Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್
ಬಿಜೆಪಿ ಯೂಸ್ ಅಂಡ್ ಥ್ರೋ ತಂತ್ರವನ್ನು ಅನುಸರಿಸುತ್ತಿದೆ...ಮುಂದಿನ ಗುರಿಯೇ ಶಿಂಧೆ
Team Udayavani, Sep 23, 2024, 9:32 PM IST
ಮುಂಬಯಿ: ”ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಮಹಾಯುತಿ ಮೈತ್ರಿಯಿಂದ ಹೊರಹಾಕಲು ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿವೆ” ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಸೋಮವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್ ”ಬಿಜೆಪಿ ಯೂಸ್ ಅಂಡ್ ಥ್ರೋ ತಂತ್ರವನ್ನು ಅನುಸರಿಸುತ್ತಿದೆ. ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಹೊರಹಾಕಲು ಬಿಜೆಪಿ ಮತ್ತು ಶಿಂಧೆ ನೇತೃತ್ವದ ಶಿವಸೇನೆ ವ್ಯವಸ್ಥಿತವಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಬಿಜೆಪಿಯ ಮುಂದಿನ ಗುರಿ ನಿಮ್ಮ ನೇತೃತ್ವದ ಶಿವಸೇನೆಯಾಗಿರಬಹುದು ಎಂಬುದನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು.
ಮಹಾಯುತಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಎನ್‌ಸಿಪಿ(ಅಜಿತ್ ಪವಾರ್) ಪಕ್ಷಗಳು ರಾವುತ್ ಅವರ ಆರೋಪಗಳನ್ನು ತಳ್ಳಿಹಾಕಿದ್ದು, ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ನಾಯಕರು ಸೋಲಿನ ಭೀತಿಯಿಂದ ಅಭದ್ರತೆಯಿಂದ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಹೇಳಿವೆ.
ಎನ್‌ಸಿಪಿ(ಅಜಿತ್ ಪವಾರ್) ರಾಜ್ಯ ಘಟಕದ ಅಧ್ಯಕ್ಷ ಸುನೀಲ್ ತಟ್ಕರೆ ರಾವುತ್ ಅವರ ಹೇಳಿಕೆಯನ್ನು ಅಲ್ಲಗಳೆದಿದ್ದು, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಏಕೀಕೃತ ಮೈತ್ರಿಯಾಗಿ ಚುನಾವಣೆಯನ್ನು ಎದುರಿಸಲಿವೆ. ಈ ವದಂತಿಗಳನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.