ಮಮತಾ ಬ್ಯಾನರ್ಜಿ ಬದುಕು ಆಧರಿತ ಚಿತ್ರ ಬಿಡುಗಡೆಗೆ ಬಿಜೆಪಿ ಆಕ್ಷೇಪ; ಚು.ಆ.ಕ್ಕೆ ದೂರು
Team Udayavani, Apr 17, 2019, 6:59 PM IST
ಕೋಲ್ಕತ : ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬದುಕನ್ನು ಆಧರಿಸಿದ ಚಿತ್ರಕಥೆಯನ್ನು ಹೊಂದಿದೆ ಎನ್ನಲಾಗಿರುವ ಸಿನೆಮಾದ ಬಿಡುಗಡೆಯನ್ನು ಆಕ್ಷೇಪಿಸಿ ಭಾರತೀಯ ಜನತಾ ಪಕ್ಷ ಇಂದು ಬುಧವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಮೋದಿ ಬಯೋಪಿಕ್ ಚಿತ್ರದ ಸಂದರ್ಭದಲ್ಲಿ ಕೈಗೊಳ್ಳಲಾದ ನಿರ್ಧಾರದಂತೆ ಮಮತಾ ಬ್ಯಾನರ್ಜಿ ಚಿತ್ರದ ಬಿಡುಗಡೆಗೆ ಮುನ್ನ ಚುನಾವಣಾ ಆಯೋಗ ಅದನ್ನು ವೀಕ್ಷಿಸಬೇಕು ಎಂದು ಪಶ್ಚಿಮ ಬಂಗಾಲದ ಬಿಜೆಪಿ ಘಟಕದ ಅಧ್ಯಕ್ಷ ಜಯ ಪ್ರಕಾಶ್ ಮಜುಮ್ದಾರ್ ಅವರು ತಮ್ಮ ದೂರು ಪತ್ರದಲ್ಲಿ ಹೇಳಿದ್ದಾರೆ.
ಹಾಲಿ ಲೋಕಸಭಾ ಚುನಾವಣೆಯ ಋತುವಿನ ನಡುವೆಯೇ ಮೇ 3ರಂದು ಮಮತಾ ಬ್ಯಾನರ್ಜಿ ಅವರ ಹೋರಾಟದ ಬದುಕನ್ನು ಆಧರಿಸಿದ ಭಗಿನೀ ಎಂಬ ಹೆಸರಿನ ಬಂಗಾಲೀ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರದ ನಿರ್ಮಾಪಕ ಮತ್ತು ನಿರ್ದೇಶಕರು ತಾವು ಕೇವಲ ಮಮತಾ ಬ್ಯಾನರ್ಜಿ ಅವರ ಹೋರಾಟಮಯ ಬದುಕಿನಿಂದ ಪ್ರೇರಿತರಾಗಿ ಈ ಚಿತ್ರವನ್ನು ಮಾಡಿರುವುದಾಗಿ ಹೇಳಿದ್ದಾರೆ.
ಹಾಗಿದ್ದರೂ ಟಿಎಂಸಿ ಯ ಅನೇಕ ಎದುರಾಳಿಗಳು ಈ ಚಿತ್ರ ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ಬಿಡುಗಡೆಯಾಗುವುದನ್ನು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್ಎಫ್ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
ICC ಚಾಂಪಿಯನ್ಸ್ ಟ್ರೋಫಿ ಪಾಕ್ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.