ಉತ್ತರಪ್ರದೇಶ, ಬಿಹಾರದಲ್ಲಿ ವರುಣನ ರೌದ್ರಾವತಾರ; ಸಾವಿನ ಸಂಖ್ಯೆ 115ಕ್ಕೆ ಏರಿಕೆ
Team Udayavani, Sep 30, 2019, 10:09 AM IST
ನವದೆಹಲಿ: ಬಿಹಾರದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರದವರೆಗೆ ಸುರಿದ ಧಾರಾಕಾರ ಮಳೆಗೆ ಕನಿಷ್ಠ 29ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಪಾಟ್ನ ಸೇರಿದಂತೆ ರಾಜ್ಯದ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಶಾಲಾ, ಕಾಲೇಜುಗಳಿಗೆ ಮಂಗಳವಾರದವರೆಗೆ ರಜೆ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ 24 ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಉತ್ತರಪ್ರದೇಶ ಹಾಗೂ ಬಿಹಾರದಲ್ಲಿ ವರುಣನ ಆರ್ಭಟಕ್ಕೆ ಸಾವನ್ನಪ್ಪಿದವರ ಸಂಖ್ಯೆ 115ಕ್ಕೆ ಏರಿಕೆಯಾಗಿದೆ. ಪಾಟ್ನದಲ್ಲಿ ಈವರೆಗೆ 26 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸಾವಿರಾರು ಜನರನ್ನು ಸುರಕ್ಷಿತ ಸ್ಥಳಖ್ಕೆ ಸ್ಥಳಾಂತರಿಸಲಾಗಿದೆ. ಪ್ರವಾಹ ಹಾಗೂ ತಗ್ಗುಪ್ರದೇಶದಲ್ಲಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ಮತ್ತು ಆಹಾರ ವಸ್ತುಗಳನ್ನು ಜನರಿಗೆ ನೀಡಲು ಎರಡು ಹೆಲಿಕಾಪ್ಟರ್ ಅನ್ನು ಒದಗಿಸುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಅಲ್ಲದೇ ನೀರನ್ನು ಬೇರೆಡೆಗೆ ಬಿಡುವ ಮೆಶಿನ್ ಗಳನ್ನು ನೀಡುವಂತೆ ವಾಯುಪಡೆಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ನಿತೀಶ್ ಕುಮಾರ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಭಾರೀ ಮಳೆಯಿಂದಾಗಿ ಸಾವಿರಾರು ನಿವಾಸಿಗಳು ವಿದ್ಯುತ್ ಹಾಗೂ ನೀರು ಸರಬರಾಜು ಇಲ್ಲದೆ ಕಾಲ ಕಳೆಯುವಂತಾಗಿದೆ. ಜನರನ್ನು, ಜಾನುವಾರುಗಳನ್ನು ರಕ್ಷಿಸಲು ಎನ್ ಡಿಆರ್ ಎಫ್, ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.
ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಕೊಚ್ಚಿಕೊಂಡು ಹೋಗಿದೆ, ಸೇತುವೆಗಳು ಕಡಿದು ಹೋಗಿ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಬಿಹಾರದಲ್ಲಿ ಹಲವು ರೈಲು ಸಂಚಾರ ರದ್ದುಗೊಳಿಸಲಾಗಿದೆ. ಬಸ್ ಸಂಚಾರವೂ ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಕಳೆದ ಗುರುವಾರದಿಂದ ಈವರೆಗೆ ಭಾರೀ ಮಳೆಗೆ 87 ಜನರು ಸಾವನ್ನಪ್ಪಿದ್ದಾರೆ. ಜನರಿಗೆ ಸೂಕ್ತ ನೆರವು ಒದಗಿಸಿಕೊಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
1960ರ ಬಳಿಕ ಇದೇ ಮೊದಲು
ನಾಲ್ಕು ತಿಂಗಳ ಮುಂಗಾರು ಮಳೆಗೆ ದೇಶದಲ್ಲಿ ಸೋಮವಾರ ಅಧಿಕೃತ ವಿದಾಯ ಹೇಳಲಿದೆ. ಆದರೆ ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಆ ರೀತಿಯಾಗಲು ಸಾಧ್ಯವಿಲ್ಲ. ಅದು ಇನ್ನೂ ಕೆಲ ದಿನಗಳವರೆಗೆ ಮುಂದುವರಿಯಲಿದೆ. 1960ರ ಬಳಿಕ ಇದೇ ಮೊದಲ ಬಾರಿಗೆ ಮುಂಗಾರು ಅತ್ಯಂತ ವಿಳಂಬವಾಗಿ ಮುಕ್ತಾಯವಾಗಲಿದೆ ಎಂದಿದ್ದಾರೆ. ಅವರು. ಕೊನೆಯ ಹಂತವಾಗಿ ರಾಜ ಸ್ಥಾನದ ಗಂಗಾನಗರ್‌ಗೆ ಮುಂಗಾರು ಪ್ರವೇಶ ಮಾಡಲಿದೆ. ಬಿಹಾರ, ಉತ್ತರ ಪ್ರದೇಶಗಳಲ್ಲಿ ಅದಿನ್ನೂ ಸಕ್ರಿಯವಾಗಿದೆ. ವಾಯುಭಾರ ಕುಸಿತದಿಂದ ಉಂಟಾದ ಈ ಮಳೆ ಅ.5ರ ವರೆಗೆ ಮುಂದುವರಿಯಲಿದೆ ಎಂದಿದ್ದಾರೆ ಮಹಾಪಾತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.