ ಪ್ರಚಾರ ನಡೆಸಬೇಕು ಎಂಬ ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಚುನಾವಣ ಆಯೋಗಕ್ಕೆ ಸೂಚನೆ ನೀಡಿತು. ಅ.20 ಮತ್ತು 23ರಂದು ಮಧ್ಯಪ್ರದೇಶ ನೀಡಿದ್ದ ಆದೇಶದಲ್ಲಿನ ಅಂಶಗಳನ್ನು ಪರಿಶೀಲಿಸುವಂತೆಯೂ ನ್ಯಾಯಪೀಠ ಆಯೋಗಕ್ಕೆ ಸೂಚಿಸಿದೆ.
ಪಾಲನೆಯಾಗದ ನಿಯಮ: ಕೊರೊನಾ ಸೋಂಕಿನ ನಡುವೆಯೇ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿದಂತೆ ಹಲವು ನಿಯಮಗಳನ್ನು ಚುನಾವಣ ಆಯೋಗ ಸೂಚಿಸಿತ್ತು. ಎಲ್ಲಾ ಪಕ್ಷಗಳ ಪ್ರಚಾರ ಕಾರ್ಯಕ್ರಮದಲ್ಲಿ ಅವುಗಳ ಕನಿಷ್ಠ ಪಾಲನೆ ಕಂಡುಬರುತ್ತಿದೆ.
ಬಿಹಾರ ಡಿಸಿಎಂ ಸುಶೀಲ್ ಕುಮಾರ್ ಮೋದಿ, ಚುನಾವಣ ಉಸ್ತುವಾರಿ ದೇವೇಂದ್ರ ಫಡ್ನವಿಸ್, ಛಪ್ರಾ ಸಂಸದ ರಾಜೀವ್ ಪ್ರತಾಪ್ ರೂಡಿ ಸೇರಿದಂತೆ ಪ್ರಮುಖರಿಗೆ ಸೋಂಕು ದೃಢಪಟ್ಟು ಕ್ವಾರಂಟೈನ್‌ನಲ್ಲಿ ಇದ್ದಾರೆ.
ಈ ಅಂಶಗಳು ಯಾವ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಎಚ್ಚರಿಕೆಯ ಸಂದೇಶವನ್ನೇ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಚುನಾವಣ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ರ ಸೋಂಕು ತಡೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತು. ಸೋಂಕು ತಡೆ ನಿಯಮ ಪಾಲನೆ ನಿಟ್ಟಿನಲ್ಲಿ ಅ.21ರಂದು ಬಿಹಾರ ರಾಜ್ಯ ಮುಖ್ಯ ಚುನಾವಣಧಿಕಾರಿಗೆ ಕೇಂದ್ರ ಚುನಾವಣ ಆಯೋಗ ನಿರ್ದೇಶನ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ
ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್
ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?
ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ
ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.