ಬೈಕ್ ನಲ್ಲಿ ಬಂದ ಮುಸುಕುಧಾರಿ ವ್ಯಕ್ತಿಗಳಿಂದ 13 ಲಕ್ಷ ರೂಪಾಯಿ ದರೋಡೆ
Team Udayavani, Dec 4, 2019, 9:36 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಯಘರ್: ಬ್ಯಾಂಕಿನಿಂದ 13 ಲಕ್ಷ ರೂಪಾಯಿಗಳನ್ನು ಡ್ರಾ ಮಾಡಿಕೊಂಡು ತರುತ್ತಿದ್ದವರನ್ನು ದರೋಡೆಕೋರರು ಅಡ್ಡಗಟ್ಟಿ ಅವರ ಕೈಯಲ್ಲಿದ್ದ ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಛತ್ತೀಸ್ ಗಢದ ರಾಯ್ ಗಢ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಎರಡು ಬೈಕುಗಳಲ್ಲಿ ಬಂದ ಮುಸುಕುಧಾರಿ ವ್ಯಕ್ತಿಗಳು ಕಟ್ಟಡ ನಿರ್ಮಾಣ ಗುತ್ತಿಗೆದಾರರ ಸಹಾಯಕರ ಕೈಯಲ್ಲಿದ್ದ ಈ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಇಲ್ಲಿನ ಖಾರ್ಸಿಯಾ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಶಾಖೆಯ ಎದುರೇ ಈ ಘಟನೆ ನಡೆದಿದೆ. ಕನ್ಹಯ್ಯಾ ರಾಥೋಡ್ ಎಂಬವರು ತನ್ನಿಬ್ಬರು ಸಹಾಯಕರಾದ ವಿಕಾಸ್ ರಾಥೋಡ್, ಅಂಗತ್ ರಾಮ್ ಹಾಗೂ ಕರ್ತಿಲ್ ರಾಮ್ ಅವರು ತಮ್ಮ ಮಾಲಕರ ಅಕೌಂಟಿನಿಂದ 13 ಲಕ್ಷ ರೂಪಾಯಿಗಳನ್ನು ಡ್ರಾ ಮಾಡಿಕೊಂಡು ತರುತ್ತಿದ್ದರು.
ಬ್ಯಾಂಕಿನ ಹೊರಭಾಗದಲ್ಲಿ ರಾಥೋಡ್ ಅವರ ಇನ್ನೊಬ್ಬ ಸಹಾಯಕ ಕಾರಿನಲ್ಲಿ ಕಾಯುತ್ತಿದ್ದಂತೆ ಬೈಕಿನಲ್ಲಿ ಆಗಮಿಸಿದ ದುಷ್ಕರ್ಮಿಗಳು ಹಣವಿದ್ದ ಬ್ಯಾಗನ್ನು ಲಪಟಾಯಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದರೋಡೆ ಘಟನೆಗೆ ಸಂಬಂಧಿಸಿದಂತೆ ಖಾರ್ಸಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರೋಡೆಕೋರರ ಪತ್ತೆಗಾಗಿ ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.