Kuwait ಅಗ್ನಿ ದುರಂತ: ಮದುವೆ ನಿಗದಿಯಾಗಿದ್ದ ಬಿಹಾರದ ಯುವಕ ನಾಪತ್ತೆ, ಆತಂಕದಲ್ಲಿ ಕುಟುಂಬ
Team Udayavani, Jun 14, 2024, 12:54 PM IST
ಬಿಹಾರ: ಕುವೈತ್‌ನಲ್ಲಿ ನಡೆದ ಭೀಕರ ಅಗ್ನಿ ಅವಘಡದ ಬಳಿಕ ಅದೇ ಕಟ್ಟಡದಲ್ಲಿ ವಾಸವಿದ್ದ ಬಿಹಾರದ ಯುವಕನೊಬ್ಬ ನಾಪತ್ತೆಯಾಗಿದ್ದು ಕುಟುಂಬ ಸದಸ್ಯರು ಆತಂಕಗೊಂಡಿದ್ದಾರೆ.
ಬಿಹಾರದ ದರ್ಭಾಂಗ ಜಿಲ್ಲೆಯ ಸದರ್ ಬ್ಲಾಕ್‌ನ ನೈನಾಘಾಟ್ ಗ್ರಾಮದ ಕಾಲು ಖಾನ್ ಕುವೈಟ್ ನಲ್ಲಿ ಕೆಲಸ ಮಾಡಿಕೊಂಡಿದ್ದು ಬುಧವಾರ ಕಾರ್ಮಿಕರಿದ್ದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರತೀಯರು ಸೇರಿ ಸುಮಾರು 49 ಮಂದಿ ಮೃತಪಟ್ಟಿದ್ದು ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ.
ಈ ನಡುವೆ ಅಗ್ನಿ ಅವಘಡ ಸಂಭವಿಸಿದ ಕಟ್ಟಡದಲ್ಲೇ ಕಾಲು ಖಾನ್ ವಾಸವಿದ್ದರು ಎಂದು ಕುಟುಂಬ ಸದಸ್ಯರು ಹೇಳಿಕೊಂಡಿದ್ದಾರೆ ಅಲ್ಲದೆ ದುರಂತ ಸಂಭವಿಸಿದಂದಿನಿಂದ ಕುಟುಂಬ ಸದಸ್ಯರು ಸಂಪರ್ಕ ಸಾಧಿಸಿದರು ಕಾಲು ಖಾನ್ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
ಬುಧವಾರ ಕೊನೆಯ ಕರೆ ಬಂದಿತ್ತು:
ಘಟನೆಗೆ ಸಂಬಂಧಿಸಿದಂತೆ, ಬುಧವಾರ ರಾತ್ರಿ 11 ಗಂಟೆಯವರೆಗೆ ಕಾಲು ಖಾನ್ ಅವರೊಂದಿಗೆ ಮಾತುಕತೆ ನಡೆದಿದೆ ಎಂದು ಕುಟುಂಬ ಸದಸ್ಯರು ಹೇಳುತ್ತಾರೆ. ಬಳಿಕ ಬೆಂಕಿ ಅವಘಡದ ಬಗ್ಗೆ ಮಾಹಿತಿ ಲಭಿಸಿದೆ. ಅಂದಿನಿಂದ ಯಾರೂ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಅಲ್ಲದೆ, ಅಲ್ಲಿ ವಾಸಿಸುವ ಇತರ ಜನರಿಂದಲೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಾಯಭಾರ ಕಚೇರಿಯನ್ನು ಸಂಪರ್ಕಿಸಿದಾಗ, ಅಧಿಕಾರಿಗಳು ಪಾಸ್‌ಪೋರ್ಟ್‌ನ ಪ್ರತಿಯನ್ನು ಕಳುಹಿಸಿ ಮಾಹಿತಿ ಸಿಕ್ಕಿದರೆ ತಿಳಿಸುವುದಾಗಿ ಹೇಳಿದ್ದರು ಆದರೆ ಇದುವರೆಗೂ ಯಾವುದೇ ಮಾಹಿತಿ ನಮಗೆ ಬಂದಿಲ್ಲ ಎಂದು ಕುಟುಂಬಸ್ಥರು ಅಳಲುತೋಡಿಕೊಂಡಿದ್ದಾರೆ.
ಮುಂದಿನ ತಿಂಗಳು ಮದುವೆ ನಿಗದಿಯಾಗಿತ್ತು:
ತಾಯಿ ಮದೀನಾ ಖಾತೂನ್ ಹೇಳಿಕೆಯಂತೆ ಕಲು ಖಾನ್ ಗೆ ಮದುವೆ ನಿಗದಿಯಾದ ಹಿನ್ನೆಲೆಯಲ್ಲಿ ಮುಂದಿನ ತಿಂಗಳು 5 ರಂದು ಊರಿಗೆ ಬರುವವನಿದ್ದ ಅಲ್ಲದೆ ಮನೆಗೆ ವಿದ್ಯುತ್ ಅಳವಡಿಸಲು ಹಣ ಕಲಿಸುವುದಾಗಿ ಹೇಳಿದ್ದ ಆದರೆ ಇದೀಗ ಆತನ ಸಂಪರ್ಕವೇ ಇಲ್ಲದಂತಾಗಿದೆ ಎಂದು ತಾಯಿ ಅಳಲುತೋಡಿಕೊಂಡಿದ್ದಾರೆ.
ಇದನ್ನೂ ಓದಿ: Sandalwood: ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.