ಮೋದಿ ಪ್ರಮಾಣಕ್ಕೆ ಬಿಮ್‌ಸ್ಟೆಕ್ ಬಲ
Team Udayavani, May 28, 2019, 6:00 AM IST
ಹೊಸದಿಲ್ಲಿ: ಇದೇ 30ರಂದು ರಾತ್ರಿ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಈ ಬಾರಿ ಬಿಮ್‌ಸ್ಟೆಕ್ ಸದಸ್ಯ ರಾಷ್ಟ್ರಗಳ ಮುಖ್ಯಸ್ಥರಿಗೆ ಆಹ್ವಾನ ನೀಡಲಾಗಿದೆ. ಬಿಮ್‌ಸ್ಟೆಕ್‌ನಲ್ಲಿ ಬಾಂಗ್ಲಾದೇಶ, ಮ್ಯಾನ್ಮಾರ್, ಶ್ರೀಲಂಕಾ, ಥಾಯ್ಲೆಂಡ್, ನೇಪಾಲ, ಭೂತಾನ್, ಭಾರತವು ಸದಸ್ಯ ರಾಷ್ಟ್ರಗಳಾಗಿವೆ.
ಕೇಂದ್ರ ಸರಕಾರದ “ನೆರೆರಾಷ್ಟ್ರಗಳೇ ಮೊದಲು’ ಎಂಬ ನೀತಿಗೆ ಅನುಸಾರವಾಗಿ ಈ ರಾಷ್ಟ್ರಗಳ ನಾಯಕರನ್ನು ಪ್ರಧಾನಿ ಮೋದಿ, ಸಂಪುಟ ಸಚಿವರ ಪದಗ್ರಹಣ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಇವರಲ್ಲದೆ ಶಾಂಘೈ ಸಹಕಾರ ಸಂಸ್ಥೆಯ ಮುಖ್ಯಸ್ಥ, ಕಿರ್ಗಿಝ್ ರಿಪಬ್ಲಿಕ್‌ನ ಅಧ್ಯಕ್ಷರು, ಪ್ರಸಕ್ತ ವರ್ಷದ ಪ್ರವಾಸಿ ಭಾರತೀಯ ದಿವಸ್‌ನ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಾರಿಷಿಯಸ್ ಪ್ರಧಾನಮಂತ್ರಿಗೂ ಆಹ್ವಾನ ನೀಡಲಾಗಿದೆ ಎಂದು ಸರಕಾರದ ಅಧಿಕೃತ ವಕ್ತಾರರು ತಿಳಿಸಿದ್ದಾರೆ. 2014ರಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮೋದಿ ಪಾಕಿಸ್ಥಾನದ ಅಂದಿನ ಪ್ರಧಾನಿ ನವಾಜ್ ಶರೀಫ್ ಸಹಿತ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಿದ್ದರು.
ಹಸೀನಾ ಗೈರು?: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ವಿದೇಶ ಪ್ರವಾಸದಲ್ಲಿರುವ ಕಾರಣ, ಅವರು ಮೋದಿಯವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಲಾಗಿದೆ. ಅವರ ಬದಲಿಗೆ ಸಚಿವ ಎಕೆಎಂ ಮೊಜಮ್ಮಿಲ್ ಹಖ್ ಅವರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಕಳೆದ ಬಾರಿಯೂ ಹಸೀನಾ ಅವರು ವಿದೇಶ ಪ್ರವಾಸದ ನಿಮಿತ್ತ ಮೋದಿ ಪ್ರಮಾಣ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ.
ರಜನಿ, ಕಮಲ್‌ಗೂ ಆಹ್ವಾನ: ಈ ನಡುವೆ ತಮಿಳುನಾಡಿನ ಟಾಪ್ ಸಿನೆಮಾ ಸ್ಟಾರ್‌ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರಿಗೂ ಮೇ 30ರ ಕಾರ್ಯಕ್ರಮಕ್ಕೆ ಆಹ್ವಾನ ಒದಗಿ ಸಲಾಗಿದೆ. ಆದರೆ ಇವರಿಬ್ಬರೂ ಪಾಲ್ಗೊಳ್ಳುವುದು ಇನ್ನೂ ಖಚಿತವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.