ಹಕ್ಕಿ ಜ್ವರ ಹಿನ್ನೆಲೆ : ಅಲರ್ಟ್ ಆಗಿರಲು ಮೋದಿ ಸಲಹೆ
Team Udayavani, Jan 12, 2021, 2:13 AM IST
ಹೊಸದಿಲ್ಲಿ: ದೇಶದ ಹಲವು ಭಾಗಗಳಲ್ಲಿ ಹಕ್ಕಿಜ್ವರವು ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಅಲರ್ಟ್ ಆಗಿರುವಂತೆ ಎಲ್ಲ ರಾಜ್ಯ ಸರಕಾರಗಳಿಗೂ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಜತೆಗೆ, ಜಲಮೂಲಗಳು, ಪ್ರಾಣಿ ಸಂಗ್ರಹಾಲ ಯಗಳು ಹಾಗೂ ಪೌಲಿó ಫಾರ್ಮ್ಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸ್ಥಳೀಯಾಡಳಿತಗಳಿಗೆ ಸೂಚಿಸಿದ್ದಾರೆ.
ಎಲ್ಲ ರಾಜ್ಯ ಸರಕಾರಗಳೂ ತಮ್ಮ ಮುಖ್ಯ ಕಾರ್ಯ ದರ್ಶಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮಾರ್ಗದರ್ಶನ ನೀಡಬೇಕು. ಹಕ್ಕಿಜ್ವರದ ಸಮಸ್ಯೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅರಣ್ಯ, ಆರೋಗ್ಯ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯತೆಯಿದ್ದರೆ ಈ ಸವಾಲನ್ನು ಆದಷ್ಟು ಬೇಗನೆ ಮೆಟ್ಟಿ ನಿಲ್ಲಲು ಸಾಧ್ಯವಿದೆ ಎಂದೂ ಮೋದಿ ಹೇಳಿದ್ದಾರೆ.
10 ರಾಜ್ಯಗಳಲ್ಲಿ ಸೋಂಕು: ಸೋಮವಾರ ದಿಲ್ಲಿ, ಉತ್ತರಾಖಂಡ ಮತ್ತು ಮಹಾರಾಷ್ಟ್ರಗಳಲ್ಲಿ ಹಕ್ಕಿಜ್ವರ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಸೋಂಕು ಹಬ್ಬಿದ ರಾಜ್ಯಗಳ ಸಂಖ್ಯೆ 10ಕ್ಕೇರಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಹಕ್ಕಿಜ್ವರ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಮತ್ತು ತಪ್ಪು ಮಾಹಿತಿ ಹರಿದಾಡದಂತೆ ಕ್ರಮ ಕೈಗೊಳ್ಳಿ ಎಂದೂ ಸರಕಾರ ರಾಜ್ಯಗಳಿಗೆ ಸಲಹೆ ನೀಡಿದೆ. ಜತೆಗೆ, ಹಕ್ಕಿಗಳನ್ನು ಕೊಲ್ಲುವ ಸಿಬ್ಬಂದಿಗೆ ಅಗತ್ಯ ಪಿಪಿಇ ಕಿಟ್‌ಗಳು ಹಾಗೂ ಇತರೆ ಪರಿಕರಗಳು ದಾಸ್ತಾನಿರುವಂತೆ ನೋಡಿ ಕೊಳ್ಳಿ ಎಂದೂ ಹೇಳಿದೆ.
8 ಸ್ಯಾಂಪಲ್‌ಗಳೂ ಪಾಸಿಟಿವ್: ದಿಲ್ಲಿಯಲ್ಲಿ ಹಕ್ಕಿಜ್ವರದ ಅನುಮಾನದ ಮೇರೆಗೆ ಭೋಪಾಲ್‌ನ ಪ್ರಯೋಗಾಲ ಯಕ್ಕೆ ಕಳುಹಿಸಿದ್ದ ಎಲ್ಲ 8 ಮಾದರಿಗಳ ವರದಿಯೂ ಪಾಸಿಟಿವ್ ಎಂದು ಬಂದಿದೆ. ಈ ಹಿನ್ನೆಲೆಯಲ್ಲಿ ಬಾತುಕೋಳಿಗಳನ್ನು ವಧಿಸುವ ಪ್ರಕ್ರಿಯೆ ಆರಂಭಿಸ ಲಾಗಿದೆ. ಸಂಜಯ್ ಲೇಕ್ ಅನ್ನು ಮುಚ್ಚಲಾಗಿದೆ. ಬೇರೆ ನಗರಗಳಿಂದ ಸಂಸ್ಕರಿತ ಮತ್ತು ಪ್ಯಾಕ್ ಮಾಡಿರುವ ಕೋಳಿ ಮಾಂಸವನ್ನು ದಿಲ್ಲಿಗೆ ತರುವುದಕ್ಕೆ ನಿಷೇಧ ಹೇರಿ ದಿಲ್ಲಿ ಸರಕಾರ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.