ಬಯೋ ಟಾಯ್ಲೆಟ್ ಈಗ ಪಠ್ಯ; ಐಎಸ್‌ಬಿ ಮತ್ತು ರೈಲ್ವೇ ಇಲಾಖೆ ನಡುವೆ ಒಡಂಬಡಿಕೆ
Team Udayavani, Nov 23, 2020, 6:18 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಭಾರತೀಯ ರೈಲ್ವೇ ಕೋಚ್‌ಗಳಲ್ಲಿ ಬಳಕೆ ಮಾಡುವ ಜೈವಿಕ ಶೌಚಾಲಯ (ಬಯೋ ಟಾಯ್ಲೆಟ್) ಪ್ರಯೋಗ ಯಶಸ್ವಿಯಾಗಿದೆ. ಆ ಅಂಶವೇ ಈಗ ದೇಶದ ಪ್ರಮುಖ ಉದ್ಯಮಾಡಳಿತ ನಿರ್ವಹಣೆ ಕಾಲೇಜುಗಳಲ್ಲಿ ಪಠ್ಯಕ್ರಮವಾಗುತ್ತ ಸಾಗಿದೆ. ವಿಶೇಷವಾಗಿ ಹೈದರಾಬಾದ್‌ನಲ್ಲಿರುವ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್‌ಬಿ) ಭಾರತೀಯ ರೈಲ್ವೇಯ ಸಾಧನೆಯ ಅಂಶಗಳನ್ನು ಪಠ್ಯ ಕ್ರಮದಲ್ಲಿ ಅಳವಡಿಸುವ ಬಗ್ಗೆ ಆಸಕ್ತಿ ವಹಿಸಿ, ಸರಕಾರಿ ಸಂಸ್ಥೆಯ ಅನುಮತಿ ಕೋರಿತ್ತು. ಅದಕ್ಕೆ ರೈಲ್ವೇ ಇಲಾಖೆ ಸಹಮತ ವ್ಯಕ್ತಪಡಿಸಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಐಎಸ್‌ಬಿ ಮತ್ತು ಭಾರತೀಯ ರೈಲ್ವೇ ಇಲಾಖೆ ಒಪ್ಪಂದವೊಂದಕ್ಕೆ ಸಹಿ ಹಾಕಿವೆ. ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಯ ತಾಂತ್ರಿಕ ನೆರವು ಮತ್ತು ಇತರ ಖಾಸಗಿ ಸಂಸ್ಥೆಗಳ ಸಹಯೋಗದ ಜತೆಗೆ ರೈಲು ಕೋಚ್‌ಗಳಲ್ಲಿ ಬಯೋ ಟಾಯ್ಲೆಟ್ ಅನ್ನು ಅಳವಡಿಸಲಾಗಿತ್ತು. ಐಎಸ್‌ಬಿ ತನ್ನ ಪಠ್ಯ ಕ್ರಮದಲ್ಲಿ ಯೋಜನೆಯ ಸಾಧನೆಗಳು ಮತ್ತು ಅದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಬಳಕೆ ಮಾಡಲು ಅಧಿಕಾರ ಪಡೆದುಕೊಂಡಿದೆ.
2011ರಲ್ಲಿ ಜೈವಿಕ ಶೌಚಾಲಯದ ಮೊದಲ ಮಾದರಿಯನ್ನು ಗ್ವಾಲಿಯರ್‌ನಲ್ಲಿ ಅಳವಡಿಸಲಾಗಿತ್ತು. 2011 ರಿಂದ 2020ರ ಅವಧಿಯಲ್ಲಿ 68, 694 ಕೋಚ್‌ಗಳಲ್ಲಿ 2,45,775 ಇಂಥ ಮಾದರಿಯ ಟಾಯ್ಲೆಟ್‌ಗಳನ್ನು ಅಳವಡಿಸಿಕೊಳ್ಳಲಾಗಿದೆ. ಟಾಟಾ ಎನರ್ಜಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಟಿಆರ್‌ಐ) ಅದರ ಅಧ್ಯಯನ ನಡೆಸಿ ರೈಲ್ವೇ ಹಳಿಗಳನ್ನು ಶುಚಿಯಾಗಿ ಇರಿಸುವ ಕೆಲಸ ಹಗುರವಾಗಿದೆ ಮತ್ತು ಮಾನವರು ಮಲ ಹೊರುವ ಪದ್ಧತಿಯನ್ನು ಕಡಿಮೆಗೊಳಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಇದರ ಜತೆಗೆ ಪ್ರತೀ ದಿನ 5.4 ಮಿಲಿಯ ಲೀಟರ್ ನೀರಿನ ಉಳಿತಾಯವೂ ಆಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.