![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 9, 2020, 5:22 PM IST
ಪಾಟ್ನಾ:ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಲಾಲೂ ಪ್ರಸಾದ್ ಯಾದವ್ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಜತೆ ಮುನಿಸಿಕೊಂಡು ದೂರವಾಗಿರುವ ಪತ್ನಿ ಐಶ್ವರ್ಯ ರಾಯ್ ಗಂಡನ ವಿರುದ್ಧವೇ ಸ್ಪರ್ಧಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಇತ್ತೀಚೆಗಷ್ಟೇ ಐಶ್ವರ್ಯ ತಂದೆ ಚಂದ್ರಿಕಾ ರಾಯ್ ನೀಡಿದ್ದ ಸಂದರ್ಶನದಲ್ಲಿ ತಮ್ಮ ಮಗಳು ತೇಜ್ ಪ್ರತಾಪ್ ವಿರುದ್ಧ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಿಕಾ ರಾಯ್ ಆರ್ ಜೆಡಿ ಟಿಕೆಟ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅಲ್ಲದೇ ರಾಜಕೀಯದ ವಿಚಾರದಲ್ಲಿ ಮಗಳು ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರಳಾಗಿದ್ದಾಳೆ. ನಾವು ಯಾವಾಗಲೂ ಆಕೆಯನ್ನು ಪ್ರೋತ್ಸಾಹಿಸುವುದಾಗಿ ತಿಳಿಸಿದ್ದಾರೆ.
ಐಶ್ವರ್ಯ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ನಾವು ತಡೆಯೊಡ್ಡುವುದಿಲ್ಲ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬ ಬಗ್ಗೆ ಆಕೆ ನಿರ್ಧರಿಸುತ್ತಾಳೆ. ತನ್ನ ರಾಜಕೀಯ ಪ್ರವೇಶದ ಬಗ್ಗೆ ಐಶ್ವರ್ಯ ಮಾಧ್ಯಮಕ್ಕೆ ಶೀಘ್ರವೇ ಮಾಹಿತಿ ನೀಡಲಿದ್ದಾರೆ ಎಂದು ರಾಯ್ ವಿವರಿಸಿದ್ದಾರೆ.
ಏನಿದು ಪತಿ, ಪತ್ನಿ ಜಗಳ?
ಐಶ್ವರ್ಯ 2018ರಲ್ಲಿ ಲಾಲು ಪ್ರಸಾದ್ ಪುತ್ರ ತೇಜ್ ಪ್ರತಾಪ್ ನ ಜತೆ ವಿವಾಹವಾಗಿತ್ತು. ಆದರೆ ಐದು ತಿಂಗಳ ನಂತರ ಲಾಲು ಪುತ್ರ ವಿವಾಹ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಈ ಘಟನೆ ನಂತರ ಎರಡು ಕುಟುಂಬಗಳ ನಡುವಿನ ಸಂಬಂಧ ಹದಗೆಟ್ಟಿರುವುದಾಗಿ ವರದಿ ತಿಳಿಸಿದೆ. ಈ ಜಿದ್ದಾಜಿದ್ದಿಯಿಂದಾಗಿ ಐಶ್ವರ್ಯ ತಂದೆ ಚಂದ್ರಿಕಾ ರಾಯ್ ಅವರು ಆರ್ ಜೆಡಿ ತೊರೆದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಮುಂಬರುವ ವಿಧಾನಸಭಾ ಚುನಾವಣೆ ವೇಳೆ ತೇಜ್ ಪ್ರತಾಪ್ ತಮ್ಮ ಕ್ಷೇತ್ರವನ್ನು ಬದಲಾಯಿಸುವ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಊಹಾಪೋಹ ಹಬ್ಬಿದೆ. ತೇಜ್ ಪ್ರತಾಪ್ ಈಗ ಮಹುವಾ ಕ್ಷೇತ್ರದ ಶಾಸಕರಾಗಿದ್ದಾರೆ. 2015ರ ಚುನಾವಣೆಯಲ್ಲಿ ಒಲ್ಲದ ಮನಸ್ಸಿನಿಂದ ಮಹುವಾದಲ್ಲಿ ಸ್ಪರ್ಧಿಸಿದ್ದ ತೇಜ್ ಪ್ರತಾಪ್ 28,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಮುಂಬರುವ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಐಶ್ವರ್ಯ ಕೂಡಾ ಸ್ಪರ್ಧಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.